IPL 2024: ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಭಾರತೀಯ ಆಟಗಾರರು!

Vishwanath S

10. ಕೋಲ್ಕತ್ತಾ ನೈಟ್ ರೈಡರ್ಸ್ ಈ ಬಾರಿ ಶ್ರೇಯಸ್ ಅಯ್ಯರ್ ಮೇಲೆ 12.25 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಅಲ್ಲದೆ ಈ ಬಾರಿಯ ತಂಡ ನಾಯಕತ್ವದ ಜವಾಬ್ದಾರಿಯನ್ನು ಶ್ರೇಯಸ್ ಅಯ್ಯರ್ ಗೆ ನೀಡಿದೆ.

9. 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 14 ಕೋಟಿ ರೂಪಾಯಿ ಬಿಡ್ ಮಾಡಿ ದೀಪಕ್ ಚಹಾರ್ ನನ್ನು ಖರೀದಿಸಿತ್ತು.

8. ರಾಜಸ್ಥಾನ ರಾಯಲ್ಸ್ ತಂಡ ನಾಯಕ ಸಂಜು ಸ್ಯಾಮ್ಸನ್ ರನ್ನು ಉಳಿಸಿಕೊಂಡಿದ್ದು 14 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ.

7. 2024ರ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಕಿರು ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯಗೆ 15 ಕೋಟಿ ರೂಪಾಯಿ ನೀಡಿ ಖರೀದಿಸಿದೆ.

6. 2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದು ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು 15 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ.

5. 2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ನನ್ನು 15.25 ಕೋಟಿ ರೂಪಾಯಿ ನೀಡಿ ಖರೀದಿಸಿತ್ತು.

4. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾರನ್ನು ಉಳಿಸಿಕೊಂಡಿದ್ದು 16 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ. ಆದರೆ ಈ ಬಾರಿ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವ ಸಾಧ್ಯತೆ ಕಡಿಮೆ ಇದೆ.

3. ಕಳೆದ ವರ್ಷದ ಅಪಘಾತದಿಂದಾಗಿ ತಂಡದಿಂದ ದೂರ ಉಳಿದಿದ್ದ ನಾಯಕ ಮತ್ತು ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ರನ್ನು ಉಳಿಸಿಕೊಂಡಿದ್ದು ಪಂತ್ ಗೆ 16 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ.

2. ಚೆನ್ನೈ ಸೂಪರ್ ಕಿಂಗ್ಸ್ ಸಹ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ಉಳಿಸಿಕೊಂಡಿದ್ದು 16 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದೆ. 2023ರಲ್ಲಿ ಚೆನ್ನೈ ಚಾಂಪಿಯನ್ ಆಗುವಲ್ಲಿ ರವೀಂದ್ರ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು.

1. ಲಖನೌ ಸೂಪರ್ ಜೈಂಟ್ಸ್ ತಂಡ ಕೆಎಲ್ ರಾಹುಲ್ ಅವರನ್ನು ಉಳಿಸಿಕೊಂಡಿದ್ದು 17 ಕೋಟಿ ರೂಪಾಯಿ ಸಂಭಾವನೆ ನೀಡುತ್ತಿದ್ದು ಸದ್ಯದ ಮಟ್ಟಿಗೆ ಭಾರತೀಯ ಆಟಗಾರರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಅಗ್ರ ಆಟಗಾರನಾಗಿದ್ದಾರೆ.