ಹಾರ್ಮುಜ್ ಜಲಸಂಧಿ 
ವಿದೇಶ

ಹಾರ್ಮುಜ್ ಬಿಕ್ಕಟ್ಟು: ತೈಲ ಮಾರುಕಟ್ಟೆ 'ರೆಡ್ ಝೋನ್' ತಲುಪುವ ಅಪಾಯ; IEA ಎಚ್ಚರಿಕೆ

ಇದೇ ಪರಿಸ್ಥಿತಿ ಮುಂದುವರೆದರೆ ಜುಲೈ ಅಥವಾ ಆಗಸ್ಟ್ ನಲ್ಲಿ ತೈಲ ಮಾರುಕಟ್ಟೆ 'ರೆಡ್ ಝೋನ್'(ಅಪಾಯ ವಲಯ)ಗೆ ತಲುಪಲಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂಧನ ಬಿಕ್ಕಟ್ಟು ಸೃಷ್ಟಿಯಾಗಲಿದೆ.

ಲಂಡನ್: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕವಾಗಿ ತಲೆದೊರಿರುವ ಇಂಧನ ಬಿಕ್ಕಟ್ಟು ಕೆಲವೇ ದಿನಗಳಲ್ಲ ಮತ್ತಷ್ಟು ಭೀಕರವಾಗುವ ಸಾಧ್ಯತೆ ಇದೆ.

ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸದೆ, ಇದೇ ಪರಿಸ್ಥಿತಿ ಮುಂದುವರೆದರೆ ಜುಲೈ ಅಥವಾ ಆಗಸ್ಟ್ ನಲ್ಲಿ ತೈಲ ಮಾರುಕಟ್ಟೆ 'ರೆಡ್ ಝೋನ್'(ಅಪಾಯ ವಲಯ)ಗೆ ತಲುಪಲಿದ್ದು, ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂಧನ ಬಿಕ್ಕಟ್ಟು ಸೃಷ್ಟಿಯಾಗಲಿದೆ ಎಂದು ಅಂತರಾಷ್ಟ್ರೀಯ ಇಂಧನ ಏಜೆನ್ಸಿ(ಐಇಎ) ಎಚ್ಚರಿಸಿದೆ.

21 ಕಿಮೀ ಅಗಲದ ಹಾರ್ಮುಜ್ ಜಲಮಾರ್ಗದ ಮೇಲೆ ಇರಾನ್ ಭೌಗೋಳಿಕ ನಿಯಂತ್ರಣವನ್ನು ಹೊಂದಿರುವುದರಿಂದ ಹಾರ್ಮುಜ್ ಸಂಚಾರವನ್ನು ಸ್ಥಗಿತಗೊಳಿಸಲು ಸಾಧ್ಯ. ಇದರಿಂದ ಪ್ರತಿದಿನ ಜಾಗತಿಕ ಮಾರುಕಟ್ಟೆಗೆ ಅಂದಾಜು 14 ಮಿಲಿಯನ್ ಬ್ಯಾರೆಲ್ ತೈಲ ಸಾಗಿಸಲಾಗುತ್ತದೆ ಎಂದು ಅಂತರರಾಷ್ಟ್ರೀಯ ಇಂಧನ ಸಂಸ್ಥೆಯ ಮುಖ್ಯಸ್ಥ ಫಾತಿಹ್ ಬಿರೋಲ್ ಅವರು ಸಿಎನ್ ಬಿಸಿಗೆ ತಿಳಿಸಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಅಥವಾ ಇಂಧನ ರಫ್ತು ಮಾಡಲು ಕಾರ್ಯಸಾಧ್ಯವಾದ ಪರ್ಯಾಯ ಮಾರ್ಗಗಳನ್ನು ಖಚಿತಪಡಿಸಿಕೊಳ್ಳಲು ವಿಫಲವಾದರೆ, ಜಗತ್ತನ್ನು ಇನ್ನಷ್ಟು ತೀವ್ರ ಪೂರೈಕೆ ಬಿಕ್ಕಟ್ಟಿಗೆ ತಳ್ಳುತ್ತದೆ ಎಂದು ಬಿರೋಲ್ ಎಚ್ಚರಿಸಿದ್ದಾರೆ.

ಇದೇ ಪರಿಸ್ಥಿತಿ ಮುಂದುವರೆದರೆ ಜುಲೈ ಆರಂಭದಲ್ಲಿಯೇ ತೈಲ ಮಾರುಕಟ್ಟೆಗಳು "ರೆಡ್ ಝೋನ್" ತಲುಪುವ ಅಪಾಯ ಇದೆ ಎಂದು ಬಿರೋಲ್ ಹೇಳಿದ್ದಾರೆ.

ಜಾಗತಿಕ ಇಂಧನ ಪೂರೈಕೆಗೆ ಅಡ್ಡಿಪಡಿಸಿರುವ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಇಂಧನ ಮತ್ತು ವಿದೇಶಿ ವಿನಿಮಯವನ್ನು ಉಳಿಸಲು ಪ್ರಧಾನಿ ಮೋದಿ ಅವರು ಕರೆ ನೀಡಿದ ಬೆನಲ್ಲೇ ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಖಾಲಿ ಖಾಲಿ ಹೊಡೆಯುತ್ತಿದ್ದು, ಇದರ ಬಿಸಿ ಕರ್ನಾಟಕಕ್ಕೂ ತಟ್ಟಲಿದೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ