ಶ್ರೀರಾಮ ನವಮಿ ಹಬ್ಬದ ಮಹತ್ವವೇನು? ಆಚರಣೆ ಹೇಗೆ ಮಾಡಬೇಕು?

ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದ್ದು, ರಾಮನವಮಿ ಸಕಲ ಹಿಂದೂ ಧರ್ಮ ಸಂಜಾತರಿಗೂ ಭಾರತದಲ್ಲಿ ಒಂದು ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ.

Published: 01st April 2020 08:15 PM  |   Last Updated: 02nd April 2020 04:44 AM   |  A+A-


File photo

ಸಂಗ್ರಹ ಚಿತ್ರ

Posted By : manjula
Source : Online Desk

ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದ್ದು, ರಾಮನವಮಿ ಸಕಲ ಹಿಂದೂ ಧರ್ಮ ಸಂಜಾತರಿಗೂ ಭಾರತದಲ್ಲಿ ಒಂದು ಜನಪ್ರಿಯ ಧಾರ್ಮಿಕ ಹಬ್ಬವಾಗಿದೆ.

ಶ್ರೀರಾಮ ರಾಮಾಯಣದ ಕಥಾ ನಾಯಕನಾಗಿದ್ದು, ಆದಿಕಾಲದ ಭಾರತದ ಅಯೋಧ್ಯೆಯ ರಾಜನೆಂದು ಕರೆಯಲಾಗುತ್ತದೆ. ದಶರಥ ಮಹಾರಾಜ ಶ್ರೀರಾಮನ ತಂದೆಯಾಗಿದ್ದು, ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ರಾಮನವಮಿ ಹಬ್ಬವನ್ನು ಚೈತ್ರ ಮಾಸದ 9ನೇ ದಿನದಂದು ಆಚರಣೆ ಮಾಡಲಾಗುತ್ತದೆ. 

ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣವನ್ನು ಭಕ್ತಿ, ಶ್ರದ್ಧೆಗಳಿಂದ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. 

100%

ರಾಮನವಮಿ ಹಬ್ಬ ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ಈ ಹಬ್ಬವನ್ನು ದೇಶದಾದ್ಯಂತ ಬಹಳಷ್ಟು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಪ್ರಮುಖವಾಗಿ ಉತ್ತರ ಭಾರತದಲ್ಲಂತೂ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. 

ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ. 

100%

ಈ ದಿನ ದೇಶದ ಹಲವು ರಾಮ ಮಂದಿರಗಳಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತದೆ. ಈಗಿನ ಅಯೋಧ್ಯೆಯಲ್ಲಿ, ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನ ಪೂಜೆಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕರ್ನಾಟಕದಲ್ಲೂ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಕಛೇರಿಗಳನ್ನು ಆಯೋಜಿಸಲಾಗುತ್ತದೆ. ಕಾರ್ಯಕ್ರಮಗಳ್ಲಿ ಕರ್ನಾಟಕ ಹಾಗೂ ಇತರೆ ರಾಜ್ಯಗಳಿಂದ ಸಂಗೀತ ವಿದ್ವಾಂಸರು ಪಾಲ್ಗೊಳ್ಳುತ್ತಾರೆ. 

ಹಬ್ಬದ ದಿನದಂದು ಪ್ರತೀಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನ ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕ ಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ. ವಸುದೈವ ಕುಟುಂಬಕಂ ಅಂದರೆ ಇಡೀ ವಿಶ್ವವೇ ಒಂದು ಕುಟುಂಬ ಎಂಬುದನ್ನು ಜಗತ್ತಿಗೆ ಸಾರಿ ಹೇಳಲು ಇಂತಹ ಹಬ್ಬಗಳು ಮಹತ್ವಪೂರ್ಣವಾಗಿವೆ. 

ಹಬ್ಬದ ಆಚರಣೆ ಹೇಗೆ? 
ರಾಮ ಮನೆದೇವರು ಇರುವವರು ಹಬ್ಬವನ್ನು 9 ದಿನಗಳ ಕಾಲ ಆಚರಣೆ ಮಾಡುತ್ತಾರೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ನವಮಿವರೆಗೆ ರಾಮಾಯಣ ಪಾರಾಯಣ ಮಾಡಿ, ನವಮಿ ದಿನ ರಾಮ ಪಟ್ಟಾಭಿಷೇಕ ಪಾರಾಯಣ ಮಾಡಿ ಹಬ್ಬವನ್ನು ಪೂರ್ಣಗೊಳಿಸುತ್ತಾರೆ. ಹೀಗೆ 9 ದಿನದ ರಾಮನ ಉತ್ಸವ ಆಚರಿಸಲಾಗುತ್ತದೆ. 

100%

ರಾಮನವಮಿ ಆಚರಣೆ ಅತ್ಯಂತ ಸರಳವಾಗಿದೆ. ಸಾಮಾನ್ಯವಾಗಿ ರಾಮ ಪಟ್ಟಾಭಿಷೇಖ, ರಾಮ ಪಂಚಾಯತನದ ಪಟವನ್ನು ಇಟ್ಟು ಪೂಜೆ ಮಾಡುತ್ತಾರೆ, ಇದರಲ್ಲಿ ಶ್ರೀರಾಮನ ಜೊತೆದೆ ಎಲ್ಲಾ ಸಹೋದರರು ಇರುತ್ತಾರೆ. ಶ್ರೀರಾಮಚಂದ್ರನಿಗೆ ಷೋಡಶೋಪಚಾರದಿಂದ ಪೂಜೆ ಮಾಡಬೇಕು. ಪಾನಕ ಕೋಸಂಬರಿಗಳನ್ನು ನೈವೇದ್ಯ ಮಾಡಿ ಇತರರಿಗೆ ಹಂಚಲಾಗುತ್ತದೆ. ರಾಮನ ಭಜನೆ, ಹಾಡುಗಳಿಂದ ರಾಮನ ಧ್ಯಾನ ಮಾಡುತ್ತಾರೆ. ಮತ್ತೊಂದು ವಿಶೇಷವೆಂದರೆ, ರಾಮನಾಮ ಬರೆಯುವುದು. ರಾಮನಾಮ ಜಪಿಸಿದರೆ ರಾಮ ನಮ್ಮನ್ನು ಸಂರಕ್ಷಿಸುತ್ತಾನೆಂಬ ನಂಬಿಕೆ ಇದೆ. 

Stay up to date on all the latest ಭವಿಷ್ಯ-ಆಧ್ಯಾತ್ಮ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp