ಗಾಯಕಿ ವಾರಿಜ ಶ್ರೀ ಜೊತೆ ರಘು ದೀಕ್ಷಿತ್ ಸಪ್ತಪದಿ- Photos
Srinivasa Murthy VN
ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಖ್ಯಾತ ಗಾಯಕಿ ವಾರಿಜ ಶ್ರೀ ಮತ್ತು ರಘು ಧೀಜೊತೆಗಿನ ಮದುವೆ ಫೋಟೋಗಳು ಇದೀಗ ವೈರಲ್ ಆಗುತ್ತಿವೆ.
50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರು ಗ್ರ್ಯಾಮಿ ನಾಮನಿರ್ದೇಶಿತ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರ ಜೊತೆ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಕುಟುಂಬಸ್ಥರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಇವರಿಬ್ಬರ ಮದುವೆ ಶಾಸ್ತ್ರೋಕ್ತವಾಗಿ ನೆರವೇರಿದೆ. ವಾರಿಜಶ್ರೀ ಅವರಿಗೆ ಈಗ 34 ವರ್ಷ ವಯಸ್ಸು.
ವಾರಿಜಶ್ರೀ ವೇಣುಗೋಪಾಲ್ ಅವರು ಗ್ರ್ಯಾಮಿ ನಾಮನಿರ್ದೇಶಿತ ಗಾಯಕಿ ಮತ್ತು ಕೊಳಲು ವಾದಕಿಯಾಗಿದ್ದು, ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದಾರೆ.
ಅಂದಹಾಗೆ 50 ವರ್ಷ ವಯಸ್ಸಿನ ರಘು ದೀಕ್ಷಿತ್ ಅವರಿಗೆ ಇದು 2ನೇ ಮದುವೆಯಾಗಿದ್ದು, ಈ ಮೊದಲು (2005) ಅವರು ಡ್ಯಾನ್ಸರ್ ಮಯೂರಿ ಉಪಾಧ್ಯ ಜೊತೆ ವಿವಾಹವಾಗಿದ್ದರು.
2019ರಲ್ಲಿ ಅವರಿಬ್ಬರು ವಿಚ್ಛೇದನ ಪಡೆದಿದ್ದರು. ಬಳಿಕ ವಾರಿಜಶ್ರೀ ಜೊತೆ ಒಡನಾಟ ಬೆಳೆದ ಬಳಿಕ ಮದುವೆ ಬಗ್ಗೆ ನಿರ್ಧರಿಸಿದರು.