ವಿಮಾನ ಪತನದ ಅವಶೇಷಗಳು 
ವಿದೇಶ

ನೈಜೀರಿಯಾದಲ್ಲಿ ಸೇನಾ ವಿಮಾನ ಪತನ: 32 ಮಂದಿ ಸಾವು; ನದಿಯ ದಂಡೆಯ ಮೇಲೆ ಶೂ, ಚಪ್ಪಲಿ- ಮೃತದೇಹದ ಭಾಗಗಳು ಪತ್ತೆ!

ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಖಚಿತಪಡಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತಕ್ಷಣವೇ ಸಮಗ್ರ ತನಿಖೆ ನಡೆಸುವಂತೆ ವಾಯುಪಡೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಲಾಗೋಸ್: ನೈಜೀರಿಯಾ ವಾಯುಪಡೆಗೆ ಸೇರಿದ್ದ ಲಘು ವಿಮಾನ ಪತನಗೊಂಡಿದ್ದು 32 ಜನರು ಮೃತಪಟ್ಟಿದ್ದಾರೆ ಎಂದು ಸರ್ಕಾರದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ ಎಂದು ಖಚಿತಪಡಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತಕ್ಷಣವೇ ಸಮಗ್ರ ತನಿಖೆ ನಡೆಸುವಂತೆ ವಾಯುಪಡೆಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಮಾನ ಬೆನಿನ್ ನಗರದಿಂದ ಲಾಗೋಸ್‌ಗೆ ತೆರಳುತ್ತಿತ್ತು. ಮೃತಪಟ್ಟ 32 ಜನರಲ್ಲಿ 25 ಪ್ರಯಾಣಿಕರು ಹಾಗೂ ಏಳು ಸಿಬ್ಬಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದಕ್ಷಿಣ ನೈಜೀರಿಯಾದ ಕರಾವಳಿ ತೈಲ ಉತ್ಪಾದನಾ ಪ್ರದೇಶವಾದ ಒಂಡೋ ರಾಜ್ಯದ ಇಗ್ಬೊಕೊಡಾ ಬಳಿ ಈ ಅವಘಡ ಸಂಭವಿಸಿದೆ.

ವಿಮಾನವು ಸಮೀಪದ ನೌಕಾ ನೆಲೆಯ ಬಳಿಯ ಜೌಗು ಪ್ರದೇಶಕ್ಕೆ ಅಪ್ಪಳಿಸಿದೆ. ವಿಮಾನವು ಬೆನಿನ್ ನಗರದಿಂದ ದೇಶದ ಪ್ರಮುಖ ಆರ್ಥಿಕ ಕೇಂದ್ರವಾದ ಲಾಗೋಸ್‌ಗೆ ವಾಡಿಕೆಯ ಕಾರ್ಯಾಚರಣೆಯಲ್ಲಿದ್ದಾಗ ಬೆಳಗ್ಗೆ ಸುಮಾರು 9 ಗಂಟೆಗೆ ಪತನಗೊಂಡಿದೆ.

ಪತನಗೊಂಡ ವಿಮಾನವನ್ನು ಅವಳಿ-ಎಂಜಿನ್‌ನ ಟರ್ಬೊಪ್ರೊಪ್ ATR-42 ಎಂದು ಗುರುತಿಸಲಾಗಿದೆ. ಇದು ಸಾಮಾನ್ಯವಾಗಿ 30 ರಿಂದ 50 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.ಅಪಘಾತದ ವೇಳೆ ಭಾರೀ ಗುಡುಗಿನಂತಹ ಶಬ್ದ ಕೇಳಿಬಂತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಜೌಗು ಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರು ಸ್ಥಳೀಯ ನೌಕಾ ನೆಲೆಗೆ ಮಾಹಿತಿ ನೀಡಿದ ಬಳಿಕ ದೋಣಿಗಳ ಮೂಲಕ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದವು.

ದುರಂತ ಸ್ಥಳದ ಪರಿಸ್ಥಿತಿಯನ್ನು ವಿವರಿಸಿದ ಸ್ಥಳೀಯರು, ವಿಮಾನವು ನದಿಯ ಬಳಿ ಪತನಗೊಂಡಿದ್ದು, ಅದರ ಕೆಲವು ಅವಶೇಷಗಳು ನೀರಿನಲ್ಲಿ ಮುಳುಗಿವೆ, ನದಿಯ ದಂಡೆಯ ಮೇಲೆ ಶೂ, ಚಪ್ಪಲಿಗಳು, ಬಟ್ಟೆಗಳು ಹಾಗೂ ಮೃತದೇಹಗಳ ಭಾಗಗಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

FlyDubai ವಿಮಾನ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ: ಇದು ನನ್ನ ವೈಯಕ್ತಿಕ ನಂಬಿಕೆ; ಡೊನಾಲ್ಡ್ ಟ್ರಂಪ್

ಸೌದಿ ಮಿಲಿಟರಿ ಕಾರ್ಯಾಚರಣೆಗೆ ಹೌತಿ ಬಂಡುಕೋರರ ತಿರುಗೇಟು: ರಿಯಾದ್ ವಿಮಾನ ನಿಲ್ದಾಣ, ಅರಾಮ್ಕೊ ಸಂಸ್ಕರಣಾಗಾರ ಗುರಿಯಾಗಿಸಿಕೊಂಡು ದಾಳಿ!

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!

ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!

ಸರ್ಕಾರದ ಬೊಕ್ಕಸಕ್ಕೆ ಕಿಕ್ ಕೊಟ್ಟ ಮದ್ಯ ಪ್ರಿಯರು: ಮಾರಾಟ ಶೇ.41ರಷ್ಟು ಹೆಚ್ಚಳ, ಅಬಕಾರಿ ಆದಾಯ ಭಾರೀ ಏರಿಕೆ..!