ಇರಾನ್ ದೇಶದ ನೂತನ ಪರಮೋಚ್ಛ ನಾಯಕ ಮೊಜ್ತಬಾ ಖಮೇನಿ 
ವಿದೇಶ

West Asia conflict: ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿ ಕಾಲು ಕಟ್; ಕೋಮಾ ಸ್ಥಿತಿಯಲ್ಲಿ ಇರಾನ್ ನೂತನ ಪರಮೋಚ್ಛ ನಾಯಕ..?

ಗಂಭೀರ ಗಾಯಗಳ ಹಿನ್ನೆಲೆಯಲ್ಲಿ ಮೊಜ್ತಬಾ ಖಮೇನಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ತೀವ್ರ ಗಾಯಗಳಿಂದ ಅವರು ಕೋಮಾಗೆ ಜಾರಿದ್ದಾರೆಂದು ಹೇಳಲಾಗುತ್ತಿದೆ.

ಇರಾನ್: ಇಡೀ ವಿಶ್ವವನ್ನೇ ಅಲ್ಲಾಡಿಸಿರುವ ಅಮೆರಿಕಾ-ಇರಾನ್-ಇಸ್ರೇಲ್ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ. ಇರಾನ್ ದೇಶದ ನೂತನ ಪರಮೋಚ್ಛ ನಾಯಕ ಮೊಜ್ತಬಾ ಖಮೇನಿಯ ಮೇಲೂ ವಾಯು ದಾಳಿಯಾಗಿದೆ ಎಂದು ಹೇಳಲಾಗುತ್ತಿದೆ.

ದಾಳಿಯಲ್ಲಿ ಮೊಜ್ತಬಾ ಖಮೇನಿ ಒಂದು ಕಾಲು ಕಟ್ ಆಗಿದ್ದು, ಕೋಮಾ ಸ್ಥಿತಿಗೆ ಜಾರಿದ್ದಾರೆಂದು ಹೇಳಲಾಗುತ್ತಿದೆ.

ವರದಿಗಳ ಪ್ರಕಾರ ಟೆಹ್ರಾನ್‌ನಲ್ಲಿ ನಡೆದ ಭಾರೀ ವೈಮಾನಿಕ ದಾಳಿಯ ವೇಳೆ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕೆಲವು ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಗಂಭೀರ ಗಾಯಗಳ ಹಿನ್ನೆಲೆಯಲ್ಲಿ ಮೊಜ್ತಬಾ ಖಮೇನಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ತೀವ್ರ ಗಾಯಗಳಿಂದ ಅವರು ಕೋಮಾಗೆ ಜಾರಿದ್ದಾರೆಂದು ಹೇಳಲಾಗುತ್ತಿದೆ.

ಆದರೆ, ಇರಾನ್ ಸರ್ಕಾರ ಹಾಗೂ ಅಧಿಕಾರಿಗಳು ಈ ಎಲ್ಲ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಮೊಜ್ತಬಾ ಖಮೇನಿ ಸುರಕ್ಷಿತರಾಗಿದ್ದು, ದೇಶದ ಆಡಳಿತ ಹಾಗೂ ನಿರ್ಧಾರಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ಸುಳ್ಳು ಎಂದು ಹೇಳಿದ್ದಾರೆ.

ಇರಾನ್ ಸರ್ಕಾರ ಸ್ಪಷ್ಟನೆ ನೀಡಿದ್ದರು, ಮೊಜ್ತಬಾ ಖಮೇನಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಅವರ ಸಂದೇಶವನ್ನು ಸ್ವತಃ ನೀಡದೆ, ಸರ್ಕಾರದ ಮಾಧ್ಯಮದ ಮೂಲಕ ಪ್ರಕಟಿಸಿರುವುದೂ ಈ ವದಂತಿಗಳಿಗೆ ಮತ್ತಷ್ಟು ಇಂಬು ನೀಡುತ್ತಿವೆ.

ಮೊಜ್ತಬಾ ಖಮೇನಿ ಕಾಲು ಕಳೆದುಕೊಂಡಿದ್ದಾರೆ ಮತ್ತು ಕೋಮಾದಲ್ಲಿದ್ದಾರೆ ಎಂಬ ವರದಿಗಳು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದರೂ, ಈ ಮಾಹಿತಿಯನ್ನು ಇರಾನ್ ಸರ್ಕಾರ ದೃಢಪಡಿಸಿಲ್ಲ. ಅವರ ಆರೋಗ್ಯದ ನಿಖರ ಸ್ಥಿತಿ ಕುರಿತು ಸ್ಪಷ್ಟ ಮಾಹಿತಿ ಇನ್ನೂ ಹೊರಬರಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

SCROLL FOR NEXT