ಮಾಸ್ಕೋ: ಉಕ್ರೇನ್ 500ಕ್ಕೂ ಹೆಚ್ಚು ಡ್ರೋನ್‌ಗಳೊಂದಿಗೆ ರಷ್ಯಾದ ಮಾಸ್ಕೋ ಮೇಲೆ ರಾತ್ರೋರಾತ್ರಿ ನಡೆಸಿದ ಮಾರಣಾಂತಿಕ ದಾಳಿಯಲ್ಲಿ ಮೃತಪಟ್ಟ ನಾಲ್ವರಲ್ಲಿ ಓರ್ವ ಒಬ್ಬ ಭಾರತೀಯ ಕಾರ್ಮಿಕನೂ ಸೇರಿದ್ದಾನೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಡ್ರೋನ್ ದಾಳಿಯಲ್ಲಿ ಮೃತಪಟ್ಟವರ ಅಥವಾ ಗಾಯಗೊಂಡವರ ಗುರುತು ಇನ್ನೂ ತಿಳಿದುಬಂದಿಲ್ಲ.
"ಇಂದು ಮುಂಜಾನೆ ಮಾಸ್ಕೋ ಪ್ರದೇಶದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದಾನೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ.
ರಾಯಭಾರ ಕಚೇರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ಮೃತ ಕಾರ್ಮಿಕನ ಕುಟುಂಬಕ್ಕೆ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ. ಕಾರ್ಮಿಕರಿಗೆ ಅಗತ್ಯ ನೆರವು ನೀಡಲು ಕಂಪನಿಯ ನಿರ್ವಹಣೆ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿರುವುದಾಗಿ ರಾಯಭಾರ ಕಚೇರಿ ತಿಳಿಸಿದೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಡ್ರೋನ್ ದಾಳಿಯನ್ನು ದೃಢಪಡಿಸಿದ್ದು, ಅವು "ಸಂಪೂರ್ಣವಾಗಿ ಸಮರ್ಥನೀಯ" ಎಂದು ಹೇಳಿದ್ದಾರೆ.