ರೇಲ್ವೆ ಬಜೆಟ್‌ನಲ್ಲಿ ರಾಜ್ಯಕ್ಕೆ ರು.1307 ಕೋಟಿ ಹಂಚಿಕೆ

ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅಳರು ಲೋಕಸಭೆಯಲ್ಲಿ ಇಂದು ಮಂಡಿಸಿದ ರೇಲ್ವೆ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ರು. 1307 ಕೋಟಿ ಹಂಚಿಕೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅಳರು ಲೋಕಸಭೆಯಲ್ಲಿ ಇಂದು ಮಂಡಿಸಿದ ರೇಲ್ವೆ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ರು. 1307 ಕೋಟಿ ಹಂಚಿಕೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಹಂಚಿಕೆಯ ವಿವರ ನೀಡಿದ ನೈಋತ್ಯ ರೇಲ್ವೆಯ ಪ್ರಧಾನ ವ್ಯವಸ್ಥಾಪಕ ಪಿ.ಕೆ ಸಕ್ಸೇನಾ ರಾಜ್ಯಕ್ಕೆ ರು. ರೇಲ್ವೆ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ರು. 1307 ಕೋಟಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಬಾರಿ ಪ್ರಯಾಣಿಕರ ಸೌಲಭ್ಯಕ್ಕೆ 35 ಕೋಟಿ ನಿಗದಿ ಮಾಡಲಾಗಿತ್ತು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 82 ಕೋಟಿ ನಿಗದಿ ಮಾಡಿದ್ದಾರೆ. ರಾಜ್ಯದ 34 ರೇಲ್ವೆ ನಿಲ್ದಾಣಗಳಲ್ಲಿ ಹಂತಹಂತವಾಗಿ ವೈಫೈ ಸೇವೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ರೇಲ್ವೆ ಸಿಗ್ನಲ್‌ಗಳ ವ್ಯವಸ್ಥೆಗೆ 22 ಕೋಟಿ, ರೋಲಿಂಗ್ ಸ್ಟಾಕ್‌ಗೆ ರು. 15 ಕೋಟಿ ನಿಗದಿ, ಸೇತುವೆ ನಿರ್ಮಾಣಕ್ಕೆ ರು.10 ಕೋಟಿ  ನಿಗದಿ, ಕಂಪ್ಯೂಟರೀಕರಣಕ್ಕೆ ರು. 3 ಕೋಟಿ ನಿಗದಿ,

ತಾಂತ್ರಿಕ ತೊಂದರೆಯಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಅಂಕೋಲಾ ರೇಲ್ವೆ ಕಾಮಗಾರಿಯನ್ನು ಪರಿಸರಕ್ಕೆ ಹಾನಿಯಾಗದಂತೆ ಮುಂದುವರಿಕೆ ಮಾಡಲಾಗುವುದು. ಈ ಸಂಬಂಧ ಕೇಂದ್ರ ಪರಿಸರ ಇಲಾಖೆಗೆ ವರದಿ ಸಲ್ಲಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com