ಇರಾನ್-ಇಸ್ರೇಲ್ ಸಂಘರ್ಷ 
ವಿದೇಶ

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ; ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಇರಾನ್ ಕೂಡ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಇಸ್ರೇಲ್ ಮೇಲೆ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಶನಿವಾರ ಭಾರೀ ಸ್ಫೋಟಗಳು ಸಂಭವಿಸಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಸರಣಿ ದಾಳಿಯಿಂದಾಗಿ ಹಲವೆಡೆ ದಟ್ಟ ಹೊಗೆ ಆವರಿಸಿರುವ ದೃಶ್ಯಗಳು ಕಂಡುಬಂದಿದೆ.

ಟೆಹ್ರಾನ್‌ನ ಪ್ರಮುಖ ವಿಮಾನ ನಿಲ್ದಾಣವಾದ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೂ ದಾಳಿಯಾಗಿದ್ದು, ಅಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವು ವಿಮಾನಗಳಿಗೆ ಹಾನಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ಕೂಡ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಇಸ್ರೇಲ್ ಮೇಲೆ ನಡೆಸಿರುವುದಾಗಿ ವರದಿಯಾಗಿದೆ. ಇದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಅದೇ ವೇಳೆ ಅಮೆರಿಕಾದ ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಬಾಂಬ್ ದಾಳಿಗಳು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂಘರ್ಷವು ಈಗಾಗಲೇ ಒಂದು ವಾರಕ್ಕಿಂತ ಹೆಚ್ಚು ಕಾಲ ಮುಂದುವರಿದಿದ್ದು, ಹಲವಾರು ದೇಶಗಳಿಗೆ ವ್ಯಾಪಿಸುವ ಭೀತಿ ವ್ಯಕ್ತವಾಗಿದೆ.

ಫೆಬ್ರವರಿ 28ರಂದು ಇಸ್ರೇಲ್ ಮತ್ತು ಅಮೆರಿಕಾ ಸಂಯುಕ್ತವಾಗಿ ಇರಾನ್‌ನ ಹಲವು ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದರಿಂದ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಎರಡೂ ದೇಶಗಳು ಪರಸ್ಪರ ಕ್ಷಿಪಣಿ ಹಾಗೂ ವಾಯುದಾಳಿಗಳನ್ನು ನಡೆಸುತ್ತಿವೆ.

ಇದರ ನಡುವೆ ಇರಾನ್ ಕೂಡ ಹಲವು ದೇಶಗಳಲ್ಲಿರುವ ಅಮೆರಿಕಾ ತಾಣಗಳು ಮತ್ತು ಮಿತ್ರ ರಾಷ್ಟ್ರಗಳ ಮೇಲೂ ದಾಳಿ ನಡೆಸಿರುವ ವರದಿಗಳು ಹೊರಬಂದಿದ್ದು, ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧ ಸಂಭವಿಸುವ ಆತಂಕವನ್ನು ಜಾಗತಿಕ ಸಮುದಾಯ ವ್ಯಕ್ತಪಡಿಸಿದೆ.

ಈ ಸಂಘರ್ಷದಿಂದ ಜಾಗತಿಕ ರಾಜಕೀಯ ಹಾಗೂ ತೈಲ ಮಾರುಕಟ್ಟೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಹಲವು ರಾಷ್ಟ್ರಗಳು ತಕ್ಷಣ ಶಾಂತಿ ಮಾತುಕತೆ ನಡೆಸುವಂತೆ ಕರೆ ನೀಡಿವೆ.

12,000 ಬಾಂಬ್ ಕೇಸಿಂಗ್‌ ತುರ್ತು ಮಾರಾಟಕ್ಕೆ ಅಮೆರಿಕ ಒಪ್ಪಿಗೆ

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಇರಾನ್ ಮತ್ತು ಯುಎಸ್ ನಡುವಿನ ಯುದ್ಧ ತೀವ್ರಗೊಳ್ಳುತ್ತಿದ್ದಂತೆ, ಇಸ್ರೇಲ್‌ಗೆ ಸುಮಾರು 151.8 ಮಿಲಿಯನ್ ಡಾಲರ್ ಮೌಲ್ಯದ 12,000 ಸಾವಿರ ಪೌಂಡ್ ಬಾಂಬ್ ಕೇಸಿಂಗ್‌ಗಳ "ತುರ್ತು" ಮಾರಾಟಕ್ಕೆ ಅಮೆರಿಕ ವಿದೇಶಾಂಗ ಇಲಾಖೆ ಅನುಮೋದನೆ ನೀಡಿದೆ.

ಶಸ್ತ್ರಾಸ್ತ್ರ ರಫ್ತು ನಿಯಂತ್ರಣ ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳನ್ನು ಉಲ್ಲೇಖಿಸಿ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅನುಮತಿ ನೀಡಿದ್ದಾರೆಂದು ತಿಳಿದುಬಂದಿದೆ.

ತಪ್ಪು ಅಂದಾಜು ಬೇಡ: ಇರಾನ್‌ಗೆ ಸೌದಿ ಎಚ್ಚರಿಕೆ

ಸೌದಿ ಅರೇಬಿಯಾದ ಮೇಲೆ ನಡೆದಿರುವ ಕ್ಷಿಪಣಿ ಮತ್ತು ಡ್ರೋನ್ ದಾಳಿಗೆ ಸೌದಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಪ್ಪು ಅಂದಾಜು ಬೇಡ ಎಂದ ಎಚ್ಚರಿಕೆ ನೀಡಿದೆ.

ಶನಿವಾರ ಸೌದಿ ಅರೇಬಿಯಾದ ರಕ್ಷಣಾ ಸಚಿವ ಪ್ರಿನ್ಸ್ ಖಾಲಿದ್ ಬಿನ್ ಸಲ್ಮಾನ್ ಅವರು, ಪಾಕಿಸ್ತಾನ ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಸೌದಿ ಅರೇಬಿಯಾದ ಮೇಲೆ ನಡೆದಿರುವ ಇರಾನ್ ದಾಳಿಗಳ ಬಗ್ಗೆ ಹಾಗೂ ಅವನ್ನು ತಡೆಯಲು ಅಗತ್ಯವಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದೆವು. ಇಂತಹ ದಾಳಿಗಳು ಪ್ರದೇಶದ ಭದ್ರತೆ ಮತ್ತು ಸ್ಥಿರತೆಯನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದ್ದಾರೆ.

ಇದೇ ವೇಳೆ ಬುದ್ಧಿವಂತಿಕೆಯಿಂದ ವರ್ತಿಸಿ, ಯಾವುದೇ ತಪ್ಪು ಅಂದಾಜು ಮಾಡಬೇಡಿ ಎಂದೂ ಇರಾನ್'ಗೆ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!