ಹಾರ್ಮುಜ್ ಮಾರ್ಗ  
ವಿದೇಶ

ಇರಾನ್ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ: ಹಾರ್ಮುಜ್ ಮಾರ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ..!

ಈ ದಾಳಿಯನ್ನು ತಡೆದು ಬಳಿಕ ಇರಾನ್‌ನ ಸೈನಿಕ ನೆಲೆಗಳ ಮೇಲೂ ಪ್ರತಿದಾಳಿ ನಡೆಸಲಾಗಿದೆ ಎಂದು ಅಮೆರಿಕಾ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಅಮೆರಿಕಾದ ಯುದ್ಧ ಹಡಗುಗಳಿಗೆ ಹಾನಿಯಾಗಿಲ್ಲ ಎಂದು ಸೇನೆ ಹೇಳಿದೆ.

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇರಾನ್‌ಗೆ ಸೇರಿದ ಇನ್ನೆರಡು ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಅಮೆರಿಕಾ ಸೇನೆಯ ಪ್ರಕಾರ, ಈ ಟ್ಯಾಂಕರ್‌ಗಳು ಅಮೆರಿಕಾದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು ಎಂದು ಹೇಳಿದ್ದು, ದಾಳಿಯ ನಡೆಸಿದ ವೀಡಿಯೋಗಳನ್ನೂ ಕೂಡ ಬಿಡುಗಡೆ ಮಾಡಿದೆ.

ಇದೇ ವೇಳೆ ಗುರುವಾರ ರಾತ್ರಿ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾದ ನೌಕಾಪಡೆಯ ಮೂರು ಹಡಗುಗಳ ಮೇಲೆ ಇರಾನ್ ದಾಳಿ ನಡೆಸಲು ಯತ್ನಿಸಿತ್ತು ಎಂದೂ ಆರೋಪಿಸಿದೆ.

ಈ ದಾಳಿಯನ್ನು ತಡೆದು ಬಳಿಕ ಇರಾನ್‌ನ ಸೈನಿಕ ನೆಲೆಗಳ ಮೇಲೂ ಪ್ರತಿದಾಳಿ ನಡೆಸಲಾಗಿದೆ ಎಂದು ಅಮೆರಿಕಾ ತಿಳಿಸಿದೆ. ಈ ಘಟನೆಯಲ್ಲಿ ಯಾವುದೇ ಅಮೆರಿಕಾದ ಯುದ್ಧ ಹಡಗುಗಳಿಗೆ ಹಾನಿಯಾಗಿಲ್ಲ ಎಂದು ಸೇನೆ ಹೇಳಿದೆ.

ಏತನ್ಮಧ್ಯೆ ಇರಾನ್ ಉಡಾಯಿಸಿದ್ದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಮೂರು ಡ್ರೋನ್‌ ದಾಳಿಗಳನ್ನು ತಡೆಯಲು ನಡೆಸಿದ ಕಾರ್ಯಾಚರಣೆ ವೇಳೆ ಮೂವರು ಗಾಯಗೊಂಡಿದ್ದಾರೆ ಎಂದು ಯುಎಇ ರಕ್ಷಣಾ ಸಚಿವಾಲಯ ತಿಳಿಸಿದೆ.

ಫೆಬ್ರವರಿ 28ರಂದು ಅಮೆರಿಕಾ ಮತ್ತು ಇಸ್ರೇಲ್ ಆರಂಭಿಸಿದ ಯುದ್ಧದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣವನ್ನು ಕಠಿಣಗೊಳಿಸಿದ್ದು, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರೀ ಅಸ್ಥಿರತೆ ಉಂಟಾಗಿದೆ. ಜಗತ್ತಿನ ತೈಲ ಮತ್ತು ಅನಿಲ ಸಾಗಣೆಗೆ ಅತ್ಯಂತ ಪ್ರಮುಖವಾದ ಈ ಜಲಮಾರ್ಗದಲ್ಲಿ ಸಾಗಾಟಕ್ಕೆ ತೀವ್ರ ಅಡ್ಡಿಪಡಿಗಳಾಗಿವೆ.

ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರು, “ಅಮೆರಿಕನ್ನರನ್ನು ಬೆದರಿಸಿದರೆ ಅದರ ಪರಿಣಾಮ ಗಂಭೀರವಾಗಿರುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ಜಲಸಂಧಿ ಪುನರಾರಂಭ ಮತ್ತು ಇರಾನ್‌ನ ಪರಮಾಣು ಯೋಜನೆ ಹಿಂಪಡೆಯುವ ಕುರಿತು ತೆಹ್ರಾನ್‌ ಗಂಭೀರ ಪ್ರಸ್ತಾವನೆ ನೀಡಬೇಕೆಂದು ಹೇಳಿದ್ದಾರೆ.

ಇನ್ನೊಂದೆಡೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರು, ಅಮೆರಿಕಾದ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, “ಪ್ರತಿ ಬಾರಿ ರಾಜತಾಂತ್ರಿಕ ಪರಿಹಾರ ಸಾಧ್ಯವಾಗುವ ಹೊತ್ತಿನಲ್ಲಿ ಅಮೆರಿಕಾ ಸೈನಿಕ ಸಾಹಸಕ್ಕೆ ಮುಂದಾಗುತ್ತದೆ” ಎಂದು ಆರೋಪಿಸಿದ್ದಾರೆ. ಈ ದಾಳಿಗಳು ಕದನ ವಿರಾಮ ಉಲ್ಲಂಘನೆ ಎಂದೂ ಹೇಳಿದ್ದಾರೆ.

ಈ ಮಧ್ಯೆ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ಇನ್ನೂ ಜಾರಿಯಲ್ಲಿದೆ ಎಂದು ಹೇಳುತ್ತಲೇ, ಇರಾನ್ ಒಪ್ಪಂದಕ್ಕೆ ಬಾರದಿದ್ದರೆ ಮತ್ತೆ ಭಾರೀ ಬಾಂಬ್ ದಾಳಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಏತನ್ಮಧ್ಯೆ ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣಕ್ಕಾಗಿ ಇರಾನ್ ಹೊಸ ‘ಪರ್ಷಿಯನ್ ಗಲ್ಫ್ ಸ್ಟ್ರೈಟ್ ಅಥಾರಿಟಿ’ ರಚಿಸಿದೆ ಎಂಬ ವರದಿಯೂ ಜಾಗತಿಕ ವಲಯದಲ್ಲಿ ಆತಂಕ ಹೆಚ್ಚಿಸಿದೆ. ಈ ಸಂಸ್ಥೆ ಜಲಸಂಧಿ ಮೂಲಕ ಸಾಗುವ ಹಡಗುಗಳ ಮೇಲೆ ತೆರಿಗೆ ಮತ್ತು ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ. ಇದಕ್ಕೆ ಅಮೆರಿಕಾ ತೀವ್ರವಾಗಿ ಕಿಡಿಕಾರಿದ್ದು, ಒಪ್ಪಲಾಗದ ಕ್ರಮ ಎಂದು ಟೀಕಿಸಿದೆ.

ಈ ಬೆಳವಣಿಗೆಗಳಿಂದ ಜಾಗತಿಕ ತೈಲ ಸರಬರಾಜು, ಇಂಧನ ಬೆಲೆ ಹಾಗೂ ಅಂತಾರಾಷ್ಟ್ರೀಯ ವ್ಯಾಪಾರದ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?