ಆಷಾಡ ಮಾಸ ಶುಭವೋ, ಅಶುಭವೋ?

ಬಹುತೇಕ ಹಿಂದೂಗಳಲ್ಲಿ ಆಷಾಡ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿಬಿಟ್ಟಿದೆ. ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರು...
ಶಿವಪಾರ್ವತಿ
ಶಿವಪಾರ್ವತಿ
Updated on

ಬಹುತೇಕ ಹಿಂದೂಗಳಲ್ಲಿ ಆಷಾಡ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿಬಿಟ್ಟಿದೆ. ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರು ಅವು ಫಲ ನೀಡುವುದಿಲ್ಲ ಹೀಗಾಗಿ ಈ ಮಾಸದಲ್ಲಿ ಶುಭಕಾರ್ಯಗಳಿಗೆ ಮನ್ನಣೆ ಇಲ್ಲ. ಆದರೆ ಒಂದು ಮಾತು ಆಷಾಢ ಮಾಸ ಅಶುಭ ಮಾಸ ಎಂದು ಯಾವ ಶಾಸ್ತ್ರಗಳಲ್ಲೂ ಉಲ್ಲೇಖಿಸಿಲ್ಲ.

ಆಷಾಢ ಮಾಸ ಪ್ರಾರಂಭವಾದ ನಂತರ ಶುಭ ಕಾರ್ಯಗಳಾದ ಮದುವೆಯ ಮಾತುಕತೆ, ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ ನಿಷೇದವಾಗುವುದು. ಇದಕ್ಕೆ ಮುಖ್ಯವಾಗಿ ಕಾರಣ ನೂರಾರು. ವರ್ಷಗಳ ಹಿಂದೆ ಆಷಾಢ ಮಾಸದಲ್ಲಿ ಮಳೆಯ ಆರ್ಭಟ ಹೆಚ್ಚಿರುತ್ತಿತ್ತು. ಮನೆಯಿಂದ ಹೊರಗೆ ಹೋಗುವುದೇ ಬಹಳ ಕಷ್ಟಕರವಾಗಿರುತ್ತಿತ್ತು. ಈ ರೀತಿ ನಿರಂತರವಾದ ಮಳೆ, ಗಾಳಿಯಿಂದ ಸಂಚಾರಕ್ಕೆ ಅಡೆತಡೆ ಉಂಟಾಗುತ್ತಿತ್ತು. ಈ ಎಲ್ಲಾ ಕಾರಣಗಳಿಂದ ಹೊರಗಿನ ಕೆಲಸಗಳು ಕುಂಟಿತವಾಗುತ್ತಿದ್ದವು. ಹಾಗೂ ರೈತರಿಗೆ ಹೊಲ ಗದ್ದೆಗಳಲ್ಲಿ ವಿಪರೀತ ಕೆಲಸ ಕಾರ್ಯಗಳು ಇರುತ್ತಿತ್ತು. ಈ ಕಾರಣಗಳಿಂದ ಬೇರೆ ವ್ಯವಹಾರಕ್ಕೆ ಸಮಯವೇ ಸಿಗುತ್ತಿರಲಿಲ್ಲ. ಈ ಎಲ್ಲಾ ಕಾರಣಗಳಿಂದ ಆಷಾಢಮಾಸದಲ್ಲಿ ಶುಭ ಕಾರ್ಯ ಮಾಡಲು ಅನಾನುಕೂಲವಾಗಿದ್ದರಿಂದ ಶುಭಕಾರ್ಯ ಮಾಡುವುದನ್ನು ನಿಷೇಧಿಸಿದ್ದರು.

ಮದುವೆಯಾದ ಹೊಸ ವರ್ಷದಲ್ಲಿ ಅತ್ತೆ-ಸೊಸೆ ಆಷಾಢ ಮಾಸದಲ್ಲಿ ಕೂಡಿ ಒಂದೇ ಮನೆಯಲ್ಲಿ ವಾಸಿಸುವುದು ನಿಷೇಧ ಎಂದು ಕೆಲವು ಕಡೆ ಪದ್ಧತಿ ಇದೆ. ಆಷಾಢದಲ್ಲಿ ಮಳೆ ಹೆಚ್ಚು ಇರುವುದರಿಂದ ಹೊಲ ಗದ್ದೆಗಳಲ್ಲಿ ಮತ್ತು ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಕೆಲಸ ಕಾರ್ಯಗಳು ಹೆಚ್ಚಿರುತ್ತವೆ. ಅತ್ತೆಯಾದವರು ಸೊಸೆಗೆ ಹೆಚ್ಚು ಕೆಲಸದ ಒತ್ತಡ ತರಬಹುದು, ಇದರಿಂದ ಅವರಿಬ್ಬರಲ್ಲಿ ವೈಮನಸ್ಸುವುಂಟಾಗಿ ಜಗಳಕ್ಕೆ ಕಾರಣ ಆಗಬಹುದು ಎಂದು ಒಂದು ತಿಂಗಳ ಕಾಲ ತವರು ಮನೆಗೆ ಕಳಿಸುವ ಸಂಪ್ರದಾಯ ಬಂದಿರಬೇಕು.

ಆಷಾಢ ಮಾಸದ ಮಹತ್ವ
ಅಮರನಾಥದ ಹಿಮಲಿಂಗ ದರ್ಶನ ಪ್ರತಿ ವರ್ಷ ಆರಂಭವಾಗುವುದು ಈ ಸಮಯದಲ್ಲೇ. ಪ್ರಥಮ ಏಕಾದಶಿ ವ್ರತ ಆರಾಧನೆ ಬರುವುದು ಆಷಾಢದಲ್ಲಿ.
ಶಿವ ಪಾರ್ವತಿಗೆ ಅಮರತ್ವದ ರಹಸ್ಯ ಹೇಳಿರುವುದು, ಗಂಗೆ ಭೂಮಿಗೆ ಉತ್ತರಾಭಿಮುಖವಾಗಿ ಹರಿದು ಬಂದಿದ್ದು ಇದೇ ಮಾಸದಲ್ಲಿ. ಮಹಾ ಪತಿವ್ರತೆ ಅನುಸೂಯಾದೇವಿ ನಾಲ್ಕು ಸೋಮವಾರ ಶಿವ ವ್ರತ ಮಾಡಿದ್ದು ಇದೇ ಆಷಾಡದಲ್ಲಿ ಮಾಸದಲ್ಲಿ. ಆಷಾಡದ ಶುಕ್ರವಾರಗಳಲ್ಲಿ ಲಕ್ಷ್ಮಿ ಪೂಜೆಯನ್ನು ವಿಶೇಷವಾಗಿ ಆಚರಿಸುವರು.

ಈ ಮಾಸದಲ್ಲೇ ಇದೆಲ್ಲಾ ಆರಂಭವಾಗಿದ್ದು..
ಬಲಿ ಚಕ್ರವರ್ತಿ ಶಾಂಡಿಲ್ಯ ವ್ರತ ಪ್ರಾರಂಭ ಮಾಡಿದ ಎಂಬ ಉಲ್ಲೇಖವಿದೆ. ಇಂದ್ರನು ಗೌತಮರಿಂದ ಸಹ ಸಾಕ್ಷನಾಗು ಎಂಬ ಶಾಪ ಪಡೆದ ಹಾಗೂ ಅದರ ವಿಮೋಚನೆಗೆ ಆಷಾಢದಲ್ಲಿ ನಾಲ್ಕು ಸೋಮವಾರ ಸೋಮೇಶ್ವರ ಜಯಂತಿ ವ್ರತವನ್ನು ಮಾಡಿ ಶಾಪ ವಿಮೋಚನೆ ಪಡೆದಿರುವುದಾಗಿ ಪುರಾಣಗಳು ಹೇಳುತ್ತವೆ. ಸುಮಂಗಲಿಯರು ದೀರ್ಘಕಾಲದ ಮಾಂಗಲ್ಯ ಪಾಪ್ತಿಗಾಗಿ ಆಷಾಢ ಮಾಸದ ಅಮಾವಾಸ್ಯೆಯ ಸಂಜೆ ಜ್ಯೋತಿ ಭೀಮೇಶ್ವರ ವ್ರತವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಆಷಾಢ ಹುಣ್ಣಿಮೆ ದಿನ ಗುರು ಪೂರ್ಣಿಮೆಯನ್ನು ಎಲ್ಲಾ ಮಠ ಮಂದಿರಗಳಲ್ಲಿ ಆಚರಿಸಿ ಚಾತುರ್ಮಾಸ್ಯ ವ್ರತವನ್ನು ಪ್ರಾರಂಭ ಮಾಡುತ್ತಾರೆ. ಆಷಾಢದ ಶುಕ್ಲ ಪಕ್ಷದ ಪಂಚಮಿ ದಿನದಂದು ಅಮೃತ ಲಕ್ಷ್ಮೀ ವ್ರತವನ್ನು ಮಹಿಳೆಯರು ಭಕ್ತಿಯಿಂದ ಆಚರಿಸುತ್ತಾರೆ. ಈ ಎಲ್ಲಾ ಮಹತ್ವಗಳು ಆಷಾಢ ಮಾಸದಲ್ಲಿ ಇರುವುದರಿಂದ ಈ ಮಾಸವೂ ಸಹ ವಿಶೇಷವೇ ಆಗಿದೆ. ಇನ್ನೊಂದು ವಿಶೇಷ ಎಂದರೆ ಮೈಸೂರಿನ ಚಾಮುಂಡೇಶ್ವರಿ ದೇವಿಯ ಜನ್ಮ ದಿನ ಬರುವುದು ಈ ಮಾಸದಲ್ಲೇ. ಆಷಾಡ ಮಾಸದಲ್ಲೇ ಮುಸ್ಲಿಂರು ರೋಜಾ ಆಚರಿಸುವುದು.

- ವಿಶ್ವನಾಥ್. ಎಸ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com