ಅಷ್ಟೇ ಅಲ್ಲದೇ, ಸಮದ್ರದಾಳದ ಅನಿಲ ನಿಕ್ಷೇಪ ಸಂಶೋಧನೆ ಯೋಜನೆಗೆ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆಯಲ್ಲಿ ಏರಿಳಿತದಿಂದಾಗಿ ಭಾರತದ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಈ ಹಿನ್ನಲೆಯಲ್ಲಿ ಇದನ್ನು ತಡೆಯಲು ಸಮುದ್ರದಾಳದ ಅನಿಲ ಸಂಶೋಧನೆಗೆ ಒತ್ತು ನೀಡಲಾಗುತ್ತದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.