ಅಜಾತಶತ್ರು ಎಸ್ಎಂ ಕೃಷ್ಣ ಜೀವನದ ಅಪರೂಪದ ಕ್ಷಣಗಳು! Photos

Vishwanath S

ರಾಜಕೀಯ ಪಡುಸಾಲೆಯಲ್ಲಿ ಅಜಾತಶತ್ರುವಾಗಿ ಗುರುತಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ಅವರು ಇಂದು ವಿಧಿವಶರಾಗಿದ್ದಾರೆ.

1932ರ ಮೇಲೆ 1ರಂದು ಮಂಡ್ಯದ ಸೋಮನಹಳ್ಳಿಯಲ್ಲಿ ಜನಿಸಿದ್ದ ಎಸ್ಎಂ ಕೃಷ್ಣ ಅವರು, ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು.

1989ರಿಂದ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಅವರು, 1999ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದು ಅದೇ ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಮೊದಲ ಬಾರಿಗೆ 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಪ್ರವೇಶ ಮಾಡಿದರು. 1968ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದರು. 1971ರಲ್ಲಿ ಮರು ಚುನಾಯಿತರಾಗಿ ಮತ್ತೆ 1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಆಯ್ಕೆಯಾದರು.

1983ರಲ್ಲಿ ಉದ್ಯಮ ಖಾತೆ ಮತ್ತು 1984ರಲ್ಲಿ ವಿತ್ತ ಖಾತೆಯ ಸಚಿವರಾದರು. 1989ರಿಂದ 1992ರವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. ಅಲ್ಲದೆ 1992ರಿಂದ 1994ರವರೆಗೆ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

1995ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್ಎಂಕೃಷ್ಣ ಸೋಲು ಅನುಭವಿಸಿದರು. ಆ ವೇಳೆ ರಾಜಕೀಯದಲ್ಲಿ ಕೃಷ್ಣ ಅವರ ಸೋಲು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಎಸ್ ಎಂ ಕೃಷ್ಣ ಅವರು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. 2009- 2012ರವರೆಗೆ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಒಟ್ಟಾರೆಯಾಗಿ ಎಸ್ ಎಂ ಕೃಷ್ಣ ಅವರು ಪ್ರಮುಖ 10 ಚುನಾವಣೆಗಳನ್ನು ಎದುರಿಸಿದ್ದಾರೆ. 6 ವಿಧಾನಸಭಾ ಚುನಾವಣೆಗಳನ್ನು ಎದುರಿಸಿದ್ದು, ಇವುಗಳಲ್ಲಿ 4 ರಲ್ಲಿ ಗೆಲುವು, 2 ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದರು.

ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದ ಅವರು ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2017ರ ಮಾರ್ಚ್​ನಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪಡೆದಿದ್ದರು.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ. ಕೃಷ್ಣ ಅವರ ಅವಧಿಯಲ್ಲಿ ನಡೆದ ವರನಟ ಡಾ.ರಾಜ್​ಕುಮಾರ್ ಅಪಹರಣ, ಕಾಡುಗಳ್ಳ ವೀರಪ್ಪನ್​ನಿಂದ ಅವರನ್ನು ಬಿಡುಗಡೆ ಮಾಡಿಸಿದ್ದೇ ರೋಚಕ.

2023ನೇ ಸಾಲನ ಪದ್ಮ ಪ್ರಶಸ್ತಿ ಪ್ರಕಟವಾಗಿದ್ದು ಎಸ್ಎಂ ಕೃಷ್ಣ ಹೆಸರು ಘೋಷಣೆಯಾಗಿತ್ತು. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕೃಷ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು.

4 ಲೋಕಸಭಾ ಚುನಾವಣೆಗಳನ್ನು ಎದುರಿಸಿದ್ದು, ಈ ಪೈಕಿ 3 ಚುನಾವಣೆಯಲ್ಲಿ ಗೆಲುವು ಪಡೆದು, 1 ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಮದ್ದೂರು ಕ್ಷೇತ್ರದಿಂದ 3 ಬಾರಿ ಹಾಗೂ ಚಾಮರಾಜಪೇಟೆಯಿಂದ 1 ಬಾರಿ ಶಾಸಕರಾಗಿದ್ದಾರೆ.

ಎಸ್ಎಂ ಕೃಷ್ಣ ಅವರಿಂದ ಮಾರ್ಗದರ್ಶನ ಪಡೆದಿದ್ದ ರಮ್ಯಾ.

ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರಿಗೆ ಕ್ರೀಡೆಯ ಮೇಲೆ ಅಪಾರ ಪ್ರೀತಿ ಇತ್ತು. ತಮ್ಮ ಬ್ಯೂಸಿ ಶೆಡ್ಯೂಲ್‌ನಲ್ಲಿ ರಾಕೆಟ್‌ ಹಿಡಿದು, ಟೆನಿಸ್ ಆಡುವುದು ಹಾಗೂ ನೋಡುವುದು ಎಂದರೆ ಅವರಿಗೆ ಅಚ್ಚು ಮೆಚ್ಚು.

ಎಸ್ಎಂ ಕೃಷ್ಣ ಅವರು ಪತ್ನಿ ಪ್ರೇಮಾ ಕೃಷ್ಣ, ಪುತ್ರಿಯರಾದ ಶಾಂಭವಿ, ಮಾಳವಿಕ ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರನ್ನು ಬಿಟ್ಟು ಅಗಲಿದ್ದಾರೆ. 

ಐಟಿ ಸಿಟಿʼಯಾಗಿ ಮಾರ್ಪಡಿಸಿದ್ದ ಮುತ್ಸದ್ಧಿ ಎಸ್‌ಎಂ ಕೃಷ್ಣ