ಬಾಂಗ್ಲಾದೇಶದಲ್ಲಿರುವ ಭಾರತದ ಹೈಕಮಿಷನ್ ಕಚೇರಿ 
ವಿದೇಶ

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಢಾಕಾ: ಭಾರತದ ಅಧಿಕಾರಿಯೊಬ್ಬರು ಬಾಂಗ್ಲಾದೇಶದ ಸರ್ಕಾರಿ ಕಚೇರಿಯಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ.

ನರೇಂದ್ರ ಧಾರ್ (Narendra Dhar) ಎಂಬ ಭಾರತೀಯ ಅಧಿಕಾರಿ ಬಾಂಗ್ಲಾದೇಶದ ಚಟ್ಟೋಗ್ರಾಮ್‌ನಲ್ಲಿರುವ ಭಾರತದ ಸಹಾಯಕ ಹೈಕಮಿಷನ್ ಕಚೇರಿ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣದ ಕುರಿತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.

35 ವರ್ಷದ ನರೇಂದ್ರ ಧಾರ್ ಅವರು ಹರ್ಯಾಣ ಮೂಲದವರಾಗಿದ್ದು, ಚಟ್ಟೋಗ್ರಾಮಿನ ಖುಲ್ಶಿ ಪ್ರದೇಶದಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

Chattogram ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ ತಮ್ಮ ಕೊಠಡಿಯೊಳಗಿನಿಂದ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆ ಮಿಷನ್ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಅವರ ಮೃತದೇಹವನ್ನು ಕಚೇರಿ ಆವರಣದಿಂದ ಹೊರತೆಗೆದು ಚಟ್ಟೋಗ್ರಾಮ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು ಎಂದು ತಿಳಿದುಬಂದಿದೆ.

ಪೋಲೀಸರ ಪ್ರಕಾರ, ಮರಣೋತ್ತರ ಪರೀಕ್ಷೆಯ ಬಳಿಕ ಅಸಹಜ ಸಾವು ಪ್ರಕರಣ ದಾಖಲಿಸಿ, ಸಂಪೂರ್ಣ ತನಿಖೆ ಆರಂಭಿಸಲಾಗುತ್ತದೆ. ಇಲ್ಲಿಯವರೆಗೆ ಸಾವಿನ ನಿಖರ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

ಸರ್ಕಾರಿ ಮೂಲಗಳ ಪ್ರಕಾರ, ಬಾಂಗ್ಲಾದೇಶದಲ್ಲಿ ಭಾರತದ ಹೈಕಮಿಷನ್ ಅಧಿಕಾರಿಗಳು ಮೃತ ಅಧಿಕಾರಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮೃತದೇಹವನ್ನು ಭಾರತೀಯ ಮಿಷನ್‌ಗೆ ಹಸ್ತಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!