ಸಿಎಂ ಸಿದ್ದರಾಮಯ್ಯರಿಂದ ಚುನಾವಣಾ ಬಜೆಟ್: ಆಯವ್ಯಯದಲ್ಲಿ ಆರೋಗ್ಯ ಇಲಾಖೆಗೆ ಸಿಕ್ಕಿದ್ದು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾಸೌಧದಲ್ಲಿ 2017-18ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾಸೌಧದಲ್ಲಿ 2017-18ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್‍ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಿರುವ ಅನುದಾನದ ಮಾಹಿತಿ ಇಲ್ಲಿದೆ. ಆರೋಗ್ಯ ಇಲಾಖೆಗೆ ಒಟ್ಟು ಬಜೆಟ್ ನಲ್ಲಿ 5118 ಕೋಟಿ ರು ಅನುದಾನ ನೀಡಲಾಗಿದೆ. 
ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ ತಲಾ 25 ಕೋಟಿ ವೆಚ್ಚದಲ್ಲಿ 5 ಸೂಪರ್ ಸ್ಪೆಷಾಲಿಸಿ ಆಸ್ಪತ್ರೆ ಸ್ಥಾಪನೆ. ಮಂಗಳೂರು ವೆನ್ಲಾಕ್ ಆಸ್ಪತ್ರೆ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ, 15 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ದೂರು ಇರುವ ಗ್ರಾಮಗಳಲ್ಲಿ 150 ಆರೋಗ್ಯ ವಿಸ್ತರಣಾ ಚಿಕಿತ್ಸಾಲಯ ಸ್ಥಾಪನೆ.
10 ರಿಂದ 15 ಕಿ.ಮೀ ಸುತ್ತಳತೆಯಲ್ಲಿ 35 ಸಾವಿರ ಜನಸಂಖ್ಯೆಗೆ ಒಂದರಂತೆ ಆಂಬುಲೆನ್ಸ್ ಸೇವೆ. 64 ಸಂಚಾರಿ ಆರೋಗ್ಯ ಘಟಕಗಳ ಆರಂಭ. ಎಸ್‍ಇ/ಎಸ್‍ಟಿ ಜನಸಂಖ್ಯೆ ಹೊಂದಿರುವ ಗ್ರಾಮಗಳ ಜನರ ಆರೋಗ್ಯ ಸೇವೆಗೆ 25.34ಕೋಟಿ ಅನುದಾನ. ಬೆಳಗಾವಿಯ ಲಸಿಕಾ ಸಂಸ್ಥೆಯ ಆವರಣದಲ್ಲಿ 5 ಕೋಟಿ ವೆಚ್ಚದಲ್ಲಿ ಆಯುಷ್ ಔಷಧ ತಯಾರಿಕಾ ಕೇಂದ್ರಗಳ ಸ್ಥಾಪನೆ.
4.5 ಕೋಟಿ ವೆಚ್ಚದಲ್ಲಿ 150 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಶವಾಗಾರ ನಿರ್ಮಾಣ.
ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಗಳ ಸಂಯೋಜಿತ ಆಯುಷ್ ಆಸ್ಪತ್ರೆಗಳ ಸ್ಥಾಪನೆಗೆ 6 ಕೋಟಿ ರೂ. ರಾಜ್ಯದಲ್ಲಿ ಜನೌಷಧ ಔಷಧ ಮಳಿಗೆಗಳು ಮತ್ತು 200 ಜನರಿಕ್ ಔಷಧಿ ಮಳಿಗೆಗಳ ಸ್ಥಾಪನೆ
ಕಲಬುರಗಿ, ಮೈಸೂರು, ಬೆಳಗಾವಿಯಲ್ಲಿ 250 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 310 ಕೋಟಿ ರೂ. ಅನುದಾನ, ಇಂದಿರಾನಗರದಲ್ಲಿ 35 ಕೋಟಿ ವೆಚ್ಚದಲ್ಲಿ ಕರ್ನಾಟಕ ಇನ್ಸ್ ಸ್ಟಿಟ್ಯೂಟ್ ಆಫ್ ಎಂಡೋಕ್ರೈನಾಲಿಜಿಯ ಹೊಸ ಆಸ್ಪತ್ರೆ. ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ 5 ಕೋಟಿ ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋದನಾ ಕೇಂದ್ರ ಘಟಕ ಸ್ಥಾಪನೆ.
ಮಿಂಟೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ. ಬೆಂಗಳೂರಿನ ಕ್ಷಯ ರೋಗ ಆಸ್ಪತ್ರೆ ಆವರಣದಲ್ಲಿ 10 ಕೋಟಿ ವೆಚ್ಚದಲ್ಲಿ ಚರ್ಮರೋಗ ಸಂಸ್ಥೆ ಸ್ಥಾಪನೆಗೆ ಅನುಮೋದನೆ. 16, 500 ನರ್ಸ್ ಗಳಿಗೆ ಕಂಪ್ಯೂಟರ್ ಟ್ಯಾಬ್ ನೀಡಲಾಗುವುದು. ಆರೋಗ್ಯಕರ, ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೊಳಿಸಲು ಬಾಡಿಗೆ ಸೈಕಲ್ ಒದಗಿಸುವ ಯೋಜನೆ ಜಾರಿ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com