ಹಾರ್ಮುಜ್ ಜಲಸಂಧಿ (ಸಾಂದರ್ಭಿಕ ಚಿತ್ರ) 
ವಿದೇಶ

ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಕೆ; ಅಮೆರಿಕ ಹೇಳಿದ್ದೇನು?

ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಸಾಗಣೆ ನಡೆಯುವ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚುತ್ತಿರುವುದಾಗಿ ಐಆರ್‌ಜಿಸಿ ಘೋಷಿಸಿದೆ.

ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಯಲ್ಲಿ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾದ ಬಳಿಕ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಮಂಗಳವಾರ ತೀವ್ರಗೊಂಡಿದೆ. ಇದಕ್ಕೆ ಪ್ರತಿಕಾರವಾಗಿ ಟೆಹ್ರಾನ್, ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿಗಳನ್ನು ಮುಂದುವರೆಸಿದೆ.

ಯುಎಸ್ ರಾಯಭಾರ ಕಚೇರಿ ಮೇಲೆ ದಾಳಿ

ರಿಯಾದ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಮೇಲೆ ಎರಡು ಡ್ರೋನ್‌ಗಳು ದಾಳಿ ನಡೆಸಿದ್ದರಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಸಣ್ಣಪುಟ್ಟ ಹಾನಿಯಾಗಿದೆ ಎಂದು ಸೌದಿ ರಕ್ಷಣಾ ಸಚಿವಾಲಯ ತಿಳಿಸಿದೆ. ಈ ದಾಳಿಯ ನಂತರ ಸೌದಿಯಲ್ಲಿನ ಎಲ್ಲ ಕಾನ್ಸುಲರ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಅಮೆರಿಕ ರಾಯಭಾರ ಕಚೇರಿ ಘೋಷಿಸಿದೆ.

ಅಮೆರಿಕದ ನೆಲೆಗಳ ಮೇಲೆ ದಾಳಿ ಮುಂದುವರಿಸಿದ ಇರಾನ್

ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗಳು (IRGC) ಬಹ್ರೇನ್‌ನಲ್ಲಿರುವ ಅಮೆರಿಕದ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ ಎಂದು IRNA ಸುದ್ದಿ ಸಂಸ್ಥೆ ತಿಳಿಸಿದೆ. ಕತಾರ್‌ನಲ್ಲಿ, ಮಂಗಳವಾರ ಮುಂಜಾನೆ ಸೇನೆಯು ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆಹಿಡಿದಿದೆ.

ಹಾರ್ಮುಜ್ ಜಲಸಂಧಿ ಬಂದ್

ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಸಾಗಣೆ ನಡೆಯುವ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚುತ್ತಿರುವುದಾಗಿ ಐಆರ್‌ಜಿಸಿ ಘೋಷಿಸಿದೆ. ಅಲ್ಲದೆ, ಅದರ ಮೂಲಕ ಹಾದುಹೋಗಲು ಪ್ರಯತ್ನಿಸುವ ಯಾವುದೇ ಹಡಗಿನ ಮೇಲೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಇರಾನ್‌ನಲ್ಲಿರುವ ಐಆರ್‌ಜಿಸಿ ಆಸ್ತಿಗಳು ನಾಶ

ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿಯನ್ನು ಮುಂದುವರಿಸಿದ್ದು, ಇರಾನ್‌ನ ರೆವಲ್ಯೂಷನರಿ ಗಾರ್ಡ್‌ಗಳ ಕಮಾಂಡ್ ಪೋಸ್ಟ್‌ಗಳು ಹಾಗೂ ಇರಾನ್‌ನ ವಾಯು ರಕ್ಷಣಾ ಮತ್ತು ಕ್ಷಿಪಣಿ ಉಡಾವಣಾ ತಾಣಗಳನ್ನು ನಾಶಪಡಿಸಲಾಗಿದೆ ಎಂದು ಅಮೆರಿಕ ಸೇನೆ ತಿಳಿಸಿದೆ.

ಸಾವಿನ ಸಂಖ್ಯೆ ಏರಿಕೆ

ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ 600ಕ್ಕಿಂತ ಹೆಚ್ಚಾಗಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಶನಿವಾರ ಮಿನಾಬ್‌ನಲ್ಲಿರುವ ಪ್ರಾಥಮಿಕ ಬಾಲಕಿಯರ ಶಾಲೆ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 160ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸಾವಿಗೀಡಾಗಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್ ನಡೆಸಿದ ಪ್ರತೀಕಾರದ ದಾಳಿಯಲ್ಲಿ ಇದುವರೆಗೆ ಹತ್ತು ಇಸ್ರೇಲಿಗಳು ಮತ್ತು ಆರು ಯುಎಸ್ ಮಿಲಿಟರಿ ಸಿಬ್ಬಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

ಇರಾಕ್‌ನಲ್ಲಿ US ಪಡೆ ತಂಗಿದ್ದ ಹೋಟೆಲ್ ಮೇಲೆ ಇರಾನ್ ಬೆಂಬಲಿತ ಗುಂಪು ದಾಳಿ!

ಅಂತಾರಾಷ್ಟ್ರೀಯ ವಾಯುಪ್ರದೇಶ ಬಂದ್: ಭಾರತದಲ್ಲೇ ಸಿಲುಕಿದ ವೆಸ್ಟ್ ಇಂಡೀಸ್, ಜಿಂಬಾಬ್ವೆ ಕ್ರಿಕೆಟ್ ತಂಡ!

ದುಬೈನಲ್ಲಿ ಇರಾನ್ ಡಬಲ್ ಸ್ಟ್ರೈಕ್: US ಆರ್ಮಿ ಕಟ್ಟಡ, ಆಸ್ಟ್ರೇಲಿಯಾದ ವಾಯುನೆಲೆ ಮೇಲೆ ದಾಳಿ!

SCROLL FOR NEXT