ಜಮ್ಮು: ಹಠಾತ್ ಪ್ರವಾಹದಿಂದ ತತ್ತರ; ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ - Photos
Online Team
ಜಮ್ಮುವಿನಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ವೈಷ್ಣೋದೇವಿ ಮಾರ್ಗದಲ್ಲಿ ಒಂಬತ್ತು ಯಾತ್ರಿಕರು ಸೇರಿದಂತೆ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಸತತ ಮಳೆಯಿಂದ ದಾಖಲೆಯ 380 ಮಿಮೀ ಮಳೆಯಾಗಿದ್ದು, ಜಮ್ಮು ಪ್ರವಾಹದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ಜಮ್ಮು ಮತ್ತು ಪಠಾಣ್‌ಕೋಟ್‌ನಲ್ಲಿ ಹಠಾತ್ ಪ್ರವಾಹದ ನಡುವೆಯೂ ಕತ್ರಾದಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಮೂರು ಸೇನಾ ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ.
ಅಧ್ಕ್ವಾರಿಯ ಇಂದಪ್ರಸ್ಥ ಭೋಜನಾಲಯದ ಬಳಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ.
ಸೇತುವೆಗಳು ಕುಸಿದು ಬಿದ್ದು, ಮೊಬೈಲ್ ಟವರ್‌ಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ, ವಾಹನಗಳು ಅವಶೇಷಗಳಲ್ಲಿ ಸಿಲುಕಿ ಅಪಾರ ಪ್ರಮಾಣದ ಹಾನಿಯಾಗಿದೆ.
ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಗಳನ್ನು ಇಳಿಸಲಾಗಿದೆ ಮತ್ತು ಭೂಕುಸಿತದಲ್ಲಿ ಸಂತ್ರಸ್ತರ ಮೃತದೇಹಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ.
ಜಮ್ಮುವಿನಲ್ಲಿ ನಿರಂತರ ಮಳೆಯ ನಂತರ ತಾವಿ ನದಿಯ ನೀರಿನ ಮಟ್ಟ ಏರುತ್ತಿದ್ದಂತೆ ಜನರು ಅಲ್ಲಲ್ಲಿ ಹರಡಿರುವ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ.