ಮಧ್ಯ ಏಷ್ಯಾ ಸಂಘರ್ಷ  
ವಿದೇಶ

West Asia war: 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಇರಾನ್ ರಾಷ್ಟ್ರಕ್ಕೆ 48 ಗಂಟೆಗಳ ಗಡುವು ನೀಡಿರುವ ಟ್ರಂಪ್ ಅವರು, ಮಾರ್ಗವನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ.

ಮಧ್ಯ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಈಗ ಗಂಭೀರ ಹಂತಕ್ಕೆ ತಲುಪಿದ್ದು, ಜಾಗತಿಕ ಮಟ್ಟದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಅವರು ಇರಾನ್'ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಹಾರ್ಮುಜ್ ಜಲಸಂಧಿ (Strait of Hormuz) ಮೂಲಕ ಸಾಗುವ ನೌಕೆಗಳನ್ನು ತಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.

ಇರಾನ್ ರಾಷ್ಟ್ರಕ್ಕೆ 48 ಗಂಟೆಗಳ ಗಡುವು ನೀಡಿರುವ ಟ್ರಂಪ್ ಅವರು, ಮಾರ್ಗವನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಪ್ರಮುಖ ವಿದ್ಯುತ್ ಸ್ಥಾವರಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಜಗತ್ತಿನ ತೈಲ ಸಾಗಣೆಗೆ ಹೋರ್ಮುಜ್ ಜಲಸಂಧಿ ಅತ್ಯಂತ ಪ್ರಮುಖ ಮಾರ್ಗವಾಗಿದೆ. ಜಾಗತಿಕ ತೈಲ ಸರಬರಾಜಿನ ಸುಮಾರು 20 ಪ್ರತಿಶತ ಭಾಗ ಈ ಮಾರ್ಗದ ಮೂಲಕವೇ ಸಾಗುತ್ತದೆ. ಈ ಮಾರ್ಗದಲ್ಲಿ ಅಡಚಣೆ ಉಂಟಾದರೆ, ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬೆಲೆಗಳು ಏರಿಕೆಯಾಗುವುದು ಖಚಿತ.

ಇದರಿಂದ ಅನೇಕ ದೇಶಗಳ ಆರ್ಥಿಕ ಸ್ಥಿತಿಗತಿ ಮೇಲೆ ತೀವ್ರ ಪರಿಣಾಮ ಬೀಳುವ ಸಾಧ್ಯತೆ ಇದೆ. ಈಗಾಗಲೇ ಕೆಲವು ರಾಷ್ಟ್ರಗಳು ತುರ್ತು ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿವೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ದಿನೇ ದಿನೇ ತೀವ್ರವಾಗುತ್ತಿದ್ದು, ಕ್ಷಿಪಣಿ ದಾಳಿಗಳು ಮತ್ತು ಪ್ರತಿದಾಳಿಗಳು ಹೆಚ್ಚಾಗಿವೆ. ಇರಾನ್ ಇಸ್ರೇಲ್‌ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದರೆ, ಅಮೆರಿಕಾ ಮತ್ತು ಅದರ ಮಿತ್ರ ರಾಷ್ಟ್ರಗಳು ಇರಾನ್‌ನ ಸೈನಿಕ ಹಾಗೂ ಅಣು ಕೇಂದ್ರಗಳ ಮೇಲೆ ದಾಳಿ ನಡೆಸುತ್ತಿವೆ.

ಈ ನಡುವೆ ಟ್ರಂಪ್ ನೀಡಿದ ಹೊಸ ಎಚ್ಚರಿಕೆ ಯುದ್ಧದ ಸ್ವರೂಪವನ್ನು ಮತ್ತಷ್ಟು ಗಂಭೀರ ಹಂತಕ್ಕೆ ತಳ್ಳುವ ಸೂಚನೆ ನೀಡುತ್ತಿದೆ.

ಈ ಸಂಘರ್ಷವು ಈಗ ಕೇವಲ ಸೈನಿಕ ಮಟ್ಟಕ್ಕೆ ಸೀಮಿತವಾಗಿರದೆ, ವಿದ್ಯುತ್ ಘಟಕಗಳು, ಇಂಧನ ಮೂಲಸೌಕರ್ಯಗಳು ಮತ್ತು ಆರ್ಥಿಕ ವ್ಯವಸ್ಥೆಗಳೇ ಗುರಿಯಾಗುವ ಹಂತಕ್ಕೆ ಬೆಳವಣಿಗೆ ಕಂಡಿದೆ.

ಇದು ಜಾಗತಿಕ ಮಟ್ಟದಲ್ಲಿ ದೊಡ್ಡ ಆರ್ಥಿಕ ಸಂಕಷ್ಟವನ್ನು ಉಂಟುಮಾಡುವ ಸಾಧ್ಯತೆಗಳನ್ನೂ ಹೆಚ್ಚು ಮಾಡುತ್ತಿದೆ. ಅನೇಕ ದೇಶಗಳು ತಮ್ಮ ಇಂಧನ ಭದ್ರತೆ ಮತ್ತು ಸರಬರಾಜು ವ್ಯವಸ್ಥೆಗಳ ಬಗ್ಗೆ ಮರುಪರಿಶೀಲನೆ ನಡೆಸುತ್ತಿವೆ.

ಏತನ್ಮಧ್ಯೆ ಅಮೆರಿಕಾ ಬೆದರಿಕೆಗೆ ಬಗ್ಗದ ಇರಾನ್ ಪ್ರತಿ ಎಚ್ಚರಿಕೆಯನ್ನು ನೀಡಿದೆ. ತನ್ನ ವಿದ್ಯುತ್ ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆದರೆ, ಅಮೆರಿಕಾ ಮತ್ತು ಅದರ ಮಿತ್ರ ರಾಷ್ಟ್ರಗಳ ಮೇಲೆ ಕಠಿಣ ಪ್ರತಿದಾಳಿ ನಡೆಸುವುದಾಗಿ ಸ್ಪಷ್ಟಪಡಿಸಿದೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಹೆಚ್ಚಾಗಿದೆ.

ಒಟ್ಟಿನಲ್ಲಿ, ಹೋರ್ಮುಜ್ ಜಲಸಂಧಿಯ ಪ್ರಶ್ನೆ ಈಗ ಜಾಗತಿಕ ರಾಜಕೀಯ, ಆರ್ಥಿಕ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮುಂದಿನ ಕೆಲವು ದಿನಗಳು ಈ ಸಂಘರ್ಷದ ದಿಕ್ಕು ಮತ್ತು ಪರಿಣಾಮವನ್ನು ನಿರ್ಧರಿಸುವಲ್ಲಿ ಅತ್ಯಂತ ಪ್ರಮುಖವಾಗಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT