ಸಾಂದರ್ಭಿಕ ಚಿತ್ರ 
ವಿದೇಶ

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.

ವಾಷಿಂಗ್ಟನ್: ಐದು ದಿನಗಳ ಕಾಲ ಇರಾನ್‌ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವುದರಿಂದ ಜಗತ್ತಿಗೆ ಶಾಂತಿಯ ಹೊಸ ಭರವಸೆ ಸಿಕ್ಕಿದೆ.

ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ನಾಲ್ಕನೇ ವಾರಕ್ಕೆ ಪ್ರವೇಶಿಸಿರುವಂತೆ ಪಾಕಿಸ್ತಾನ, ಈಜಿಪ್ಟ್ ಮತ್ತು ಟರ್ಕಿಯು ಶಾಂತಿಗಾಗಿ ಮಧ್ಯಸ್ಥಿಕೆ ಪ್ರಯತ್ನದ ವರದಿಗಳ ನಡುವೆ ಈ ಬೆಳವಣಿಗೆಯಾಗಿದೆ. ಮತ್ತೊಂದೆಡೆ ಯುದ್ಧ ಪ್ರಾರಂಭಿಸಿದ ಅಮೆರಿಕ ನೇರವಾಗಿ ಮಾತನಾಡಬೇಕು ಎಂದು ಇರಾನ್ ಪಟ್ಟು ಹಿಡಿದಿದೆ.

ಟರ್ಕಿ, ಈಜಿಪ್ಟ್ ಮತ್ತು ಪಾಕಿಸ್ತಾನ ಕಳೆದ ಎರಡು ದಿನಗಳಿಂದ US ಮತ್ತು ಇರಾನ್ ನಡುವೆ ಸಂದೇಶಗಳನ್ನು ರವಾನಿಸುತ್ತಿವೆ ಎಂಬ ಮೂಲಗಳನ್ನು ಉಲ್ಲೇಖಿಸಿ US ಸುದ್ದಿವಾಹಿನಿ Axios ವರದಿ ಮಾಡಿದೆ.

ಮೂರು ದೇಶಗಳ ವಿದೇಶಾಂಗ ಸಚಿವರು ಶ್ವೇತಭವನದ ರಾಯಭಾರಿ ಸ್ಟೀವ್ ವಿಟ್‌ಕಾಫ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ.

ಮಧ್ಯಸ್ಥಿಕೆ ಮುಂದುವರೆದಿದ್ದು, ಯುದ್ಧವನ್ನು ಕೊನೆಗೊಳಿಸುವ ಮತ್ತು ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಶೀಘ್ರದಲ್ಲಿ ಉತ್ತರ ದೊರೆಯುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.

ಈಜಿಪ್ಟ್‌ನ ವಿದೇಶಾಂಗ ಸಚಿವ ಬದರ್ ಅಬ್ದೆಲಟ್ಟಿ ಭಾನುವಾರ ಪಾಕಿಸ್ತಾನ, ಟರ್ಕಿ ಮತ್ತು ಕತಾರ್‌ನ ವಿದೇಶಾಂಗ ಸಚಿವರೊಂದಿಗೆ ಸಭೆ ನಡೆಸಿದ್ದಾರೆ ಎಂದು ಈಜಿಪ್ಟ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ಐದು ದಿನಗಳ ಕಾಲ ಇರಾನ್‌ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ನಂತರ ಈ ಬೆಳವಣಿಗೆಯಾಗಿದೆ. ಆದಾಗ್ಯೂ ಇರಾನ್‌ನ ವಿದೇಶಾಂಗ ಸಚಿವಾಲಯವು ಅಂತಹ ಮಾತುಕತೆಗಳ ವರದಿಗಳನ್ನು ನಿರಾಕರಿಸಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!