ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ನಿರ್ಮಲಾ ಸೀತಾರಾಮನ್, ಹೂಕಟ್ಟಿದ ಸುಧಾ ಮೂರ್ತಿ!

Srinivasa Murthy VN

ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು ಅವರಿಗೆ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಸಾಥ್ ನೀಡಿದ್ದರು.

ಸುಧಾ ಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಕೃಷ್ಣನ ಸಮ್ಮುಖದಲ್ಲಿರುವ ಚಂದ್ರ ಶಾಲೆಯಲ್ಲಿ ಕುಳಿತು ಇಬ್ಬರೂ ಹೂವುಗಳನ್ನು ಪೋಣಿಸಿ ಮಾಲೆ ಮಾಡಿ ಅರ್ಪಿಸಿದರು.

ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಮನೆಯಿಂದಲೇ ತಂದ ಹಿಡಿ ಅವಲಕ್ಕಿಯನ್ನು ಶ್ರೀಪಾದರ ಮೂಲಕ ಕಾಣಿಕೆ ಸಮೇತವಾಗಿ ಶ್ರೀಕೃಷ್ಣ ದೇವರಿಗೆ ಅರ್ಪಿಸಿದರು.

ಭೋಜನ ಶಾಲೆಯಲ್ಲಿ ಶ್ರಾವಣ ಶನಿವಾರದ ನಿಮಿತ್ತ ಒಂದು ಬಗೆಯ ಸಿಹಿ ತಿಂಡಿ ತಯಾರಿಸಲು ಸೌಟು ಹಿಡಿದು ಹಲ್ವಾ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು.

ನಿರ್ಮಲಾ ಸೀತಾರಾಮನ್‌, ಸುಧಾ ಮೂರ್ತಿಯವರು ಆಷಾಢ ಮಾಸದ ಹುಣ್ಣಿಮೆಯಂದು ನಡೆಸುವ ಹೊಸ್ತಿಲು ಪೂಜೆಯನ್ನು ನಡೆಸಿದರು.

ಆಷಾಢ ಮಾಸದ ಹುಣ್ಣಿಮೆಗೆ ಆಚರಿಸುವ ಹೊಸ್ತಿಲು ಬರೆಯುವ ಪೂಜೆಯ ನಿಮಿತ್ತ ಸಚಿವರು ಶ್ರೀಕೃಷ್ಣ ಮಠದ ಮುಖ್ಯದ್ವಾರ, ಸರ್ವಜ್ಞ ಪೀಠದ ದ್ವಾರದಲ್ಲಿ ಹೊಸ್ತಿಲು ಬರೆದು ಲಕ್ಷ್ಮೀ ಪೂಜೆ ನೆರವೇರಿಸಿದರು.

ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಸಚಿವರು ನವಗೃಹ ಕಿಂಡಿಯಲ್ಲಿ ಶ್ರೀಕೃಷ್ಣ ದೇವರ ಮಹಾಪೂಜೆಯನ್ನು ಕಂಡು ಅನಂತರ ಮುಖ್ಯಪ್ರಾಣ ಹಾಗೂ ಮಧ್ವಾಚಾರ್ಯರ ಪೂಜೆಯಲ್ಲಿ ಭಾಗವಹಿಸಿದರು.

ಕೃಷ್ಣನ ಸಮ್ಮುಖದಲ್ಲಿರುವ ಚಂದ್ರ ಶಾಲೆಯಲ್ಲಿ ಕುಳಿತು ಇಬ್ಬರೂ ಹೂವುಗಳನ್ನು ಪೋಣಿಸಿ ಮಾಲೆ ಮಾಡಿ ಅರ್ಪಿಸಿದರು. ಸುಧಾ ಮೂರ್ತಿ ಸ್ವತಃ ಹೂಮಾಲೆ ತಯಾರಿಸಿ ಕೃಷ್ಣನಿಗೆ ಅರ್ಪಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಸಾಮಾನ್ಯ ಗೃಹಣಿಯಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾದರು.

ಭೋಜನ ಶಾಲೆಯಲ್ಲಿ ದೇವರ ಬೆಳ್ಳಿ ಪಾತ್ರೆಗಳನ್ನು ಶುಚಿಗೊಳಿಸುವ ಕಾಯಕದಲ್ಲೂ ಪಾಲ್ಗೊಂಡು ನಿರ್ಮಲಾ ಸೀತಾರಾಮನ್ ಗಮನ ಸೆಳೆದರು.

ಉಡುಪಿ ಕೃಷ್ಣ ಮಠದಲ್ಲಿ ಸುಧಾಮೂರ್ತಿ ಮತ್ತು ನಿರ್ಮಲಾ ಸೀತಾರಾಮನ್
ಶ್ರೀಕೃಷ್ಣ ಮಠದಲ್ಲಿ ಹೂಕಟ್ಟಿದ Sudhamurthy!