Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Nitin Gadkari

ಪಾಕ್ ವಿರುದ್ಧ ಜಲಾಸ್ತ್ರ ಪ್ರಯೋಗ! ನೆರೆರಾಷ್ಟ್ರಕ್ಕೆ ಹರಿವ ನೀರನ್ನು ಯಮುನೆಯತ್ತ ತಿರುಗಿಸುತ್ತೇವೆ ಎಂದ ಗಡ್ಕರಿ

CM Kumaraswamy says, With a good story, even a small budget film can succeed

ಉತ್ತಮ ಕಥೆ ಇದ್ದರೆ ಕಡಿಮೆ ಬಜೆಟ್ ಚಿತ್ರವೂ ಯಶಸ್ವಿಯಾಗುತ್ತದೆ: ಸಿಎಂ ಕುಮಾರಸ್ವಾಮಿ

Pakistan bans Hafiz Saeed

ಹಫೀಜ್ ಸಯೀದ್ ಜಮಾತ್-ಉದ್-ದವಾ, ಅದರ ಚಾರಿಟಿಗೆ ಪಾಕ್ ನಿಷೇಧ

Mulayam Singh Yadav, Akhilesh, Mayavati (File pic)

ಬಿಎಸ್ ಪಿ-ಎಸ್ ಪಿ ಮೈತ್ರಿಗೆ ಮುಲಾಯಂ ಕಿಡಿ: ರಹಸ್ಯ ಪತ್ರ ಕಳಿಸಲು ಟಿಕೆಟ್ ಆಕಾಂಕ್ಷಿಗಳಿಗೆ ಕರೆ

Pak gifts gold-plated assault rifle to Saudi Crown Prince

ಸೌದಿ ಯುವರಾಜನಿಗೆ ಚಿನ್ನ ಲೇಪಿತ ಗನ್ ಉಡುಗೊರೆ ನೀಡಿದ ಪಾಕ್

Audio tape case: K

ಆಪರೇಷನ್ ಕಮಲ ಆಡಿಯೋ ಪ್ರಕರಣ: ಬಿಎಸ್ ವೈ ಅರ್ಜಿ ಕುರಿತು ಇಂದು 'ಹೈ' ತೀರ್ಪು

Chris Gayle breaks record for maximum sixes in international cricket

ವೆಸ್ಟ್​ ಇಂಡೀಸ್​ ತಂಡದ ದೈತ್ಯ ದಾಂಡಿಗ ಕ್ರಿಸ್​ ಗೇಲ್​ ನಿಂದ ಒಂದೇ ಪಂದ್ಯದಲ್ಲಿ ಹಲವು ದಾಖಲೆ!

Kashmir issue unresolved because of Jawaharlal Nehru: Amit Shah

ಕಾಶ್ಮೀರ ಸಮಸ್ಯೆಗೆ ಜವಾಹರ್‌ ಲಾಲ್‌ ನೆಹರೂ ಕಾರಣ: ಅಮಿತ್‌ ಶಾ

India vs Australia: Hardik Pandya ruled out due to

ಭಾರತ-ಆಸ್ಟ್ರೇಲಿಯಾ ಸರಣಿ: ಹಾರ್ದಿಕ್ ಪಾಂಡ್ಯ ಅಲಭ್ಯ, ರವೀಂದ್ರ ಜಡೇಜಾ ಇನ್!

Navjot Singh Sidhu

ಪಾಕ್ ಪರ ಹೇಳಿಕೆ: ನವಜೋತ್ ಸಿಂಗ್ ಸಿಧುಗೆ ಮತ್ತೊಂದು ಹೊಡೆತ!

Samsung launches folding smartphone, first 5G handset

ಸ್ಯಾಮ್ ಸಂಗ್ ನಿಂದ ಫೋಲ್ಡೆಬಲ್​ ಸ್ಮಾರ್ಟ್​ ಫೋನ್ ಬಿಡುಗಡೆ, ಇದು ಮೊದಲ 5ಜಿ ಮೊಬೈಲ್

No issues related to seat sharing with congress, says CM HD Kumarswamy

ಎಸ್ಐಟಿ ತನಿಖೆಗೆ ಆತುರಬೇಡ , ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ

MLA Kampli Ganesh sent to judicial custody in brutal assault case

ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಕಂಪ್ಲಿ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ

ಮುಖಪುಟ >> ಭವಿಷ್ಯ-ಆಧ್ಯಾತ್ಮ

ರಥಸಪ್ತಮಿ: ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ

Illuminating Lord Venkateswara temple on the occasion of Ratha Saptami in Tirupati

“ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ...  ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

ಪಾಡ್ಯ- ಉಗಾದಿ ಪಾಡ್ಯ, ಬಿದಿಗೆ-ಭಾನು ಬಿದಿಗೆ, ತದಿಗೆ-ಅಕ್ಷ ತದಿಗೆ, ಚೌತಿ-ವಿನಾಯಕನ ಚೌತಿ. . . . ಹೀಗೆ ‘ಸಪ್ತಮಿ’ಯ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು. ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.

ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ. 

ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.  “ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆ” ಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ. ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ. 

ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು.  ಅದು ನಿತ್ಯ ನವೀನ.  ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ.  ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.  ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.  ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ  ಇಂದು (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಸೋಮವಾರ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್... 
ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ.  ‘ಆರೋಗ್ಯಂ ಭಾಸ್ಕರಾದಿಚ್ಛೇತ್’ ಅಂದರೆ ಸೂರ್ಯ ಆರೋಗ್ಯದಾಯಿ.  ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ.  ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.  

ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.  ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ.  ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.  

ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ. ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ. ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.  

108 ಸೂರ್ಯ ನಮಸ್ಕಾರ    

ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ. ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ. ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.  ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

ಪೌರಾಣಿಕ ಹಿನ್ನೆಲೆಯೇನು?    

ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ. ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮನನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ. ಈ ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು. ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು. ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ. ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ. ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ. ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ.

ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ. ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.  ಇನ್ನು, ‘ಭೂರ್ಭುವಸ್ವಃ'. . . ಎಂಬ ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

ಎಕ್ಕದೆಲೆಯ ಸ್ನಾನ    

ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು. ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.  ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವೇ?

-ಎಸ್. ಆಶಾ (ಅಂಕಿತಾ ಕಶ್ಯಪ್)
Posted by: PSN | Source: UNI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Ratha Saptami, Lord Venkateswara temple, Tirupati, ರಥ ಸಪ್ತಮಿ, ತಿರುಪತಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS