Ramyashree GN
ವಿಟಮಿನ್ ಎ (ಬೀಟಾ-ಕ್ಯಾರೋಟಿನ್) ಮತ್ತು ವಿಟಮಿನ್ ಸಿಯಿಂದ ಸಮೃದ್ಧವಾಗಿರುವ ಕ್ಯಾರೆಟ್, ಶೀತ, ಕೆಮ್ಮು ಮತ್ತು ಜ್ವರದಿಂದ ರಕ್ಷಿಸುತ್ತದೆ.
ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಎ ಚರ್ಮದ ಕೋಶಗಳನ್ನು ಸರಿಪಡಿಸಲು ಮತ್ತು ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಬೀಟಾ-ಕ್ಯಾರೋಟಿನ್ ಮತ್ತು ಲ್ಯೂಟೀನ್ ಮತ್ತು ಜಿಯಾಕ್ಸಾಂಥಿನ್ ನಂತಹ ಉತ್ಕರ್ಷಣ ನಿರೋಧಕಗಳು ನಿಮ್ಮ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.
ಹೆಚ್ಚಿನ ಫೈಬರ್ ಅಂಶವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.
ಇದು ನೈಸರ್ಗಿಕ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರುವುದರಿಂದ ನಿಮ್ಮ ದೇಹಕ್ಕೆ ಶಕ್ತಿ ಮತ್ತು ಉಷ್ಣತೆಯ ಅನುಭವವನ್ನು ನೀಡುತ್ತವೆ. ಚಳಿಗಾಲದಲ್ಲಿನ ಆಯಾಸ ಮತ್ತು ಆಲಸ್ಯವನ್ನು ದೂರಮಾಡುತ್ತವೆ.
ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.
ಕಡಿಮೆ ಕ್ಯಾಲೋರಿಗಳು ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವುದರಿಂದ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.
ಇದರಲ್ಲಿರುವ ಹೆಚ್ಚಿನ ನೀರಿನ ಅಂಶವು ದೇಹವನ್ನು ಹೈಡ್ರೇಟ್ ಆಗಿಡಲು ನೆರವಾಗುತ್ತದೆ.