ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಫೆಬ್ರುವರಿ 29ಕ್ಕೆ 2016-17ನೇ ಸಾಲಿನ ಬಜೆಟ್ ಮಂಡಿಸಲಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಜಯಂತ್ ಸಿನ್ಹಾ ಅವರು ಗುರುವಾರ ಹೇಳಿದ್ದಾರೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಫೆಬ್ರುವರಿ 29ರಂದು ಬೆಳಗ್ಗೆ ಸಂಸತ್ತಿನಲ್ಲಿ ಎರಡನೇ ಬಾರಿ ಎನ್‌ಡಿಎ ಸರ್ಕಾರದ ಬಜೆಟ್ ಮಂಡಿಸಲಿದ್ದಾರೆ.
ಜಯಂತ್ ಸಿನ್ಹಾ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಯನ್, ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನೊಳಗೊಂಡ ಜೇಟ್ಲಿ ನೇತೃತ್ವದ ತಂಡ 2016ನೇ ಸಾಲಿನ ಬಜೆಟ್ ಸಿದ್ಧಪಡಿಸುತ್ತಿದೆ.