ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?
ಬೆಂಗಳೂರು: 2017-18ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದು, ಪ್ರಮುಖವಾಗಿ ರಾಜಧಾನಿಯ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ನಲ್ಲಿ ಬೆಂಗಳೂರಿ ಸಿಕ್ಕ ವಿವಿಧ ಯೋಜನೆಗಳು ಹಾಗೂ ಬೆಂಗಳೂರಿನ ಕುರಿತ ಬಜೆಟ್ ನಲ್ಲಿನ ಅಂಶಗಳು ಇಂತಿವೆ.
1. ನಾಡ ಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 5 ಸಾವಿರ ನಿವೇಶನ ಹಂಚಿಕೆಗೆ ನಿರ್ಧಾರ
2. 4200 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಟ್ರೋ 2ನೇ ಹಂತ ಜಾರಿ. ಸಿಲ್ಕ್ ಬೋರ್ಡ್ ನಿಂದ ಕೆಆರ್ ಪುರಂ ಜಂಕ್ಷನ್ ವರೆಗೆ ನಮ್ಮ ಮೆಟ್ರೋ ಹೆಚ್ಚುವರಿ ಮಾರ್ಗ ನಿರ್ಮಾಣ.
3. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ವಿುನಲ್ ನಿರ್ಮಾಣಕ್ಕೆ ಕ್ರಮ
4. ಬೆಂಗಳೂರಿನ ಸಬ್ ಅರ್ಬನ್ ರೈಲ್ವೆ ಯೋಜನೆಗೆ 345 ಕೋಟಿ.
5. ಹೆಬ್ಬಾಳ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಾಣ. ಮೇಲ್ಸೆತುವೆ ಅಗಲಿಕರಣಕ್ಕೆ 88 ಕೋಟಿ ಅನುದಾನ. 690 ಕೋಟಿ ವೆಚ್ಚದಲ್ಲಿ ರಸ್ತೆಗಳ ಮೇಲ್ದರ್ಜೆಗೆ
6. ಬೆಂಗಳೂರು ನಗರದ ವಾಹನ ದಟ್ಟಣೆ ನಿಯಂತ್ರಿಸಲು ಕ್ರಮ. ಬೆಂಗಳೂರು, ಮಾಗಡಿ 50 ಕಿಮೀ ರಸ್ತೆ ಅಭಿವೃದ್ದಿ. 1455 ಕೋಟಿ ವೆಚ್ಚದಲ್ಲಿ 150 ಕಿಮೀ ರಸ್ತೆ ಅಭಿವೃದ್ದಿ.
7. "ಕೆ' ಶಿಪ್ 3 ಯೋಜನೆಯಡಿ 418.5 ಕಿಮೀ ರಸ್ತೆ ಅಭಿವೃದ್ದಿ. 5310 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ,
8. ಆರೋಗ್ಯಕರ, ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಲು ಬಾಡಿಗೆ ಸೈಕಲ್ ಒದಗಿಸುವ ಯೋಜನೆ ಜಾರಿ.
9. ಕೆಎಸ್ ಆರ್ ಟಿಸಿಗೆ 3,250 ಹೊಸ ಬಸ್ ಸೇರ್ಪಡೆ. ಬೆಂಗಳೂರು ನಗರಕ್ಕೆ 150 ಎಲೆಕ್ಟ್ರಿಕ್ ಬಸ್.
10. ಬೆಂಗಳೂರನ್ನು ವಿದ್ಯೂತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ರೂಪಿಸಲು ಚಿಂತನೆ
11. ಬಿಬಿಎಂಪಿ ವ್ಯಾಪ್ತಿಯಲ್ಲಿ 43 ಪ್ರಮುಖ ರಸ್ತೆಗಳ ಅಭಿವೃದ್ಧಿ. ಟೆಂಡರ್ ಶ್ಯೂರ್ ಮಾದರಿಯಲ್ಲಿ 25 ಕಿ.ಮೀ ರಸ್ತೆ ಅಭಿವೃದ್ದಿ
12. ಕೊಳಚೆ ಪ್ರದೇಶದ ನಿವಾಸಿಗಳಿಗೆ ಉಚಿತ ಕುಡಿಯುವ ನೀರಿನ ಯೋಜನೆ. ತಿಂಗಳಿಗೆ 10 ಸಾವಿರ ಲೀಟರ್ ಉಚಿತ ಕುಡಿಯುವ ನೀರು ವಿತರಣೆ.
13. ಜೈಲುಗಳಲ್ಲಿ ಕೈದಿಗಳ ವಿಚಾರಣೆಗಾಗಿ ವಿಡಿಯೋ ಕಾನ್ಫರೆನ್ಸ್
14. 200 ಕೋಟಿ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ಯೋಜನೆ.
15. ಬೆಂಗಳೂರಿನ ಕೋರಮಂಗಲ-ಚಲಘಟ್ಟ ಕಣಿವೆ ನೀರು ಸಂಸ್ಕರಿಸಲು ತೀರ್ಮಾನ, ಇದರಿಂದ ಸಿಗುವ 8 ಟಿಎಂಸಿ ನೀರನ್ನು ಎರಡು ಜಿಲ್ಲೆಗಳ 126 ಕೆರೆಗಳ ಭರ್ತಿಗೊಳಿಸಲು ಕ್ರಮ
16. ಅಮ್ಯಾ ಕ್ಯಾಂಟೀನ್ ಮಾದರಿಯಲ್ಲೇ ಬೆಂಗಳೂರಿನಲ್ಲಿ 198 ನಮ್ಮ ಕ್ಯಾಂಟೀನ್ ಸ್ಥಾಪನೆ
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ