ಬದುಕುಳಿದವರಿಗೆ ತಕ್ಷಣದ ನೆರವು ಒದಗಿಸಲು ಬಂದರು, ಹಡಗುಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯ ಹಾಗೂ ಒಮಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ 
ವಿದೇಶ

ಒಮಾನ್ ಕರಾವಳಿಯಲ್ಲಿ ‘ಅಲ್ ಜುಸುಫಿ’ ಸರಕು ಸಾಗಣೆ ಹಡಗು ಮೇಲೆ ದಾಳಿ: ಭಾರತೀಯ ನಾವಿಕ ಸಾವು, 13 ಮಂದಿ ರಕ್ಷಣೆ

‘ಎಂಎಸ್‌ವಿ ಅಲ್ ಜುಸುಫಿ’ (MSV Al Jusufi) ಎಂಬ ಹೆಸರಿನ ಈ ಹಡಗು ಒಮಾನ್ ಕರಾವಳಿಯ ಸಮೀಪ ಸಂಚರಿಸುತ್ತಿದ್ದಾಗ ಗುರುತಿಸಲಾಗದ ವೈಮಾನಿಕ ವಸ್ತುವೊಂದು ಅಪ್ಪಳಿಸಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದ್ದಾರೆ.

14 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಭಾರತೀಯ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ಒಮನ್ ಕರಾವಳಿಯ ಸಮೀಪ ದಾಳಿ ನಡೆದಿದ್ದು, ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದಾರೆ. ಉಳಿದ 13 ಮಂದಿಯನ್ನು ಒಮಾನ್ ಕರಾವಳಿ ರಕ್ಷಣಾ ಪಡೆ ಸುರಕ್ಷಿತವಾಗಿ ರಕ್ಷಿಸಿದೆ ಎಂದು ಕೇಂದ್ರ ಸರ್ಕಾರ ಇಂದು ತಿಳಿಸಿದೆ.

‘ಎಂಎಸ್‌ವಿ ಅಲ್ ಜುಸುಫಿ’ (MSV Al Jusufi) ಎಂಬ ಹೆಸರಿನ ಈ ಹಡಗು ಒಮಾನ್ ಕರಾವಳಿಯ ಸಮೀಪ ಸಂಚರಿಸುತ್ತಿದ್ದಾಗ ಗುರುತಿಸಲಾಗದ ವೈಮಾನಿಕ ವಸ್ತುವೊಂದು ಅಪ್ಪಳಿಸಿದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸೋನೊವಾಲ್, ಹಡಗಿನಲ್ಲಿದ್ದ 13 ಮಂದಿ ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದು ಒಮಾನ್ ಕರಾವಳಿ ರಕ್ಷಣಾ ಪಡೆಯಿಂದ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಮೃತಪಟ್ಟ ನಾವಿಕನನ್ನು ಗುಜರಾತ್ ಮೂಲದ ಗಂಧರ್ ನಹೀಮ್ ಅಜೀಜ್ ಎಂದು ಗುರುತಿಸಲಾಗಿದೆ. ಗಾಯಗಳಿಂದಾಗಿ ಮೃತಪಟ್ಟಿದ್ದಾರೆ.

ನಾವಿಕನ ಸಾವಿಗೆ ಸಂತಾಪ ಸೂಚಿಸಿರುವ ಸಚಿವರು, ಬದುಕುಳಿದವರಿಗೆ ತಕ್ಷಣದ ನೆರವು ಒದಗಿಸಲು ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಹಾಗೂ ಒಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.

ಜತೆಗೆ, ಬದುಕುಳಿದ 13 ಮಂದಿ ಸಿಬ್ಬಂದಿಯನ್ನು ಹಾಗೂ ಮೃತಪಟ್ಟ ಅಜೀಜ್ ಅವರ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ಕರೆತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ವಾಣಿಜ್ಯ ಹಡಗುಗಳ ಸುರಕ್ಷತೆ ಬಗ್ಗೆ ಹೆಚ್ಚಿದ ಆತಂಕ

ಪಶ್ಚಿಮ ಏಷ್ಯಾದಲ್ಲಿ ವಾಣಿಜ್ಯ ಹಡಗುಗಳ ಸುರಕ್ಷತೆ ಕುರಿತು ಆತಂಕ ಹೆಚ್ಚುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಕಳೆದ ಫೆಬ್ರವರಿಯಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಆರಂಭವಾದ ಬಳಿಕ ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಪದೇಪದೆ ದಾಳಿಗಳು ನಡೆಯುತ್ತಿವೆ.

ವಿಶೇಷವಾಗಿ ಹಾರ್ಮುಜ್ ಜಲಸಂಧಿ ಮತ್ತು ಒಮಾನ್ ಕೊಲ್ಲಿಯ ಸುತ್ತಮುತ್ತ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಭಾರತ ಹಲವು ಬಾರಿ ಕಳವಳ ವ್ಯಕ್ತಪಡಿಸಿದೆ. ನಾಗರಿಕ ಹಡಗುಗಳು ಮತ್ತು ಅವುಗಳಲ್ಲಿನ ನಾವಿಕರ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದೆ.

ಸೆಪ್ಟೆಂಬರ್‌ನಲ್ಲಿ ಒಮನ್ ಕರಾವಳಿಯ ಸಮೀಪ ಆ್ಯಂಟಿಗುವಾ ಮತ್ತು ಬಾರ್ಬುಡಾ ಧ್ವಜ ಹೊಂದಿದ್ದ ಬೃಹತ್ ಸರಕು ಸಾಗಣೆ ಹಡಗು ‘ಎಂವಿ ಕೇಪ್ ದಾವೋ’ (MV Cape Dao) ಮೇಲೆ ಕ್ಷಿಪಣಿ ದಾಳಿ ನಡೆದಿತ್ತು. ಈ ಘಟನೆಯಲ್ಲಿ ತಲೆಗೆ ಗಂಭೀರ ಗಾಯಗಳಾಗಿದ್ದ ಉತ್ತರ ಪ್ರದೇಶ ಮೂಲದ ಭಾರತ ನಾವಿಕ ಸೂರಜ್ ಯಾದವ್ ಮೃತಪಟ್ಟಿದ್ದರು. ಹಡಗಿನಲ್ಲಿದ್ದ 20 ಭಾರತೀಯ ಸಿಬ್ಬಂದಿಯ ಪೈಕಿ 19 ಮಂದಿಯನ್ನು ರಕ್ಷಿಸಲಾಗಿತ್ತು.

ಇದಕ್ಕೂ ಮೊದಲು ಜೂನ್‌ನಲ್ಲಿ ಒಮಾನ್ ಕರಾವಳಿಯ ಸಮೀಪ ಪಲಾವು ಧ್ವಜ ಹೊಂದಿದ್ದ ತೈಲ ಟ್ಯಾಂಕರ್ ‘ಎಂಟಿ ಸೆಟ್ಟೆಬೆಲ್ಲೊ’ (MT Settebello) ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದರು. ಈ ಹಡಗಿನಲ್ಲಿ ಒಟ್ಟು 28 ಮಂದಿ ಸಿಬ್ಬಂದಿಯಿದ್ದು, ಅವರಲ್ಲಿ 24 ಮಂದಿ ಭಾರತೀಯರಾಗಿದ್ದರು.

ಪಶ್ಚಿಮ ಏಷ್ಯಾದ ಸಂಘರ್ಷ ಆರಂಭವಾದ ಫೆಬ್ರವರಿಯಿಂದ ಈವರೆಗೆ 22 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳೆದ ವಾರ ತಿಳಿಸಿತ್ತು. ಅವರಲ್ಲಿ 14 ಮಂದಿ ನಾವಿಕರಾಗಿದ್ದರು. ಇದೀಗ ಮತ್ತೊಬ್ಬ ಭಾರತೀಯ ನಾವಿಕ ಮೃತಪಟ್ಟಿರುವುದರಿಂದ ಸಂಘರ್ಷದಲ್ಲಿ ಮೃತಪಟ್ಟ ಭಾರತೀಯರ ಸಂಖ್ಯೆ ಕನಿಷ್ಠ 23ಕ್ಕೆ ಏರಿಕೆಯಾಗಿದೆ.

ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ನಾವಿಕರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಭಾರತವು ತನ್ನ ರಾಜತಾಂತ್ರಿಕ ಕಚೇರಿಗಳು ಹಾಗೂ ಕಡಲ ಸಾರಿಗೆ ಸಂಬಂಧಿತ ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್ ಆಕ್ರೋಶಕ್ಕೆ ಮಣಿದ ವಿಜಯೇಂದ್ರ: ಪೋಸ್ಟರ್ ಸಮರ ಬೆನ್ನಲ್ಲೇ 'ಈ ನನ್ನ ಮಕ್ಕಳು' ಹೇಳಿಕೆಗೆ ಕ್ಷಮೆಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ

RTGS ಚೋರ್ ಬಿವೈ ವಿಜಯೇಂದ್ರ: ಈ ನನ್ ಮಕ್ಕಳು ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ

ಆಂಧ್ರ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ ‘ಮುರಸು’; ಧರೆಗುರುಳಿದ ಸಾವಿರಾರು ಮರಗಳು, ಮೀನುಗಾರಿಕೆ ದೋಣಿಗಳಿಗೆ ಹಾನಿ – ಭಾರಿ ಅನಾಹುತ; Video

'ಇನ್ಯಾವತ್ತೂ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲ'; ಕೊನೆಗೂ ಕ್ಷಮೆ ಯಾಚಿಸಿದ ನಟ Imran Khan, ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ!

Iran ಮೇಲೆ ಮತ್ತೆ ಮುಗಿಬಿದ್ದ ಅಮೆರಿಕ; Qeshm ದ್ವೀಪದ ಮೇಲೆ ವೈಮಾನಿಕ ದಾಳಿ, ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧದ ಆತಂಕ..!