ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

China ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಮೆರಿಕಕ್ಕೆ; ಸೆ.24ರಂದು ಶ್ವೇತಭವನದಲ್ಲಿ ಔತಣಕೂಟ, Iran ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದ Trump

ಕ್ಸಿ ಜಿನ್‌ಪಿಂಗ್ ಅವರ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಟ್ರಂಪ್, ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಉಭಯ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದು ಹೇಳಿದರು.

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಶೃ ಜಿನ್‌ಪಿಂಗ್ ಅವರಿಗೆ ವೈಟ್‌ ಹೌಸ್‌ನಲ್ಲಿ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ.

2016ರ ನಂತರ ಇದೇ ಮೊದಲ ಬಾರಿಗೆ ಚೀನಾ ಅಧ್ಯಕ್ಷರು ವಾಷಿಂಗ್ಟನ್‌ಗೆ ಭೇಟಿ ನೀಡುತ್ತಿದ್ದು, ಈ ಹೈ-ಪ್ರೊಫೈಲ್ ಔತಣಕೂಟ ಸೆಪ್ಟೆಂಬರ್ 24 ರಂದು ನಡೆಯಲಿದೆ ಎಂದು ಶ್ವೇತಭವನ ಪ್ರಕಟಿಸಿದೆ.

ಈ ಕುರಿತು ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ 24ರಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಶ್ವೇತಭವನದಲ್ಲಿ ರಾಜ್ಯ ಔತಣಕೂಟಕ್ಕೆ ಆತಿಥ್ಯ ವಹಿಸುವುದಾಗಿ ತಿಳಿಸಿದ್ದು, ಇದೇ ವೇಳೆ ಇರಾನ್‌ನಲ್ಲಿನ ಸಂಘರ್ಷ ಅಮೆರಿಕಕ್ಕೆ ‘ಸಣ್ಣ ವಿಚಾರ’ ಎಂದು ಬಣ್ಣಿಸಿದ್ದಾರೆ.

ನಾವು ಈ ಔತಣಕೂಟ ಆಯೋಜಿಸಲಿದ್ದು, ಚೀನಾದೊಂದಿಗೆ ಉತ್ತಮ ಕೆಲಸಗಳನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಕ್ಸಿ ಜಿನ್‌ಪಿಂಗ್ ಅವರ ಭೇಟಿಯನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ ಟ್ರಂಪ್, ಅವರನ್ನು ‘ಉತ್ತಮ ವ್ಯಕ್ತಿ’ ಎಂದು ಬಣ್ಣಿಸಿದರು. ಅಮೆರಿಕ ಮತ್ತು ಚೀನಾ ಪರಸ್ಪರ ಸ್ಪರ್ಧಿಗಳಾಗಿದ್ದರೂ ಉಭಯ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ ಎಂದು ಹೇಳಿದರು.

ಅವರ ಭೇಟಿಯನ್ನು ನಾವು ಎದುರು ನೋಡುತ್ತಿದ್ದೇವೆ. ಅವರು ಒಬ್ಬ ಉತ್ತಮ ವ್ಯಕ್ತಿ. ನಾವು ಉತ್ತಮ ಬಾಂಧವ್ಯವನ್ನು ಹೊಂದಿಕೊಂಡಿದ್ದೇವೆ. ಅಧ್ಯಕ್ಷ ಕ್ಸಿ ಅವರೊಂದಿಗೆ ನಮಗೆ ಉತ್ತಮ ಸಂಬಂಧವಿದೆ. ಶ್ವೇತಭವನದ ಆವರಣದಲ್ಲಿ ನಿರ್ಮಿಸುತ್ತಿರುವ ಹೊಸ ಹೆಲಿಪ್ಯಾಡ್ ಕ್ಸಿ ಅವರ ಭೇಟಿಯ ವೇಳೆಗೆ ಸಿದ್ಧವಾಗಲಿದೆ ಎಂದು ತಿಳಿಸಿದರು.

ಇದೇ ವೇಳೆ ಇರಾನ್ ಸಂಘರ್ಷವನ್ನು ‘ಸಣ್ಣ ವಿಚಾರ’ ಎಂದು ಕರೆದ ಜೆಡಿ.ವ್ಯಾನ್ಸ್ ಅವರ ಹೇಳಿಕೆಯನ್ನು ಟ್ರಂಪ್ ಸಮರ್ಥಿಸಿಕೊಂಡರು.

ಈ ಸಂಘರ್ಷವನ್ನು ಯುದ್ಧ ಎಂದು ಕರೆಯುವುದಿಲ್ಲ ಎಂದು ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹೇಳಿದ ಒಂದು ದಿನದ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

ಬಹಳಷ್ಟು ಜನ ಇದನ್ನು ಯುದ್ಧ ಎಂದು ಕರೆಯುವುದಿಲ್ಲ. ನಾನು ಇದನ್ನು ಸೇನಾ ಸಂಘರ್ಷ ಎಂದು ಕರೆಯುತ್ತೇನೆ. ಏಕೆಂದರೆ ಇದು ನಮಗೆ ಸಣ್ಣ ವಿಚಾರ. ಇದು ದೊಡ್ಡ ವಿಷಯವಲ್ಲ ಎಂದು ಹೇಳಿದರು.

ಇರಾನ್ ವಿರುದ್ಧದ ಅಮೆರಿಕದ ದಾಳಿಗಳು ಇದೀಗ ಮಧ್ಯಂತರವಾಗಿ ನಡೆಯುತ್ತಿವೆ ಎಂದ ಅವರು, ವ್ಯಾನ್ಸ್ ಅವರ ನಿಲುವನ್ನು ತಾವು ಅರ್ಥಮಾಡಿಕೊಂಡಿರುವುದಾಗಿ ತಿಳಿಸಿದರು.

ಇದೇ ವೇಳೆ ಕತಾರ್ ನೀಡಿರುವ ಹೊಸ ಏರ್ ಫೋರ್ಸ್ ಒನ್ ವಿಮಾನವನ್ನು ನಿರೀಕ್ಷೆಗಿಂತ ಹೆಚ್ಚು ಅವಧಿಗೆ ನವೀಕರಣ ಕಾಮಗಾರಿಗೆ ಒಳಪಡಿಸಲಾಗುವುದು ಎಂದು ಟ್ರಂಪ್ ಹೇಳಿದರು.

ಟರ್ಕಿಯಲ್ಲಿ ಎದುರಾದ ಭದ್ರತಾ ಬೆದರಿಕೆಯ ಹಿನ್ನೆಲೆಯಲ್ಲಿ ಮತ್ತೊಂದು ವಿಮಾನದಲ್ಲಿ ಪ್ರಯಾಣಿಸಬೇಕಾಯಿತು. ವಿಮಾನವನ್ನು ಅಕ್ಟೋಬರ್‌ನಲ್ಲಿ ನವೀಕರಣಕ್ಕಾಗಿ ಕಳುಹಿಸಲಾಗುವುದು. ಕಾಮಗಾರಿ ಪೂರ್ಣಗೊಳ್ಳಲು ಸುಮಾರು 60 ದಿನಗಳು ಬೇಕಾಗಬಹುದು ಎಂದು ಟ್ರಂಪ್ ತಿಳಿಸಿದರು. ಈ ಹಿಂದೆ ಜುಲೈ 19ರಂದು ನವೀಕರಣಕ್ಕೆ ಸುಮಾರು ಒಂದು ತಿಂಗಳು ಬೇಕಾಗಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Park Billiಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ: ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!

ಕೇವಲ ಬರ ವೀಕ್ಷಣೆಯಲ್ಲ; ರೈತರ ಜೀವನ ದರ್ಶನ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ರೈತನಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು ಸುರಂಗ ರಸ್ತೆ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಳ..! ಇಷ್ಟು ಹಣ ಬೇಕೇ..?

ಮನಮೋಹನ್ ಸಿಂಗ್ ಮಾಡಿದಂತೆ ಕೇಂದ್ರ ಸರ್ಕಾರ ಸಾಲಮನ್ನಾ ಮಾಡಲಿ: 15 ದಿನಗಳಲ್ಲಿ ಮತ್ತಷ್ಟು ತಾಲ್ಲೂಕುಗಳ ಪಟ್ಟಿ; ಸಿಎಂ ಡಿ ಕೆ ಶಿವಕುಮಾರ್

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky