ಇಸ್ರೇಲ್-ಇರಾನ್ ಸಂಘರ್ಷ 
ವಿದೇಶ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ 'ಸೋಲೋ ಆಪರೇಷನ್; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಈ ದಾಳಿಯ ಬಗ್ಗೆ ಇಸ್ರೇಲ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣವಾಗಿ ‘ಸೋಲೋ ಆಪರೇಷನ್’ ಆಗಿದ್ದು, ಅಮೆರಿಕಾದ ಯಾವುದೇ ಪಾತ್ರ ಇಲ್ಲ ಎಂದು ತಿಳಿಸಿದೆ.

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ತೀವ್ರತೆ ಹೆಚ್ಚುತ್ತಿರುವ ನಡುವೆಯೇ, ಇರಾನ್‌ನ ಪ್ರಮುಖ ಗ್ಯಾಸ್ ಫೀಲ್ಡ್ ಮೇಲೆ ನಡೆದ ದಾಳಿ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ದಾಳಿಯ ಬಗ್ಗೆ ಇಸ್ರೇಲ್ ಸರ್ಕಾರ ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣವಾಗಿ ‘ಸೋಲೋ ಆಪರೇಷನ್’ ಆಗಿದ್ದು, ಅಮೆರಿಕಾದ ಯಾವುದೇ ಪಾತ್ರ ಇಲ್ಲ ಎಂದು ತಿಳಿಸಿದೆ.

ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಹೇಳಿಕೆ ನೀಡಿದ್ದು, “ಇಸ್ರೇಲ್ ತನ್ನ ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಸ್ವತಂತ್ರವಾಗಿ ಈ ಕ್ರಮ ಕೈಗೊಂಡಿದೆ. ಈ ದಾಳಿಯಲ್ಲಿ ಅಮೆರಿಕ ಭಾಗವಹಿಸಿಲ್ಲ ಮತ್ತು ಯಾವುದೇ ರೀತಿಯ ಒತ್ತಡವೂ ಇರಲಿಲ್ಲ ಎಂದು ತಿಳಿಸಿದ್ದಾರೆ.

ಇಸ್ರೇಲ್ ಇರಾನ್‌ನ ಸೌತ್ ಪಾರ್ಸ್ (South Pars) ಗ್ಯಾಸ್ ಫೀಲ್ಡ್ ಮೇಲೆ ದಾಳಿ ನಡೆಸಿದೆ. ಇದು ವಿಶ್ವದ ಅತಿದೊಡ್ಡ ನೈಸರ್ಗಿಕ ಅನಿಲ ಸಂಗ್ರಹಣಾ ಪ್ರದೇಶಗಳಲ್ಲಿ ಒಂದಾಗಿದ್ದು, ಇರಾನ್‌ನ ಆರ್ಥಿಕತೆಗೆ ಪ್ರಮುಖ ಆಧಾರವಾಗಿದೆ.

ಈ ಪ್ರಮುಖ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ, ಇರಾನ್‌ಗೆ ಆರ್ಥಿಕ ಹಾಗೂ ತಾಂತ್ರಿಕ ಹೊಡೆತ ಬಿದ್ದಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದಕ್ಕೆ ಪ್ರತಿಯಾಗಿ ಇರಾನ್ ತೀವ್ರ ಪ್ರತಿಕ್ರಿಯೆ ನೀಡಿದ್ದು, ಗಲ್ಫ್ ಪ್ರದೇಶದ ಕೆಲವು ಎನರ್ಜಿ ಸೌಲಭ್ಯಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ ಎನ್ನಲಾಗಿದೆ.

ಈ ಕ್ರಮದಿಂದಾಗಿ ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಯುದ್ಧವು ಮತ್ತಷ್ಟು ತೀವ್ರಗೊಳ್ಳುವ ಭೀತಿ ಎದುರಾಗಿದೆ. ಇರಾನ್ ಈಗ “ಯಾವುದೇ ದಾಳಿಗೂ ತೀವ್ರ ಪ್ರತಿದಾಳಿ” ಎಂಬ ಎಚ್ಚರಿಕೆಯನ್ನು ನೀಡಿದೆ.

ಈ ಬೆಳವಣಿಗೆಗಳು ಜಾಗತಿಕ ಮಟ್ಟದಲ್ಲಿಯೂ ದೊಡ್ಡ ಪರಿಣಾಮ ಬೀರಿವೆ. ತೈಲ ಮತ್ತು ಅನಿಲದ ಬೆಲೆಗಳು ಏರಿಕೆಯಾಗಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಗಳು ಅಸ್ಥಿರತೆಯನ್ನು ಎದುರಿಸುತ್ತಿವೆ.

ವಿಶೇಷವಾಗಿ, ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ Strait of Hormuz ಪ್ರದೇಶದಲ್ಲಿ ಭದ್ರತೆ ಬಗ್ಗೆ ಆತಂಕ ಹೆಚ್ಚಾಗಿದೆ. ಇಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಜಾಗತಿಕ ಇಂಧನ ಸರಬರಾಜಿನ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದರ ನಡುವೆ, ಅಮೆರಿಕವೂ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಈ ದಾಳಿಯಲ್ಲಿ ತನ್ನ ನೇರ ಪಾತ್ರ ಇಲ್ಲ ಎಂದು ತಿಳಿಸಿದೆ.

ಇಸ್ರೇಲ್‌ನ ಆಪ್ತ ಮಿತ್ರರಾಗಿರುವ ಅಮೆರಿಕ, ಈ ಸಂದರ್ಭದಲ್ಲೂ ನೇರವಾಗಿ ತೊಡಗಿಸಿಕೊಳ್ಳದಿರುವುದು ಅಂತರರಾಷ್ಟ್ರೀಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಒಟ್ಟಾರೆ, ಇಸ್ರೇಲ್-ಇರಾನ್ ನಡುವಿನ ಈ ಸಂಘರ್ಷವು ಈಗ ಪ್ರಾದೇಶಿಕ ಸಮಸ್ಯೆಯಷ್ಟೇ ಅಲ್ಲದೆ, ಜಾಗತಿಕ ಆರ್ಥಿಕತೆ ಮತ್ತು ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್