ಕ್ಯಾಪ್ಟನ್ ಸ್ಮಿತ್ ಮಚ್ಚರ್ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು 
ವಿದೇಶ

Flydubai ವಿಮಾನ ಪತನಕ್ಕೆ ಸಹ ಪೈಲಟ್ ಯತ್ನ: ಇರಿತಕ್ಕೊಳಗಾಗಿದ್ದರೂ ಧೃತಿಗೆಡದೆ ಹೋರಾಟ, ಭಾರತೀಯ ಪೈಲಟ್‌ಗೆ ಸಲಾಂ ಎಂದ ನೆತನ್ಯಾಹು..!

ಚೂರಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೂ ಅವರು ಹೋರಾಡಿದರು, ಪ್ರತಿರೋಧಿಸಿದರು, ಕಾಕ್‌ಪಿಟ್ ಬಾಗಿಲು ತೆರೆದರು. ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ದಾಳಿಕೋರನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಯಿತು.

ಟೆಲ್ ಅವೀವ್: ದುಬೈಯಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನವನ್ನು ಪತನಗೊಳಿಸಲು ಸಹ ಪೈಲಟ್ ನಡೆಸಿದ ಎನ್ನಲಾದ ಯತ್ನವನ್ನು ತಡೆದು, ಪ್ರಯಾಣಿಕರ ಜೀವ ಉಳಿಸಲು ಹೋರಾಡಿದ ಭಾರತೀಯ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ‘ನಿಜವಾದ ಹೀರೋ’ ಎಂದು ಶ್ಲಾಘಿಸಿದ್ದಾರೆ.

ಸಹ ಪೈಲಟ್‌ನಿಂದ ಚೂರಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೂ ಮಚ್ಚರ್ ಪ್ರತಿರೋಧ ತೋರಿಸಿ ಕಾಕ್‌ಪಿಟ್ ಬಾಗಿಲು ತೆರೆದರು. ಇದರಿಂದ ಪ್ರಯಾಣಿಕರು ಹಾಗೂ ಸಿಬ್ಬಂದಿ ಒಳಗೆ ಪ್ರವೇಶಿಸಿ ದಾಳಿಕೋರನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಯಿತು ಎಂದು ನೆತನ್ಯಾಹು ಹೇಳಿದ್ದಾರೆ.

ಚೂರಿಯಿಂದ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೂ ಅವರು ಹೋರಾಡಿದರು, ಪ್ರತಿರೋಧಿಸಿದರು, ಕಾಕ್‌ಪಿಟ್ ಬಾಗಿಲು ತೆರೆದರು. ಬಳಿಕ ಪ್ರಯಾಣಿಕರು ಮತ್ತು ಸಿಬ್ಬಂದಿ ದಾಳಿಕೋರನನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಯಿತು. ಇದರಿಂದ ಭೀಕರ ವೈಮಾನಿಕ ದುರಂತವೊಂದು ತಪ್ಪಿದೆ. ಇಸ್ರೇಲಿ ಪ್ರಜೆಗಳು ಸೇರಿದಂತೆ 174 ಮಂದಿಯ ಜೀವವನ್ನು ಅವರು ಉಳಿಸಿದ್ದಾರೆ. ಕ್ಯಾಪ್ಟನ್ ಮಚ್ಚರ್ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಗುಣಮುಖರಾಗಲಿ. ಅವರು ನಿಜವಾದ ಹೀರೋ” ಎಂದು ತಿಳಿಸಿದ್ದಾರೆ.

ಅಸಾಧಾರಣ ಧೈರ್ಯ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರಿಗೆ ನನ್ನ ಸಲಾಂ” ಎಂದು ಹೇಳಿದ್ದಾರೆ.

ಇಸ್ರೇಲ್ ಸಂಸತ್ತಿನ ಸ್ಪೀಕರ್ ಅಮೀರ್ ಒಹಾನಾ ಕೂಡ ಮಚ್ಚರ್ ಅವರಿಗಾಗಿ ಇಸ್ರೇಲ್ ಜನತೆ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಯಾನಕ ಕ್ಷಣದಲ್ಲಿ ಅವರು ಅಸಾಧಾರಣ ಧೈರ್ಯ ಪ್ರದರ್ಶಿಸಿದ್ದಾರೆ. ಇಂದು ನಮ್ಮ ಹೃದಯಗಳು ಅವರ ಹಾಗೂ ಅವರ ಕುಟುಂಬದೊಂದಿಗಿವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಮಾನದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಪೈಲಟ್ ಆಕ್ಸಿಜನ್ ಮಾಸ್ಕ್ ಧರಿಸಿ, ವಿಮಾನದ ಹಿಂಭಾಗದ ಗ್ಯಾಲರಿಯಲ್ಲಿ ಬೆನ್ನ ಮೇಲೆ ಮಲಗಿರುವ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ವಿಮಾನ ಹೈಜಾಕ್'ಗೆ ಯತ್ನ; ಕಾಕ್‌ಪಿಟ್‌ನಲ್ಲೇ ಡೆಡ್ಲಿ ಫೈಟ್; 174 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ..!

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ: ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಳ, ವಿಮಾನ ಇಂಧನವೂ ದುಬಾರಿ..!

ಕಾಂಗ್ರೆಸ್‌ನಲ್ಲಿ ಮತ್ತೆ ಸಂಪುಟ ಸರ್ಕಸ್: ದೆಹಲಿಯಲ್ಲಿ ವೇಣುಗೋಪಾಲ್ ಭೇಟಿಯಾದ ಸಿದ್ದರಾಮಯ್ಯ, ಖಾಲಿ ಇರೋ 2 ಸಚಿವ ಸ್ಥಾನ ಭರ್ತಿಗೆ ಪಟ್ಟು..!

ಡಿಕೆಶಿ ಕನಸಿನ ಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ, ಎದುರಾಯ್ತು ಕಾನೂನು ಸಂಕಷ್ಟ..!

ಕರ್ನಾಟಕ ಮತದಾರರ ಪಟ್ಟಿ ಪರಿಷ್ಕರಣೆ: ಬುಡಕಟ್ಟು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಹೆಸರೇ ಹೆಚ್ಚು ಡಿಲೀಟ್‌? SIR ವಿರುದ್ಧ ಸಿಡಿದೆದ್ದ ಒಕ್ಕೂಟ..!