ಇರಾನ್ ಟೆಹರಾನ್ ಮೇಲಿನ ದಾಳಿಯ ಸಾಂದರ್ಭಿಕ ಚಿತ್ರ 
ವಿದೇಶ

ಟೆಹರಾನ್ ನ ಮಿಲಿಟರಿ ಮೂಲಸೌಕರ್ಯಗಳ ಮೇಲೆ ಭಾರಿ ಪ್ರಮಾಣದ ದಾಳಿ; ಇರಾನ್ ಪ್ರತೀಕಾರದ ವಾರ್ನಿಂಗ್!

ಡಜನ್ ಗಟ್ಟಲೇ ಯುದ್ಧ ಸಲಕರಣೆಗಳ ಸಂಗ್ರಹಗಾರ, ತಯಾರಿಕಾ ಕೇಂದ್ರ ಸೇರಿದಂತೆ ಇರಾನಿನ ಭಯೋತ್ಪಾದಕತೆಗೆ ಸಂಬಂಧಿಸಿದ ಹಲವು ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ಮಾಹಿತಿ ನೀಡಿದೆ.

ಟೆಹರಾನ್: ಇರಾನ್ ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಭಾನುವಾರ ಭಾರಿ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (IDF) ಹೇಳಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ IDF, ಡಜನ್ ಗಟ್ಟಲೇ ಯುದ್ಧ ಸಲಕರಣೆಗಳ ಸಂಗ್ರಹಗಾರ, ತಯಾರಿಕಾ ಕೇಂದ್ರ ಸೇರಿದಂತೆ ಇರಾನಿನ ಭಯೋತ್ಪಾದಕತೆಗೆ ಸಂಬಂಧಿಸಿದ ಹಲವು ಕಡೆಗಳಲ್ಲಿ ದಾಳಿ ನಡೆಸಿರುವುದಾಗಿ ಮಾಹಿತಿ ನೀಡಿದೆ.

ದಾಳಿ ವೇಳೆ ಕಮಾಂಡರ್‌ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳು ಸೇರಿದಂತೆ ಹಲವಾರು ತಾತ್ಕಾಲಿಕ ಕಮಾಂಡ್ ಸೆಂಟರ್‌ಗಳನ್ನು ನಾಶಪಡಿಸಲಾಗಿದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಉತ್ಪಾದನೆ ಮತ್ತು ಸಂಗ್ರಹ ಕೇಂದ್ರಗಳು, ವೈಮಾನಿಕ ರಕ್ಷಣಾ ವ್ಯವಸ್ಥೆಗಳು ಮತ್ತು ವೀಕ್ಷಣಾ ಪೋಸ್ಟ್ ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಪೋಸ್ಟ್ ನಲ್ಲಿ ಉಲ್ಲೇಖಿಸಲಾಗಿದೆ.

ಇದಕ್ಕೂ ಮುನ್ನ ಇರಾನ್ ಶೈಕ್ಷಣಿಕ ಸಂಸ್ಥೆಗಳು ಮತ್ತು ಪಾರಂಪರಿಕ ಕಟ್ಟಡಗಳ ಮೇಲೆ US ಮತ್ತು ಇಸ್ರೇಲಿ ದಾಳಿಗಳಿಗೆ ಪ್ರತೀಕಾರವಾಗಿ ಪಶ್ಚಿಮ ಏಷ್ಯಾದ ಪ್ರದೇಶದಲ್ಲಿನ ಅಮೇರಿಕನ್ ಮತ್ತು ಇಸ್ರೇಲಿ ವಿಶ್ವವಿದ್ಯಾಲಯಗಳ ಮೇಲೆ ದಾಳಿ ಮಾಡಬೇಕಾಗುತ್ತದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಎಚ್ಚರಿಕೆ ನೀಡಿತು.

ಟೆಲಿಗ್ರಾಮ್‌ನಲ್ಲಿ ಇರಾನಿನ ರಾಜ್ಯ ಮಾಧ್ಯಮವಾದ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (IRIB) ಪ್ರಸಾರ ಮಾಡಿದ ಹೇಳಿಕೆಯಲ್ಲಿ ಇರಾನ್ ವಿಶ್ವವಿದ್ಯಾಲಯಗಳ ಮೇಲಿನ ಇತ್ತೀಚಿನ ದಾಳಿಗಳನ್ನು IRGC ಖಂಡಿಸಿದೆ.

ಟೆಹ್ರಾನ್‌ನಲ್ಲಿರುವ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಮೇಲೆ ಬಾಂಬ್ ದಾಳಿಯಾಗಿದ್ದು, US-ಇಸ್ರೇಲಿ ಪಡೆಗಳು ಇರಾನಿನ ಶೈಕ್ಷಣಿಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'