ಮಹಿಳಾ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಭದ್ರತೆಗೆಗಾಗಿ ಪ್ರತಿ ರೈಲುಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಕೇಂದ್ರ ರೇಲ್ವೇ ಸಚಿವ ಸುರೇಶ್ ಪ್ರಭು ಅವರು ಹೇಳಿದ್ದಾರೆ...
ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ (ಸಾಂದರ್ಭಿಕ ಚಿತ್ರ)
ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ (ಸಾಂದರ್ಭಿಕ ಚಿತ್ರ)

ನವದೆಹಲಿ: ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಭದ್ರತೆಗೆಗಾಗಿ ಪ್ರತಿ ರೈಲುಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಕೇಂದ್ರ ರೇಲ್ವೇ ಸಚಿವ ಸುರೇಶ್ ಪ್ರಭು ಅವರು ಹೇಳಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ ಇಂದು 2015ರ ರೇಲ್ವೇ ಬಜೆಟ್ ಮಂಡಿಸಿದ ಅವರು, ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿವರಿಸಿದರು. ಪ್ರತಿಯೊಂದು ರೈಲುಗಳಲ್ಲಿಯೂ ಮಹಿಳಾ ಪ್ರಯಾಣಿಕರ ಸುರಕ್ಷತೆಯೆನ್ನು ದೃಷ್ಟಿಯಲ್ಲಿಟ್ಟುಕೊಂಡು ರೈಲುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಮತ್ತು ನಿರಂತರ 24 ಗಂಟೆಗಳ ಕಾಲ ಸೇವೆಯಲ್ಲಿರುವಂತೆ 182 ಟೋಲ್ ಫ್ರೀ ನಂಬರ್ ಅನ್ನು ಆ್ಯಕ್ಟಿವೇಟ್ ಮಾಡಲಾಗುವುದು.

ಇದಲ್ಲದೆ ದೇಶವ್ಯಾಪಿ ಕಾರ್ಯನಿರ್ವಹಿಸುವಂತಹ 138 ಸಹಾಯವಾಣಿಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು. ನಿಲ್ದಾಣಗಳಲ್ಲಿ ಭದ್ರತಾ ಸಿಬ್ಬಂದಿಗಳ ನಿಯೋಜಿಸಲಾಗುವುದು. ಬೋಗಿಗಳಲ್ಲಿ ಮೊಬೈಲ್ ಚಾರ್ಜರ್ ಗಳ ಸಂಖ್ಯೆ ಹೆಚ್ಚಿಸಲಾಗುವುದು. 8.50ಲಕ್ಷ ರೂಪಾಯಿ ಹೂಡಿಕೆಗೆ ರೈಲ್ವೆ ಇಲಾಖೆ ಯೋಜನೆ. ಮಹಿಳಾ ಸುರಕ್ಷತೆಗಾಗಿ ನಿರ್ಭಯಾ ಫಂಡ್ ಬಳಕೆ ಮಾಡಲಾಗುತ್ತದೆ ಎಂದು ಸುರೇಶ್ ಪ್ರಭು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com