ಗಾಯಗೊಂಡ ಶಾಲಾ ಮಕ್ಕಳನ್ನು ಸಾಗಿಸುವ ಆಂಬ್ಯುಲೆನ್ಸ್‌ಗೆ ಸ್ವಯಂಸೇವಕರೊಬ್ಬರು ದಾರಿ ಮಾಡಿಕೊಡುತ್ತಿರುವುದು. 
ವಿದೇಶ

ಪೇಶಾವರದಲ್ಲಿ ಭೀಕರ ದುರಂತ: ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದಾರುಣ ಸಾವು; 40ಕ್ಕೂ ಹೆಚ್ಚು ಮಂದಿಗೆ ಗಾಯ..!

ಮೃತಪಟ್ಟ ಮಕ್ಕಳೆಲ್ಲರೂ 13 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಗಾಯಗೊಂಡ 25 ಮಕ್ಕಳನ್ನು ವಿವಿಧ ವೈದ್ಯಕೀಯ ಕೇಂದ್ರಗಳಿಗೆ ದಾಖಲಿಸಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ತಿಳಿಸಿದ್ದಾರೆ.

ಪೇಶಾವರ (ಪಾಕಿಸ್ತಾನ): ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ರಾಜಧಾನಿ ಪೇಶಾವರದ ದಿರ್ ಕಾಲೋನಿ ಪ್ರದೇಶದಲ್ಲಿ ಗುರುವಾರ ಖಾಸಗಿ ಶಾಲೆಯೊಂದರ ಮೇಲ್ಛಾವಣಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ದುರ್ಘಟನೆಯಲ್ಲಿ ಕನಿಷ್ಠ 17 ಮಕ್ಕಳು ಹಾಗೂ ಓರ್ವ ಮಹಿಳಾ ಶಿಕ್ಷಕಿ ದುರ್ಮರಣಕ್ಕೀಡಾಗಿದ್ದಾರೆ.

ದುರಂತದಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.

ಪೇಶಾವರದ ಒಳಭಾಗದಲ್ಲಿರುವ ದಿರ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ಪೇಶಾವರ ಕ್ಯಾಪಿಟಲ್ ಸಿಟಿ ಪೊಲೀಸ್ ಮುಖ್ಯಸ್ಥ ಮಿಯಾನ್ ಸಯೀದ್ ತಿಳಿಸಿದ್ದಾರೆ.

ಘಟನೆಯಲ್ಲಿ 17 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಲೇಡಿ ರೀಡಿಂಗ್ ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಆಸ್ಪತ್ರೆಯ ವಕ್ತಾರ ಮೊಹಮ್ಮದ್ ಆಸಿಮ್ ತಿಳಿಸಿದ್ದಾರೆ.

ಮೃತಪಟ್ಟ ಮಕ್ಕಳೆಲ್ಲರೂ 13 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಗಾಯಗೊಂಡ 25 ಮಕ್ಕಳನ್ನು ವಿವಿಧ ವೈದ್ಯಕೀಯ ಕೇಂದ್ರಗಳಿಗೆ ದಾಖಲಿಸಲಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ತಿಳಿಸಿದ್ದಾರೆ.

ಕುಸಿದ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ರಕ್ಷಣಾ ತಂಡಗಳು ತೊಡಗಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ಮಕ್ಕಳು ಅಥವಾ ಶಾಲಾ ಸಿಬ್ಬಂದಿ ಸಿಲುಕಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ದುರಂತದ ಬಗ್ಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಮೂಲ್ಯ ಜೀವಗಳ ನಷ್ಟದಿಂದ ಅತೀವ್ರ ನೋವು ತಂದಿದೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಈ ತುಂಬಲಾರದ ನಷ್ಟವನ್ನು ಸಹಿಸಿಕೊಳ್ಳಲು ಅವರಿಗೆ ಶಕ್ತಿ ಮತ್ತು ತಾಳ್ಮೆ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಕಟ್ಟಡಗಳ ಮೇಲ್ಛಾವಣಿ ಮತ್ತು ಕಟ್ಟಡಗಳು ಕುಸಿಯುವ ಘಟನೆಗಳು ಸಾಮಾನ್ಯವಾಗಿವೆ. ಕಳಪೆ ಸುರಕ್ಷತಾ ಮಾನದಂಡಗಳು ಹಾಗೂ ಕಳಪೆ ಗುಣಮಟ್ಟದ ನಿರ್ಮಾಣ ಸಾಮಗ್ರಿಗಳು ಇಂತಹ ದುರಂತಗಳಿಗೆ ಪ್ರಮುಖ ಕಾರಣಗಳಾಗಿವೆ.

ಈ ವರ್ಷದ ಜೂನ್‌ನಲ್ಲಿ ಪೂರ್ವದ ಲಾಹೋರ್ ನಗರದಲ್ಲಿರುವ ಟ್ಯೂಷನ್ ಕೇಂದ್ರವೊಂದರ ಮೇಲ್ಛಾವಣಿ ಕುಸಿದು ಹತ್ತಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದರು.

2025ರಲ್ಲಿ ದಕ್ಷಿಣದ ಕರಾಚಿ ನಗರದ ಬಡ ಪ್ರದೇಶವಾದ ಲಿಯಾರಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು 27 ಮಂದಿ ಮೃತಪಟ್ಟಿದ್ದು, 10 ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!