ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ರನ್ ದಾಖಲಿಸಿದ ಟಾಪ್ 5 ತಂಡಗಳು

Vishwanath S

ಪ್ರಸ್ತುತದ ಐಪಿಎಲ್ ಆವೃತ್ತಿಯಲ್ಲಿ ರನ್ ಹೊಳೆಯೇ ಹರಿಯುತ್ತಿದೆ. ಈ ಬಾರಿ ಮೂರು ತಂಡಗಳು 250ಕ್ಕೂ ಹೆಚ್ಚು ರನ್ ಬಾರಿಸಿವೆ. ಆರ್ ಸಿಬಿ ವಿರುದ್ಧ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ 287 ರನ್ ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದೆ.

ಇದೇ ಆವೃತ್ತಿಯಲ್ಲಿ ಮತ್ತದೇ ಸನ್ ರೈಸರ್ಸ್ ಹೈದರಾಬಾದ್ ತಂಡ ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ 277 ರನ್ ಬಾರಿಸಿದೆ. ಈ ಮೂಲಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನವನ್ನು ಪಡೆದಿದೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವೈಜಾಗ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 272 ರನ್ ಬಾರಿಸುವ ಮೂಲಕ ಮೂರನೇ ಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2013ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್ ಇಂಡಿಯಾ ತಂಡದ ವಿರುದ್ಧ 263 ರನ್ ಬಾರಿಸಿತ್ತು. ಆ ಮೂಲಕ 2024ರವರೆಗೆ RCB ಅಗ್ರಸ್ಥಾನದಲ್ಲೇ ಇತ್ತು.

ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡ 2023ರಲ್ಲಿ ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 257 ರನ್ ಪೇರಿಸುವ ಮೂಲಕ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IPL 2024: ಒಂದೇ ಟೂರ್ನಿಯಲ್ಲಿ 2 ವಿಶ್ವದಾಖಲೆ ನಿರ್ಮಿಸಿದ ಸನ್ ರೈಸರ್ಸ್ ಹೈದರಾಬಾದ್, RCBಯದ್ದೂ ವಿಶಿಷ್ಟ Record