ಗೋಕರ್ಣದಲ್ಲಿ 30 ತೀರ್ಥಗಳಿದ್ದು, ಕೋಟಿ ತೀರ್ಥ ಪ್ರಧಾನವಾದ್ದು. ಶಿವರಾತ್ರಿಯಲ್ಲಿ ಸಹಸ್ರಾರು ಭಕ್ತರು ಆಗಮಿಸಿ ಕೋಟಿತೀರ್ಥ ಸ್ನಾನ ಮಾಡಿ ಪುನೀತರಾಗುತ್ತದೆ. ಇದರ ಪಶ್ಚಿಮಕ್ಕೆ ನರಸಿಂಹ ದೇವಾಲಯವಿದೆ; ದಕ್ಷಿಣಕ್ಕೆ ಅಗಸ್ತ್ಯ, ಸುಮಿತ್ರಾ, ಗಂಗಾತೀರ್ಥಗಳೆಂಬ ಗುಹೆಗಳಿವೆ. ಶತಶೃಂಗದ ಮೇಲೆ ಗೋಗರ್ಭ ತೀರ್ಥ, ಬ್ರಹ್ಮಕಮಂಡಲ ತೀರ್ಥ ಮತ್ತು ಮಹೇಶ್ವರರಾರಣ್ಯಗಳಿವೆ. ಆ ಗುಡ್ಡದ ಕೆಳಗೆ ಮಾಲಿನಿ, ಸುಮಾಲಿನಿ, ಸೂರ್ಯ, ಚಂದ್ರ ಮತ್ತು ಅನಂತ ಎಂಬ ತೀರ್ಥಗಳಿವೆ. ದೇವಾಲಯದ ಪ್ರಾಕಾರದಲ್ಲಿ ಗೌರಿ ದೇವಿಯ ದೇವಾಲಯವೂ ಇದೆ. ಇಲ್ಲಿರುವ ಗೌರಿ ಅತ್ಯಂತ ಮನೋಹರವಾಗಿದೆ.