ಎ.1ರಿಂದ 3 ಲಕ್ಷಕ್ಕಿಂತ ಹೆಚ್ಚು ನಗದು ವರ್ಗಾವಣೆ ನಿಷೇಧ: ಅರುಣ್ ಜೇಟ್ಲಿ

ನಿಷೇಧದ ನಂತರ ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು...
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ನವದೆಹಲಿ: ನಿಷೇಧದ ನಂತರ ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಎಪ್ರಿಲ್ 1ರಿಂದ ಎಲ್ಲಾ ರೀತಿಯ ಮೂರು ಲಕ್ಷಕ್ಕಿಂತ ಹೆಚ್ಚು ನಗದು ವರ್ಗಾವಣೆಯನ್ನು ನಿಷೇಧಿಸುವುದಾಗಿ ಬುಧವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಕಪ್ಪು ಹಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡ ನೀಡಿದ್ದ ಶಿಫಾರಸಿನ ಆಧಾರದ ಮೇಲೆ ನಗದು ವರ್ಗಾವಣೆ ಮಿತಿಯನ್ನು ಮೂರು ಲಕ್ಷಕ್ಕೆ ನಿಗದಿ ಮಾಡಲಾಗಿದೆ ಎಂದು ಜೇಟ್ಲಿ ತಮ್ಮ 2017-18ರ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ.
ಮೂರು ಲಕ್ಷಕ್ಕಿಂತ ಹೆಚ್ಚು ನಗದು ವರ್ಗಾವಣೆಯನ್ನು ನಿಷೇಧಿಸಲಾಗಿದೆ ಎಂದು ಅವರು ಜೇಟ್ಲಿ ಹೇಳಿದ್ದಾರೆ.
ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಂ.ಬಿ.ಶಾ ನೇತೃತ್ವದ ವಿಶೇಷ ತನಿಖಾ ತಂಡ ತನ್ನ ಐದನೇ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com