ಅಮೆಜಾನ್ ಕಾರ್ಗೋ ವಿಮಾನ 
ವಿದೇಶ

ರನ್‌ವೇಯಿಂದ ಜಾರಿದ ಅಮೆಜಾನ್ ಕಾರ್ಗೋ ವಿಮಾನ; ವಾಹನಗಳಿಗೆ ಡಿಕ್ಕಿ, ಕನಿಷ್ಠ ಐವರು ಸಾವು!

ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಬಂದ ವಿಮಾನವು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿದೆ.

ಮಿಯಾಮಿ: ಅಮೆರಿಕದ ಮಿಯಾಮಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಅಮೆಜಾನ್ ಕಂಪನಿಯ ಕಾರ್ಗೋ ವಿಮಾನವೊಂದು ರನ್‌ವೇಯಿಂದ ಜಾರಿ, ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಬಂದ ವಿಮಾನವು, ಮಧ್ಯಾಹ್ನ 2 ಗಂಟೆ ಸುಮಾರಿಗೆ ಲ್ಯಾಂಡಿಂಗ್ ವೇಳೆ ರನ್‌ವೇಯಿಂದ ಜಾರಿ, ಗೋದಾಮಿನ ಕಡೆ ನುಗ್ಗಿದೆ. ಪರಿಣಾಮ ಐದು ಜನ ಮೃತಪಟ್ಟಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಗಾಯಗೊಂಡವರ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಿಯಾಮಿ-ಡೇಡ್ ಕೌಂಟಿ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೃತರು ಪೈಲಟ್‌ಗಳೋ ಅಥವಾ ವಾಹನಗಳಲ್ಲಿದ್ದವರೋ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ.

ಘಟನೆಯ ನಂತರ ಕೆಲಕಾಲ ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದರಿಂದ 250 ವಿಮಾನಗಳ ಹಾರಾಟ ವಿಳಂಬವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ: ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!

Varanasi: ತೆಲುಗು ರಾಜ್ಯಗಳಲ್ಲಿ ಬರೋಬ್ಬರಿ 320 ಕೋಟಿಗೆ ಥಿಯೇಟ್ರಿಕಲ್ ಹಕ್ಕುಗಳ ಮಾರಾಟ? ರಾಜಮೌಳಿಗೆ ತಲೆಬಿಸಿ!

ಮೊದಲ ಬಾರಿ ಬುಕ್‌ಮೈಶೋನಲ್ಲಿ ಮೋದಿ ಕಾರ್ಯಕ್ರಮಕ್ಕೆ ಬುಕಿಂಗ್; ಒಂದೇ ಗಂಟೆಯಲ್ಲಿ ಎಲ್ಲ ಸೀಟ್ ಭರ್ತಿ! ವೇಟಿಂಗ್ ಎಷ್ಟು ಗೊತ್ತಾ?

SC/ST ಪ್ರಕರಣ; ಹಿಂದುತ್ವವಾದಿ ಸ್ವತಂತ್ರ ಭಾರದ್ವಾಜ್‌ಗೆ ಹೈಕೋರ್ಟ್ ಶಾಕ್: 14 ದಿನ ನ್ಯಾಯಾಂಗ ಬಂಧನ!