IN PICS | ಥಾಯ್ಲೆಂಡ್‌: ಶಾಲಾ ಬಸ್‌ಗೆ ಬೆಂಕಿ; 25 ಮಂದಿ ಸಜೀವ ದಹನ

Online Team

ಬ್ಯಾಂಕಾಕ್‌ನ ಉಪನಗರದಲ್ಲಿ ಯುವ ವಿದ್ಯಾರ್ಥಿಗಳನ್ನು ಅವರ ಶಿಕ್ಷಕರೊಂದಿಗೆ ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 25 ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಉತೈ ಥಾನಿ ಪ್ರಾಂತ್ಯದಿಂದ ಶಾಲಾ ಪ್ರವಾಸಕ್ಕಾಗಿ ಅಯುತಾಯಕ್ಕೆ 44 ಮಂದಿಯನ್ನು ಕರೆದೊಯ್ಯುತ್ತಿದ್ದ ಸಂದರ್ಭ ಬಸ್‌ ಗೆ ಬೆಂಕಿ ಹೊತ್ತಿಕೊಂಡಿದೆ.

ಇಡೀ ಬಸ್ ಗೆ ಬೆಂಕಿ ಹೊತ್ತಿಕೊಂಡು ರಸ್ತೆ ಮಧ್ಯೆ ನಿಂತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಒಂದು ಟೈರ್‌ ಸ್ಫೋಟಗೊಂಡು ಅನಂತರ ವಾಹನವು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ರಸ್ತೆಯಲ್ಲಿ ನಿಲ್ಲಿಸಿದ ಬಸ್ಸಿನ ಹೊರಗೆ ಕಪ್ಪು ಹೊಗೆಯು ಕಾಣಿಸಿಕೊಂಡಿತ್ತು. ವಿದ್ಯಾರ್ಥಿಗಳ ವಯಸ್ಸು ಇನ್ನೂ ತಿಳಿದುಬಂದಿಲ್ಲ.

ಘಟನಾ ಸ್ಥಳದ ತನಿಖೆಯನ್ನು ಪೂರ್ಣಗೊಳಿಸದ ಕಾರಣ ಅಧಿಕಾರಿಗಳು ಇನ್ನೂ ಸಾವಿನ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ ಎಂದು ಆಂತರಿಕ ಸಚಿವ ಅನುಟಿನ್ ಚಾರ್ನ್‌ವಿರಾಕುಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹೊತ್ತಿ ಉರಿದ ಶಾಲಾ ಬಸ್, ಶಿಕ್ಷಕರು ಸೇರಿ 25 ವಿದ್ಯಾರ್ಥಿಗಳು ಸಜೀವ ದಹನ