ಭಾರತೀಯ ಕರಾವಳಿ ರಕ್ಷಣಾ ಪಡೆ 
ವಿದೇಶ

ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಭರ್ಜರಿ ಬೇಟೆ: 3,000 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 5 ಪಾಕ್ ಪ್ರಜೆಗಳ ಬಂಧನ..!

ಸೆಪ್ಟೆಂಬರ್ 25ರಂದು ಲಕ್ಷದ್ವೀಪದ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ದೋಣಿಯನ್ನು ನಿರ್ವಹಿಸುತ್ತಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರಾವಳಿ ಕಾವಲು ಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಬೈ: ದೇಶದ ಕರಾವಳಿ ಭದ್ರತಾ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕಾರ್ಯಾಚರಣೆಯೊಂದರಲ್ಲಿ, ಅರಬ್ಬಿ ಸಮುದ್ರದಲ್ಲಿ ಇರಾನಿನ ದೋಣಿಯೊಂದರ ಮೇಲೆ ದಾಳಿ ನಡೆಸಿರುವ ಭದ್ರತಾ ಪಡೆಗಳು, ಬರೋಬ್ಬರಿ ರೂ.3,000 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ (ICG) ಮತ್ತು ಗುಜರಾತ್ ಎಟಿಎಸ್ (ATS) ಜಂಟಿಯಾಗಿ ನಡೆಸಿದ ಈ ಭರ್ಜರಿ ಕಾರ್ಯಾಚರಣೆಯಲ್ಲಿ ದೋಣಿಯಲ್ಲಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.

ಸೆಪ್ಟೆಂಬರ್ 25ರಂದು ಲಕ್ಷದ್ವೀಪದ ಸಮೀಪ ನಡೆಸಿದ ಕಾರ್ಯಾಚರಣೆಯಲ್ಲಿ ದೋಣಿಯನ್ನು ನಿರ್ವಹಿಸುತ್ತಿದ್ದ ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರಾವಳಿ ಕಾವಲು ಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿ ಆಧರಿಸಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸಮುದ್ರ ಹಾಗೂ ವಾಯು ಮಾರ್ಗದ ಮೂಲಕ ನಿಗಾ ವಹಿಸಿದ್ದರು.

ಅನುಮಾನಾಸ್ಪದ ದೋಣಿಯ ಚಲನವಲನವನ್ನು ಪತ್ತೆಹಚ್ಚಿದ ಬಳಿಕ ಬೆನ್ನಟ್ಟಿದ ಸಿಬ್ಬಂದಿ, ಲಕ್ಷದ್ವೀಪದ ಪಶ್ಚಿಮ ಭಾಗದಲ್ಲಿ ದೋಣಿಯನ್ನು ತಡೆದು ಹತ್ತಿ ಪರಿಶೀಲನೆ ನಡೆಸಿದ್ದಾರೆ.

ವಶಪಡಿಸಿಕೊಂಡ ಮಾದಕ ವಸ್ತುಗಳಲ್ಲಿ ಹೆಚ್ಚಿನ ಗುಣಮಟ್ಟದ ಮೆಥಾಂಫೆಟಮೈನ್ ಮತ್ತು ಹೆರಾಯಿನ್ ಸೇರಿವೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.

ದೋಣಿ, ಅದರಲ್ಲಿದ್ದ ಸಿಬ್ಬಂದಿ ಹಾಗೂ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ಶಸ್ತ್ರಸಜ್ಜಿತ ಭದ್ರತೆಯೊಂದಿಗೆ ಮುಂಬೈಗೆ ಕರೆತರಲಾಗಿದೆ. ಇಲ್ಲಿ ಜಂಟಿ ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್ ಉಗ್ರ ನಿಗ್ರಹ ದಳದ ಸಹಕಾರದೊಂದಿಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಐವರು ಪಾಕಿಸ್ತಾನಿ ಪ್ರಜೆಗಳನ್ನು ವಶಕ್ಕೆ ಪಡೆದಿರುವುದನ್ನು ರಾಜ್ಯ ಭಯೋತ್ಪಾದನೆ ನಿಗ್ರಹ ದಳವೂ ಖಚಿತಪಡಿಸಿದೆ. ಕಾರ್ಯಾಚರಣೆಯ ಕುರಿತು ಅದು ಬುಧವಾರವೇ ಮಾಧ್ಯಮಗಳಿಗೆ ಮಾಹಿತಿ ನೀಡುವ ಸಾಧ್ಯತೆಯಿದೆ.

ಸಮುದ್ರ ಮಾರ್ಗದ ಮೂಲಕ ನಡೆಯುತ್ತಿರುವ ಅಂತಾರಾಷ್ಟ್ರೀಯ ಮಾದಕ ವಸ್ತು ಸಾಗಣೆಯನ್ನು ತಡೆಯಲು ಭದ್ರತಾ ಸಂಸ್ಥೆಗಳು ಕಾರ್ಯಾಚರಣೆಗಳನ್ನು ತೀವ್ರಗೊಳಿಸಿರುವ ನಡುವೆಯೇ ಈ ಕಾರ್ಯಾಚರಣೆ ನಡೆದಿದೆ.

ತಮ್ಮ ಕಣ್ಗಾವಲು ಹಾಗೂ ಸಮುದ್ರ ಮಾರ್ಗದ ಅಕ್ರಮ ಚಟುವಟಿಕೆ ತಡೆ ಸಾಮರ್ಥ್ಯವನ್ನು ಈ ಕಾರ್ಯಾಚರಣೆ ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಕರಾವಳಿ ಕಾವಲು ಪಡೆ ತಿಳಿಸಿದೆ.

ಭಾರತದ ಸಮುದ್ರ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಬದ್ಧತೆಯನ್ನು ಇದು ತೋರಿಸುತ್ತದೆ. ಈ ಜಪ್ತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲಗಳ ಆರ್ಥಿಕ ಮೂಲಕ್ಕೆ ಹೊಡೆತ ನೀಡಲು ಹಾಗೂ ಕೃತಕ ಮಾದಕ ವಸ್ತುಗಳು ದೇಶದ ಒಳಭಾಗಕ್ಕೆ ತಲುಪುವುದನ್ನು ತಡೆಯಲು ಸಹಾಯವಾಗಲಿದೆ ಎಂದು ಕರಾವಳಿ ಕಾವಲು ಪಡೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ; ವಿಶ್ವ ದಾಖಲೆ ಬರೆದ ಮಹಿಳಾ ಆರ್ಚರಿ ಟೀಮ್..!

Budgam encounter: LET ಮೋಸ್ಟ್ ವಾಂಟೆಡ್ ಉಗ್ರ ಸುಲೈಮಾನ್ ಶಾ ಅಲಿಯಾಸ್ ಮೂಸಾ ಹತ, ಮುಂದುವರೆದ ಸೇನಾ ಕಾರ್ಯಾಚರಣೆ

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ. ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಬೆಂಗಳೂರು ವಿಸ್ತರಣೆಗೆ ಸರ್ಕಾರ ಹೊಸ ರೂಪುರೇಷೆ: ಭವಿಷ್ಯದ ಸಂಚಾರ ಸಮಸ್ಯೆ ತಡೆಯಲು ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು ಪೊಲೀಸ್ ಇಲಾಖೆಯಲ್ಲಿ ಮಹಾ ಬದಲಾವಣೆ: GBA ಮಾದರಿಯಲ್ಲಿ ಮರುಸಂಘಟನೆ, ಅಕ್ಟೋಬರ್‌ನಲ್ಲಿ ಅಧಿಸೂಚನೆ ಸಾಧ್ಯತೆ..!