ನಾಗಮಂಗಲ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ, ಗಲಭೆ | IN PICS

Online Team

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ.

ನಾಗಮಂಗಲದ ರಾಷ್ಟ್ರೀಯ ಹೆದ್ದಾರಿಯ ಮೈಸೂರು ರಸ್ತೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ದರ್ಗಾ ಬಳಿ ಆಗಮಿಸುತ್ತಿದ್ದಂತೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ.

ಈ ವೇಳೆ ಎರಡೂ ಗುಂಪಿನ ನಡುವೆ ಘರ್ಷಣೆ ಉಂಟಾಗಿ ಪರಸ್ಪರರು ಕಲ್ಲು ತೂರಾಟ ಮಾಡಿ, ಬಾಟಲಿಗಳನ್ನು ಎಸದುಕೊಂಡಿದ್ದಾರೆ. ಈ ವೇಳೆ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ ನಡೆಸಿದ್ದಾರೆ.

ಮೆರವಣಿಗೆ ನಡೆಸುತ್ತಿದ್ದ ಯುವಕರ ಗುಂಪು ಪೊಲೀಸ್ ಠಾಣೆ ಬಳಿಗೆ ತೆರಳಿ ಅಲ್ಲೇ ಗಣೇಶ ಮೂರ್ತಿಯನ್ನಿಟ್ಟು ಪ್ರತಿಭಟನೆ ನಡೆಸಿದರು.

ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್​ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಘಟನೆಯಲ್ಲಿ 13 ಬೈಕ್ ಹಾಗೂ ಅಂಗಡಿಗಳು ಸುಟ್ಟು ಭಸ್ಮವಾಗಿದ್ದು, ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 50 ಜನರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು 6 ಎಫ್ಐಆರ್ ಗಳನ್ನು ಹಾಕಿದ್ದಾರೆ.

ನಾಗಮಂಗಲ ಈಗ ಬೂದಿ ಮುಚ್ಚಿದ ಕೆಂಡ: 46 ಮಂದಿ ಬಂಧನ