ರಾಮಕೃಷ್ಣ ಹೆಗ್ಡೆ ಬಳಿಕ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯರದ್ದು!

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ 12ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಎರಡನೇ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ 12ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದ್ದಾರೆ. 
ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರಿನಲ್ಲಿದೆ. ಹೆಗಡೆ ಅವರು  ದಿವಂಗತ ಎಸ್ ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ವೇಳೆ ಆರು ಬಾರಿ ಮತ್ತು ತಾವೇ ಮುಖ್ಯಮಂತ್ರಿಯಾಗಿದ್ದಾಗ 7 ಬಾರಿ ಬಜೆಟ್ ಮಂಡಿಸಿದ್ದು ಒಟ್ಟಾರೆ 13 ಬಾರಿ ಬಜೆಟ್ ಮಂಡಿಸಿದ್ದಾರೆ. 
ಇನ್ನು ಎಂ.ವೈ ಘೋರ್ಪಡೆ ಅವರು ಏಳು ಬಾರಿ ಬಜೆಟ್ ಮಂಡಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರು ಬಾರಿ ಬಜೆಟ್ ಮಂಡಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com