
ನವದೆಹಲಿ: ವಿಶ್ವಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕರ್ನಾಟಕದ ಹಂಪಿಯನ್ನು ಅಭಿವೃದ್ಧಿ ಪಡಿಸಲು ಹೆಚ್ಚಿನ ಒತ್ತು ನೀಡಾಗುವುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೇಳಿದರು.
ಬಜೆಟ್ ನಲ್ಲಿ ಭಾರತದಲ್ಲಿರುವ ವಿಶ್ವಪಾರಂಪರಿಕ ಸ್ಥಳಗಳನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಅರುಣಾಚಲ ಪ್ರದೇಶದಲ್ಲಿ ಫಿಲ್ಮ್ ಸ್ಕೂಲ್ ಸ್ಥಾಪನೆ ಮಾಡುವುದಾಗಿ ಅರುಣ್ ಜೇಟ್ಲಿ ಹೇಳಿದರು. ಇನ್ನು ಪ್ರವಾಸಿ ತಾಣಗಳಲ್ಲಿ ಮಹಾರಾಷ್ಟ್ರದ ಎಲಿಫಂಟಾ ಗುಹೆ, ಗೋವಾದ ಚರ್ಚ್, ಜಮ್ಮು ಮತ್ತು ಕಾಶ್ಮೀರದ ಲೇಹ್ ಪ್ಯಾಲೆಸ್, ವಾರಣಾಸಿಯ ಟೆಂಪಲ್ ಟೌನ್, ಪಂಜಾಬ್ ನ ಐತಿಹಾಸಿಕ ಜಲಿಯನ್ ವಾಲಾಬಾಗ್ ಮತ್ತು ಕರ್ನಾಟಕದ ಹಂಪಿ ತಾಣಗಳು ಈಗಾಗಲೇ ವಿಶ್ವಪಾರಂಪರಿಕ ಪಟ್ಟಿಯಲ್ಲಿ ಸೇರಿವೆ. ಈ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ.
ಇನ್ನು ಇತ್ತೀಚೆಗಷ್ಟೇ ಉದಯವಾದ ನೂತನ ತೆಲಂಗಾಣ ರಾಜ್ಯದಲ್ಲಿರುವ ವಿಶ್ವಪಾರಂಪರಿಕ ತಾಣಗಳ ಅಭಿವೃದ್ಧಿಗೂ ಒತ್ತು ನೀಡಲಾಗುತ್ತದೆ ಮತ್ತು ದೇಶದೆಲ್ಲೆಡೆ ಪ್ರವಾಸೋದ್ಯಮ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ವೀಸಾ ಆನ್ ಅರೈವಲ್ ವ್ಯವಸ್ಥೆಯನ್ನು ವಿವಿಧ ಹಂತಗಳಲ್ಲಿ 150 ದೇಶಗಳಿಗೆ ವಿಸ್ತರಣೆ ಮಾಡಲಾಗುತ್ತದೆ. 25 ವಿಶ್ವ ಹೆರಿಟೇಜ್ ವೆಬ್ ಸೈಟ್ ಅಭಿವೃದ್ಧಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಐಐಟಿ ಸ್ಥಾಪನೆ ಮಾಡುವುದಾಗಿ ಅರುಣ್ ಜೇಟ್ಲಿ ಹೇಳಿದರು.
Advertisement