ಗುಂಡೇಟಿನಿಂದ ನಿರೂಪಕಿ ಸಾವು 
ವಿದೇಶ

ಖಾಸಗಿ ವಾಹಿನಿಯ ನಿರೂಪಕಿಯ ಗುಂಡಿಕ್ಕಿ ಹತ್ಯೆ; ಪೊಲೀಸರ ಎಂಟ್ರಿ, ಆಗಿದ್ದೇನು?

ರಾವಲ್ಪಿಂಡಿಯ ಗುಲ್ಶನ್‌ಆಬಾದ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು 'ಡಾನ್' ಪತ್ರಿಕೆ ವರದಿ ಮಾಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿಯೊಬ್ಬರನ್ನು ಅವರ ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ರಾವಲ್ಪಿಂಡಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ನಿರೂಪಕಿಯ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ರಾಬಿಯಾ ಅಹ್ಸಾನ್ ಎಂದು ಗುರುತಿಸಲಾಗಿದ್ದು, ಅವರು ಸ್ಥಳೀಯ ಖಾಸಗಿ ಟಿವಿ ಚಾನೆಲ್‌ನಲ್ಲಿ ನಿರೂಪಕಿ ಹಾಗೂ ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡುತ್ತಿದ್ದರು.

ರಾವಲ್ಪಿಂಡಿಯ ಗುಲ್ಶನ್‌ಆಬಾದ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು 'ಡಾನ್' ಪತ್ರಿಕೆ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ರಾವಲ್ಪಿಂಡಿ ನಗರ ಪೊಲೀಸ್ ಅಧಿಕಾರಿ ಹಸನ್ ಮುಷ್ತಾಕ್ ಸುಖೇರಾ ಮಾಹಿತಿ ನೀಡಿದ್ದು, ನಿರೂಪಕಿಯ ಪತಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಿರಬಹುದು ಎನ್ನಲಾದ ಬಂದೂಕನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ತಂಡ ಹಾಗೂ ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯಲ್ಲಿದ್ದ ಪುರುಷ ಮನೆಕೆಲಸದಾತ ಪೊಲೀಸರಿಗೆ ನೀಡಿರುವ ಹೇಳಿಕೆ ಪ್ರಕಾರ, ಗುಂಡು ಆಕಸ್ಮಿಕವಾಗಿ ಸಿಡಿದಿದೆ ಎಂದು ನಿರೂಪಕಿಯ ಪತಿ ಹೇಳಿಕೊಂಡಿದ್ದಾನೆ. ಆದರೆ, ಇದು ನಿಜವಾಗಿಯೂ ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕ ಕೃತ್ಯವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಂಜಾಬ್ ವಿಧಿವಿಜ್ಞಾನ ವಿಜ್ಞಾನ ಸಂಸ್ಥೆಯ (PFSA) ತಂಡ ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆಯ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ 'Spy' ಜೊತೆಗಿನ ಪ್ರೇಮ ಪ್ರಕರಣ ಒಪ್ಪಿಕೊಂಡ Nvidia ಸಿಇಒ! ಕುಟುಂಬ ಹಾಗೂ ಉದ್ಯೋಗಿಗಳ ಕ್ಷಮೆ ಕೋರಿದ AI ದಿಗ್ಗಜ ಜೆಂಸೆನ್ ಹುವಾಂಗ್; ಅಮೆರಿಕದಲ್ಲಿ ತೀವ್ರ ಸಂಚಲನ

ದೆಹಲಿಯಲ್ಲಿ ವಿಷಗಾಳಿಯ ಪ್ರಕೋಪ: ಅಪಾಯಕಾರಿ ಮಟ್ಟಕ್ಕೆ ತಲುಪಿದ ವಾಯುಮಾಲಿನ್ಯ; 1,331ಕ್ಕೆ ಏರಿದ AQI, ದಟ್ಟ ಹೊಗೆ ಹೊದಿಕೆಯಲ್ಲಿ ರಾಷ್ಟ್ರ ರಾಜಧಾನಿ..!

ಅಮಾವಾಸ್ಯೆ ರಾತ್ರಿ ಭೀಕರ ಅಪಘಾತ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಕಾರಿಗೆ ಬೆಂಕಿ ಹೊತ್ತು 6 ಮಂದಿ ಸಜೀವ ದಹನ!

12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!

West Asia war: 'ಯುದ್ಧ ನಿಲ್ಲಿಸಿ ಸಂಧಾನಕ್ಕೆ ಬನ್ನಿ, ಇಲ್ಲದಿದ್ದರೆ ನರಕ ಸೃಷ್ಟಿಸುತ್ತೇವೆ': ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಇರಾನ್ ಖಡಕ್ ಎಚ್ಚರಿಕೆ..!