ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ 
ವಿದೇಶ

'ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿ ನಿಲ್ಲಿಸಲು ಸಿದ್ಧ, ಆದ್ರೆ.. ಒಂದು ಷರತ್ತು': Zelensky ಹೇಳಿದ್ದೇನು?

'ರಷ್ಯಾ ನಮ್ಮ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರೆ, ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಉಕ್ರೇನ್ ಸಿದ್ಧವಿದೆ...

ಕೀವ್: ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಉಕ್ರೇನ್ ಸಿದ್ಧವಿದೆಯಾದರೂ ಅದಕ್ಕೆ ಒಂದು ಷರತ್ತು ಇದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟೀಕೆಯ ಬೆನ್ನಲ್ಲೇ ಭಾನುವಾರ ಝೆಲೆನ್‌ಸ್ಕಿ ಈ ಹೇಳಿಕೆ ನೀಡಿದ್ದು, ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಉಕ್ರೇನ್ ಸಿದ್ಧ. ಆದರೆ ರಷ್ಯಾ ಕೂಡ ಉಕ್ರೇನ್‌ನ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ.

ಎಕ್ಸ್ ನಲ್ಲಿ ಘೋಷಣೆ

'ರಷ್ಯಾ ನಮ್ಮ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರೆ, ರಷ್ಯಾದ ತೈಲ ಸಂಸ್ಕರಣಾಗಾರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಉಕ್ರೇನ್ ಸಿದ್ಧವಿದೆ. ಉದ್ವಿಗ್ನತೆ ತಗ್ಗಿಸುವ ಯಾವುದೇ ಕ್ರಮ ಪರಸ್ಪರವಾಗಿರಬೇಕು ಮತ್ತು ಅದಕ್ಕೆ ನೈಜ ಭದ್ರತಾ ಖಾತರಿಗಳಿರಬೇಕು' ಎಂದು ಝೆಲೆನ್‌ಸ್ಕಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದಿದ್ದಾರೆ.

ಇಂಧನ ಮೂಲಸೌಕರ್ಯಗಳೇ ಗುರಿ

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷದಲ್ಲಿ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಗಳು ಪ್ರಮುಖ ತಂತ್ರವಾಗಿ ಮುಂದುವರೆದಿವೆ. ಇಂತಹ ದಾಳಿಗಳನ್ನು ಪರಸ್ಪರ ನಿಲ್ಲಿಸುವ ಮೂಲಕ ಉದ್ವಿಗ್ನತೆ ತಗ್ಗಿಸಲು ಉಕ್ರೇನ್ ಸಿದ್ಧವಿದೆ ಎಂಬ ಸಂದೇಶವನ್ನು ಝೆಲೆನ್‌ಸ್ಕಿ ನೀಡಿದ್ದಾರೆ.

ಟ್ರಂಪ್-ಝೆಲೆನ್‌ಸ್ಕಿ ನಡುವೆ ಹೆಚ್ಚಿದ ಭಿನ್ನಾಭಿಪ್ರಾಯ

ಶುಕ್ರವಾರ ಟ್ರಂಪ್ ಅವರು ರಷ್ಯಾದಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ಅನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುವ ಒಪ್ಪಂದದ ಕುರಿತು ಘೋಷಿಸಿದ ಬಳಿಕ ಉಭಯ ನಾಯಕರ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ ಎನ್ನಲಾಗಿದೆ.

ಅಮೆರಿಕ ಮತ್ತು ಇಸ್ರೇಲ್ ಫೆಬ್ರವರಿ ಅಂತ್ಯದಲ್ಲಿ ಇರಾನ್ ಮೇಲೆ ಜಂಟಿ ದಾಳಿ ನಡೆಸಿದ ಬಳಿಕ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಾಗಿದ್ದು, ಇದಕ್ಕೆ ಪ್ರತಿಯಾಗಿ ಇರಾನ್, ತೈಲ ರಫ್ತಿಗೆ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರವನ್ನು ನಿರ್ಬಂಧಿಸಿದೆ. ಇದರ ಪರಿಣಾಮ ಅಮೆರಿಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಉಕ್ರೇನ್‌ನ ಇಂಧನ ಮೂಲಸೌಕರ್ಯಗಳ ಮೇಲೆ ರಷ್ಯಾ ದಾಳಿ

2022ರ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದ ಬಳಿಕ ರಷ್ಯಾ ಅಲ್ಲಿನ ಇಂಧನ ಮೂಲಸೌಕರ್ಯಗಳ ಮೇಲೆ ಹಲವು ಬಾರಿ ದಾಳಿ ನಡೆಸಿದೆ. ಈ ದಾಳಿಗಳಿಂದ ವಿದ್ಯುತ್ ಪೂರೈಕೆ ಮತ್ತು ತಾಪನ ವ್ಯವಸ್ಥೆಗಳಿಗೆ ಹಾನಿಯಾಗಿದ್ದು, ಚಳಿಗಾಲದಲ್ಲಿ ಲಕ್ಷಾಂತರ ಜನರು ತೊಂದರೆ ಅನುಭವಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

'ಪ್ರೇಮದ ಊರಲಿ' ಚಿತ್ರ ವೀಕ್ಷಣೆಗೆ ಹೋಗಿದ್ದವರಿಗೆ ಶಾಕ್; ಮನೆಯಲ್ಲಿ ಕಳ್ಳ ಲಾಕ್, ಸಿಕ್ಕಿಬಿದ್ದಿದ್ದೇ ರೋಚಕ!

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!