ಎಲೋನ್ ಮಸ್ಕ್ 
ವಿದೇಶ

US ಏರ್​ಪೋರ್ಟ್ ಭದ್ರತಾ ಸಿಬ್ಬಂದಿಯ ವೇತನ ಪಾವತಿಗೆ ಎಲೋನ್ ಮಸ್ಕ್ ಮುಂದು! ಟ್ರಂಪ್ ಕಿಡಿ

ಹಣ ನೀಡದಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯಲ್ಲಿ ಈಗ ಹೆಚ್ಚಿನ ಸಮಯ ಹಿಡಿಯುತ್ತಿದೆ. ಅಲ್ಲಿ Transportation Security Agency (TSA) ನೌಕರರು ಫೆಬ್ರವರಿ ಮಧ್ಯದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆಗೆ ಹಣ ನೀಡುವ ವಿಚಾರದಲ್ಲಿ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಯುಎಸ್ ವಿಮಾನ ನಿಲ್ದಾಣಗಳಲ್ಲಿನ ಭದ್ರತಾ ಸಿಬ್ಬಂದಿಗೆ ವೇತನ ಪಾವತಿಸುವುದಾಗಿ ಟೆಕ್ ಉದ್ಯಮಿ ಎಲೋನ್ ಮಸ್ಕ್ ಹೇಳಿದ್ದಾರೆ.

ಹಣ ನೀಡದಿರುವುದರಿಂದ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯಲ್ಲಿ ಈಗ ಹೆಚ್ಚಿನ ಸಮಯ ಹಿಡಿಯುತ್ತಿದೆ. ಅಲ್ಲಿ Transportation Security Agency (TSA) ನೌಕರರು ಫೆಬ್ರವರಿ ಮಧ್ಯದಿಂದ ವೇತನವಿಲ್ಲದೆ ಕೆಲಸ ಮಾಡುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಲೋನ್ ಮಸ್ಕ್, ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಹಲವು ಅಮೆರಿಕನ್ನರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರಿರುವ ಈ ಹಣದ ಬಿಕ್ಕಟ್ಟಿನ ಸಮಯದಲ್ಲಿ TSA ಸಿಬ್ಬಂದಿಯ ವೇತನ ಪಾವತಿಸಲು ಬಯಸುತ್ತೇನೆ ಎಂದಿದ್ದಾರೆ.

ಎಲೋನ್ ಮಸ್ಕ್ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆಗಾಗಿ ವಲಸೆ ಮತ್ತು ಕಸ್ಟಮ್ಸ್ (ICE) ಏಜೆಂಟ್‌ಗಳನ್ನು ಬಳಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಡೆಮೋಕ್ರಾಟ್‌ಗಳು ತಕ್ಷಣವೇ ಹಣಕಾಸಿನ ಒಪ್ಪಂದಕ್ಕೆ ಸಹಿ ಹಾಕದಿದ್ದರೆ ನಮ್ಮ ಅದ್ಭುತ ಮತ್ತು ದೇಶಭಕ್ತಿಯ ICE ಏಜೆಂಟ್‌ಗಳನ್ನು ವಿಮಾನ ನಿಲ್ದಾಣಗಳಿಗೆ ಸ್ಥಳಾಂತರಿಸುತ್ತೇನೆ,ಅಲ್ಲಿ ಅವರು ಹಿಂದೆಂದೂ ಯಾರೂ ನೋಡಿರದ ಭದ್ರತೆಯನ್ನು ಒದಗಿಸುತ್ತಾರೆ. ಸೋಮವಾರ ICE ಅನ್ನು ಸ್ಥಳಾಂತರಿಸಲು ಎದುರು ನೋಡುತ್ತಿದ್ದೇನೆ. ಈಗಾಗಲೇ ಅವರಿಗೆ ಸಿದ್ಧರಾಗಿ ಎಂದು ಹೇಳಿರುವುದಾಗಿ ಟ್ರೂತ್ ಸೋಷಿಯಲ್‌ನಲ್ಲಿ ಟ್ರಂಪ್ ಬರೆದುಕೊಂಡಿದ್ದಾರೆ.

DHA ವೆಬ್ ಸೈಟ್ ಮಾಹಿತಿ ಪ್ರಕಾರ, ಸುಮಾರು 65,000 ಸಿಬ್ಬಂದಿ ವಿಮಾನ ನಿಲ್ದಾಣಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮಾರು 300ಕ್ಕೂ ಹೆಚ್ಚು ನೌಕರರು ಏಜೆನ್ಸಿ ತೊರೆದಿದ್ದಾರೆ ಎನ್ನಲಾಗಿದೆ. ಇದಕ್ಕಿಂತಲೂ ಹೆಚ್ಚಿನ ಜನರು ಕೆಲಸ ತೊರೆದಿರುವುದಾಗಿ ಅಮೆರಿಕದ ಮಾಧ್ಯಮಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!