ಹುಗ್ಗಿ ವಿಶೇಷ

ಹುಗ್ಗಿ ವಿಶೇಷ
Updated on: 

ಮುದ್ಗಾನ್ನ ಎಂದರೆ ಹುಗ್ಗಿ. ಅಕ್ಕಿಯ ಎರಡರಷ್ಟು ಪ್ರಮಾಣ ಹೆಸರು ಬೇಳೆ, ಒಣಶುಂಠಿ, ಮೆಣಸು, ಜೀರಿಗೆ, ಪತ್ರೆ, ದಾಲ್ಚಿನ್ನಿ, ಜಾಜಿಕಾಯಿ, ಕೊಬ್ಬರಿ, ಲವಂಗ, ಉಪ್ಪು, ತುಪ್ಪ ಎಲ್ಲವನ್ನೂ ಕೂಡಿಸಿ ಬೇಯಿಸಿದ ಪದಾರ್ಥವೇ ಮುದ್ಗಾನ್ನ.

ಧನುರ್ಮಾಸದಲ್ಲಿ ದೇವರ ಪೂಜೆಗೆ, ನೈವೇದ್ಯ ಪ್ರಸಾದಕ್ಕೆ ಮುದ್ಗಾನ್ನವೇ ಏಕೆ? ಇದಕ್ಕೆ ನಾನಾ ಕಾರಣಗಳುಂಟು. ಮನುಷ್ಯ ಶುದ್ಧ ಸೋಮಾರಿ, ಶಾಸ್ತ್ರದ ಕಟ್ಟುಪಾಡುಗಳಿಲ್ಲವಾದರೆ ಮನುಷ್ಯ ಬಿಸಿಲು ಮೈ ಸೋಂಕುವವರೆಗೂ ಹೊದ್ದ ಕಂಬಳಿಯ ಮುಸುಕನ್ನು ಸರಿಸುತ್ತಲೇ ಇರಲಿಲ್ಲ. ಆದರೆ, ವಸ್ತುತಃ ಸೂರ್ಯೋದಯವಾದೊಡನೆ ಚಳಿ ಹೆಚ್ಚಾಗುತ್ತದೆ. ಆದ್ದರಿಂದಲೇ ಮೈ ಬೆಚ್ಚಗಾಗಿಸುವ ಹಾಗೂ ಚಳಿಯನ್ನು ಎದುರಿಸುವ ಸಾಮರ್ಥ್ಯ ಕೊಡುವ ಪವಿತ್ರ ಸಾತ್ವಿಕ ಆಹಾರ ಎಂದರೆ ಹುಗ್ಗಿ. ಚಳಿಗಾಲದಲ್ಲಿ ಚರ್ಮ ಒಡೆಯುವುದರಿಂದ ಚರ್ಮವನ್ನು ಸ್ನಿಗ್ಧಗೊಳಿಸುವ ಆಹಾರದ ಸೇವನೆ ತೀರಾ ಅವಶ್ಯ.  ಈ ಸಮಯದಲ್ಲಿ ಶರೀರದಲ್ಲಿ ಕೊಬ್ಬಿನ ಅಂಶ ಕಡಿಮೆಯಾಗುವುದರಿಂದಲೂ, ಧನುರ್ಮಾಸದಲ್ಲಿ ಹುಗ್ಗಿಯನ್ನು ಸೇವಿಸುವುದರಿಂದ ಕೊಬ್ಬಿನ ಅಂಶ ಹೆಚ್ಚಿ, ಶಾರೀರಿಕ ಸಮತೋಲನ ಕಾಪಾಡಿಕೊಳ್ಳಬಹುದು. ಹೀಗೆ ಧನುರ್ಮಾಸದಲ್ಲಿ ಹುಗ್ಗಿ ಸೇವನೆ ವೈಜ್ಞಾನಿಕವಾಗಿಯೂ ಸಮಂಜಸ ಎಂಬುದು ಸ್ಪಷ್ಟ.
12 ರಾಶಿಗಳಿಗೂ ಸೂರ್ಯ ಸಂಚಾರ ಮಾಡುವಾಗ ಪ್ರಕೃತಿಯಲ್ಲಿ ವಿವಿಧ ರೀತಿಯಲ್ಲಿ ಬದಲಾವಣೆ ಉಂಟಾಗುತ್ತದೆ. ಧನುರ್ಮಾಸಕ್ಕೆ ಆತ ಕಾಲಿಟ್ಟಾಗ ಚಳಿ ಸ್ವಲ್ಪ ಹೆಚ್ಚಾಗಿಯೇ ಕಂಡುಬಂದು ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಗಳೂ ಇವೆ. ಧಾರ್ಮಿಕವಾಗಿ ಹೆಚ್ಚು ಪ್ರಾಮುಖ್ಯ ಪಡೆದ ಈ ಕಾಲದಲ್ಲಿ ದೇವಸ್ಥಾನಗಳಲ್ಲಿ ಮುಂಜಾನೆಯಲ್ಲೇ ಪೂಜಾ ಕೈಂಕರ್ಯಗಳು ನಡೆಯುತ್ತವೆ. ಈ ಬಾರಿ ಡಿ. 16ರಿಂದ ಧನುರ್ಮಾಸ ಪ್ರಾರಂಭವಾಗಿದ್ದು, ಇನ್ನೊಂದು ತಿಂಗಳು ಇರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com