ಭಾರತದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರವಾಗಿದ್ದ ಆರ್ ಅಶ್ವಿನ್ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 3ನೇ ಪಂದ್ಯದ ಬಳಿಕ ಅಚ್ಚರಿ ರೀತಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದರು.
ಭಾರತದ ವಿಕೆಟ್ ಕೀಪರ್ ಬ್ಯಾಟರ್ ವೃದ್ದಿಮಾನ್ ಸಾಹ ನವೆಂಬರ್ 3ರಂದು 2024-25 Ranji Trophy ಮುಕ್ತಾಯ ಬೆನ್ನಲ್ಲೇ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು.
ಭಾರತ ತಂಡದ ಪ್ರಮುಖ ಬ್ಯಾಟರ್ ಆಗಿದ್ದ ಶಿಖರ್ ಧವನ್ ಐಪಿಎಲ್ ಸೇರಿದಂತೆ ಎಲ್ಲ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. 2022ರ ಡಿಸೆಂಬರ್ ನಲ್ಲಿ ಧವನ್ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು.
ಭಾರತ ತಂಡದ ಆಲ್ರೌಂಡರ್ ರವೀಂದ್ರ ಜಡೇಜಾ ICC T20 World Cup 2024 ವಿಶ್ವಕಪ್ ಟೂರ್ನಿ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವಿದಾಯ ಘೋಷಿಸಿದ್ದರು.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ICC T20 World Cup 2024 ವಿಶ್ವಕಪ್ ಟೂರ್ನಿ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವಿದಾಯ ಘೋಷಿಸಿದ್ದಾರೆ.
ಭಾರತದ ರನ್ ಮೆಶಿನ್ ವಿರಾಟ್ ಕೊಹ್ಲಿ ICC T20 World Cup 2024 ವಿಶ್ವಕಪ್ ಟೂರ್ನಿ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವಿದಾಯ ಘೋಷಿಸಿದ್ದಾರೆ.
ಜೂನ್ ತಿಂಗಳಲ್ಲಿ ಭಾರತದ ಆಲ್ರೌಂಡರ್ ಕೇದಾರ್ ಜಾದವ್ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು.
2004 ಸೆಪ್ಟೆಂಬರ್ ನಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ IPL 2024ರ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು.
ಜಾರ್ಖಂಡ್ ಮೂಲದ ವೇಗಿ ವರುಣ್ ಆ್ಯರೋನ್ Ranji Trophy 2023-24 ಟೂರ್ನಿ ಬಳಿಕ ವಿದಾಯ ಹೇಳಿದ್ದರು.
ಫೆಬ್ರವರಿಯಲ್ಲಿ 2024ರಲ್ಲಿ ಸೌರಭ್ ತಿವಾರಿ ನಿವೃತ್ತರಾಗಿದ್ದು, 2010 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.