ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ 
ವಿದೇಶ

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iran

ಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.

ಟೆಹ್ರಾನ್: ಇರಾನ್-ಇಸ್ರೇಲ್ ಅಮೆರಿಕ ಸಂಘರ್ಷ ಮುಂದುವರೆದಿರುವಂತೆಯೇ ಅಚ್ಚರಿ ಬೆಳವಣಿಗೆಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ (Masoud Pezeshkian) ನೆರೆಯ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ್ದಾರೆ.

ಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.

ನೆರೆಹೊರೆಯವರಿಗೆ 'ಕ್ಷಮಿಸಿ' ಎಂದು ಮಸೌದ್ ಪೆಜೆಶ್ಕಿಯಾನ್ ಹೇಳಿದ್ದು,ಆ ಮೂಲಕ ಅಮೆರಿಕ-ಇಸ್ರೇಲ್ ಜೊತೆಗಿನ ಯುದ್ಧದ ಮಧ್ಯೆ ಉದ್ವಿಗ್ನತೆಯನ್ನು ಶಮನಗೊಳಿಸಲು ಮೊದಲ ಪ್ರಮುಖ ಹೆಜ್ಜೆ ಇಟ್ಟಿದೆ.

ನಿಮ್ಮ ನೆಲದಿಂದ ನಮ್ಮ ಮೇಲೆ ದಾಳಿಯಾಗದ ಹೊರತು ನಾವು ದಾಳಿ ಮಾಡಲ್ಲ

ಹಾಲಿ ಸಂಘರ್ಷ ಉಲ್ಬಣವನ್ನು ಶಮನಗೊಳಿಸುವ ಮೊದಲ ಪ್ರಮುಖ ಹೆಜ್ಜೆಯನ್ನು ಇರಾನ್ ಇಟ್ಟಿದ್ದು, ಇರಾನ್ ಮೇಲಿನ ದಾಳಿಯು ಅವರ ಪ್ರದೇಶದಿಂದ ಹುಟ್ಟಿಕೊಳ್ಳದ ಹೊರತು ಟೆಹ್ರಾನ್ ನೆರೆಯ ರಾಷ್ಟ್ರಗಳ ವಿರುದ್ಧ ಕ್ಷಿಪಣಿ ದಾಳಿ ಅಥವಾ ವೈಮಾನಿಕ ದಾಳಿಗಳನ್ನು ನಡೆಸುವುದಿಲ್ಲ ಎಂದು ದೇಶದ ಮಧ್ಯಂತರ ನಾಯಕತ್ವ ಮಂಡಳಿಯ ಪ್ರಮುಖರೂ ಆಗಿರುವ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ

ಅಂತೆಯೇ ಇರಾನ್ ಮೇಲೆ ದಾಳಿ ಮಾಡಿ ತಮ್ಮ ಸರ್ವೋಚ್ಛ ನಾಯಕ ಖಮೆನಿ ಹತ್ಯೆ ಮಾಡಿದ ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ತಮ್ಮ ದೇಶವು ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಶರಣಾಗುವುದಿಲ್ಲ ಎಂದೂ ಮಸೌದ್ ಪೆಜೆಶ್ಕಿಯಾನ್ ಕಿಡಿಕಾರಿದ್ದಾರೆ.

"ಇರಾನ್ ಜನರ ಶರಣಾಗತಿಯ ಆಶಯವನ್ನು ಶತ್ರುಗಳು ತಮ್ಮ ಸಮಾಧಿಗೆ ಕೊಂಡೊಯ್ಯಬೇಕು" ಎಂದು ಪೆಜೆಶ್ಕಿಯಾನ್ ರಾಜ್ಯ ಟಿವಿಯಲ್ಲಿ ಪ್ರಸಾರವಾದ ಭಾಷಣದಲ್ಲಿ ಹೇಳಿರುವುದಾಗಿ AFP ವರದಿ ಮಾಡಿದೆ.

ರಾಯಿಟರ್ಸ್ ಮತ್ತು ಎಎಫ್‌ಪಿ ಸುದ್ದಿ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳು ವರದಿ ಮಾಡಿರುವ ಈ ಹೇಳಿಕೆಯು, ಕಳೆದ ವಾರಾಂತ್ಯದಲ್ಲಿ ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಿಂದ ಉಂಟಾದ ಸಂಘರ್ಷದ ಮಧ್ಯೆ ಪ್ರಾದೇಶಿಕ ಉದ್ವಿಗ್ನತೆಯನ್ನು ಶಮನಗೊಳಿಸಲು ಟೆಹ್ರಾನ್ ಮಾಡಿದ ಸಂಭಾವ್ಯ ಪ್ರಯತ್ನವನ್ನು ಸೂಚಿಸುತ್ತದೆ ಎಂದು ಹೇಳಲಾಗಿದೆ.

ನೆರೆಹೊರೆ ರಾಷ್ಟ್ರಗಳ ಮೇಲಿನ ದಾಳಿ ಸ್ಥಗಿತಕ್ಕೆ ಸೂಚನೆ

ಅಂತೆಯೇ ಈ ಮಹತ್ವದ ಸಭೆಯಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಶನಿವಾರ ತನ್ನ ತಾತ್ಕಾಲಿಕ ನಾಯಕತ್ವ ಮಂಡಳಿಯು ನೆರೆಹೊರೆ ರಾಷ್ಟ್ರಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಸ್ಥಗಿತಗೊಳಿಸಲು ಅನುಮೋದನೆ ನೀಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!