ಇರಾನ್‌ನ ಟೆಹ್ರಾನ್‌ನಲ್ಲಿ ನಡೆದ ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಹಾನಿಗೊಳಗಾದ ವಸತಿ ಕಟ್ಟಡದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದು. 
ವಿದೇಶ

ವಾಯುದಾಳಿ: ಇರಾನ್ ಇಂಧನ ಮೂಲಸೌಕರ್ಯಕ್ಕೆ ಭಾರೀ ಹಾನಿ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ

ಇಸ್ಫಹಾನ್‌ನಲ್ಲಿರುವ ನೈಸರ್ಗಿಕ ಅನಿಲ ಸಂಸ್ಕರಣಾ ಘಟಕದ ಒಂದು ಭಾಗ ಹಾಗೂ ಖೋರ್ರಾಮ್‌ಶಹರ್ ಪ್ರದೇಶದ ವಿದ್ಯುತ್ ಸ್ಥಾವರಕ್ಕೆ ಸಂಪರ್ಕ ಹೊಂದಿರುವ ಪ್ರಮುಖ ಪೈಪ್‌ಲೈನ್‌ಗಳು ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಮಧ್ಯ ಪೂರ್ವದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವೆ ಇತ್ತೀಚಿನ ವಾಯಿದಾಳಿಗಳ ಹಿನ್ನೆಲೆಯಲ್ಲಿ ಇರಾನ್ ಇಂಧನ ಮೂಲಸೌಕರ್ಯಕ್ಕೆ ಹಾನಿ ಉಂಟಾಗಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಇದು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

ಈ ವರದಿ ಇನ್ನೂ ಅಂತರರಾಷ್ಟ್ರೀಯವಾಗಿ ದೃಢಪಡಿಸದಿದ್ದರೂ, ಪರಿಸ್ಥಿತಿಯ ತೀವ್ರತೆಯನ್ನು ಸೂಚಿಸುವ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಅರೆ-ಅಧಿಕೃತ ಇರಾನಿನ ಸುದ್ದಿ ಸಂಸ್ಥೆ ಮಂಗಳವಾರ ಮುಂಜಾನೆ ಎರಡು ಇಂಧನ ತಾಣಗಳ ಮೇಲೆ ವೈಮಾನಿಕ ದಾಳಿ ನಡೆದಿದೆ ಎಂದು ವರದಿ ಮಾಡಿದೆ.

ಈ ವರದಿಯ ಮಾಹಿತಿಯ ಪ್ರಕಾರ, ಇಸ್ಫಹಾನ್‌ನಲ್ಲಿರುವ ನೈಸರ್ಗಿಕ ಅನಿಲ ಸಂಸ್ಕರಣಾ ಘಟಕದ ಒಂದು ಭಾಗ ಹಾಗೂ ಖೋರ್ರಾಮ್‌ಶಹರ್ ಪ್ರದೇಶದ ವಿದ್ಯುತ್ ಸ್ಥಾವರಕ್ಕೆ ಸಂಪರ್ಕ ಹೊಂದಿರುವ ಪ್ರಮುಖ ಪೈಪ್‌ಲೈನ್‌ಗಳು ದಾಳಿಯಿಂದ ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.

ಈ ದಾಳಿಗಳು ನಿಖರವಾಗಿ ಯಾವಾಗ ಮತ್ತು ಹೇಗೆ ನಡೆದವು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, ವಾಯು ದಾಳಿಗಳಿಂದ ಈ ಹಾನಿ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮಧ್ಯ ಪ್ರಾಚ್ಯದಲ್ಲಿ ಇಂಧನ ಮೂಲಸೌಕರ್ಯಗಳು ಗುರಿಯಾಗುತ್ತಿರುವುದು ಗಮನಾರ್ಹವಾಗಿದೆ. ವಿಶೇಷವಾಗಿ ಅನಿಲ ಕ್ಷೇತ್ರಗಳು, ತೈಲ ಸಂಗ್ರಹ ಕೇಂದ್ರಗಳು ಹಾಗೂ ವಿದ್ಯುತ್ ಉತ್ಪಾದನಾ ಘಟಕಗಳ ಮೇಲೆ ನಡೆದ ದಾಳಿಗಳು ಸರಬರಾಜು ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸುವ ಪ್ರಯತ್ನವೆಂದು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇರಾನ್ ನೀಡಿರುವ ಇತ್ತೀಚಿನ ವರದಿ ಮತ್ತಷ್ಟು ಆತಂಕ ಹುಟ್ಟಿಸಿದೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಅಮೆರಿಕಾ ಮತ್ತು ಇಸ್ರೇಲ್ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಈ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸುವುದು ಒಂದು ತಂತ್ರದ ಭಾಗವಾಗಿರಬಹುದು ಎಂಬ ಅನುಮಾನ ಹೆಚ್ಚುತ್ತಿದೆ.

ಇಂಧನ ಮೂಲಸೌಕರ್ಯಗಳಿಗೆ ಹಾನಿ ಉಂಟಾದರೆ ಅದು ಕೇವಲ ಸ್ಥಳೀಯ ಮಟ್ಟದಲ್ಲೇ ಅಲ್ಲ, ಜಾಗತಿಕ ಮಟ್ಟದಲ್ಲೂ ಪರಿಣಾಮ ಬೀರುತ್ತದೆ.

ಇರಾನ್ ಭೌಗೋಳಿಕವಾಗಿ ಅತ್ಯಂತ ಮಹತ್ವದ ಸ್ಥಳದಲ್ಲಿದ್ದು, ಹಾರ್ಮುಜ್ ಜಲಸಂಧಿ ಮೂಲಕ ವಿಶ್ವದ ಸುಮಾರು 20 ಶೇಕಡಾ ತೈಲ ಸಾಗಾಟ ನಡೆಯುತ್ತದೆ. ಈ ಜಲಮಾರ್ಗದಲ್ಲಿ ಯಾವುದೇ ಅಡ್ಡಿಪಡಿಗಳು ಉಂಟಾದರೆ ಜಾಗತಿಕ ತೈಲ ಸರಬರಾಜು ವ್ಯವಸ್ಥೆ ಮೇಲೆ ತಕ್ಷಣದ ಪರಿಣಾಮ ಬೀಳುತ್ತದೆ. ಇಂತಹ ಸಂದರ್ಭದಲ್ಲಿ ಇಂಧನ ಮೂಲಸೌಕರ್ಯಗಳಿಗೆ ಹಾನಿ ಸಂಭವಿಸುವುದು ತೈಲ ಬೆಲೆ ಏರಿಕೆಗೆ ಕಾರಣವಾಗಬಹುದು.

ಭಾರತ ಸೇರಿದಂತೆ ಇಂಧನವನ್ನು ಆಮದು ಮಾಡುವ ದೇಶಗಳಿಗೆ ಇದು ದೊಡ್ಡ ಸವಾಲಾಗಬಹುದು. ತೈಲದ ಬೆಲೆ ಏರಿಕೆಯಿಂದ ದೈನಂದಿನ ಜೀವನದ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರಿಗೆ, ಕೈಗಾರಿಕೆ ಹಾಗೂ ವಿದ್ಯುತ್ ಉತ್ಪಾದನೆ ಮೇಲೆ ನೇರ ಪರಿಣಾಮ ಬೀಳಬಹುದು. ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಕಂಡುಬರುತ್ತಿದ್ದು, ಹೂಡಿಕೆದಾರರು ಕೂಡ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದಾರೆ.

ಇದೇ ವೇಳೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಪ್ರಯತ್ನಗಳು ನಡೆಯುತ್ತಿದೆಯಾದರೂ, ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಸ್ಪಷ್ಟವಾಗಿಲ್ಲ. ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ, ಇದು ದೊಡ್ಡ ಮಟ್ಟದ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯನ್ನೂ ತಜ್ಞರು ಸೂಚಿಸುತ್ತಿದ್ದಾರೆ.

ಒಟ್ಟಾರೆ, ಇರಾನ್ ವರದಿ ಪ್ರಕಾರ ಇಂಧನ ಮೂಲಸೌಕರ್ಯಕ್ಕೆ ಹಾನಿಯಾಗಿದೆ ಎಂಬ ಮಾಹಿತಿ ಜಾಗತಿಕ ಮಟ್ಟದಲ್ಲಿ ಗಂಭೀರ ಪರಿಣಾಮ ಉಂಟುಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಮಧ್ಯ ಪ್ರಾಚ್ಯದ ರಾಜಕೀಯ, ಆರ್ಥಿಕ ಮತ್ತು ಭದ್ರತಾ ಪರಿಸ್ಥಿತಿಯನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ಕಾಂಗ್ರೆಸ್‌ನ್ನು ಕಿತ್ತು ಹಾಕದೇ ಯುವಕರಿಗೆ ಉದ್ಯೋಗವಿಲ್ಲ! ನಿಖಿಲ್ ಕುಮಾರಸ್ವಾಮಿ ಕಿಡಿ

SCROLL FOR NEXT