ಅಭಿವೃದ್ಧಿ, ಬಡವರ ಹಾಗೂ ರೈತರ ಪಾಲಿನ ಬಜೆಟ್: ಪ್ರಧಾನಿ ಮೋದಿ

ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರು ಮಂಡನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಜೇಟ್ಲಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರು ಮಂಡನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಜೇಟ್ಲಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ.

ಬಜೆಟ್ ಮಂಡನೆ ಮುಕ್ತಾಯಗೊಂಡ ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ಭವಿಷ್ಯ ಆಧಾರಿತ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಾರಿಯ ಬಜೆಟ್ ಕೂಡ ಗ್ರಾಮೀಣ ಅಭಿವೃದ್ಧಿ, ಬಡವರ ಹಾಗೂ ರೈತರಿಗಾಗಿ ಮುಡಿಪಾಗಿರಲಾಗಿದೆ. ಅಲ್ಲದೆ ಪ್ರಸಕ್ತ ವರ್ಷದ ಬಜೆಟ್ ಸಣ್ಣ ಪ್ರಮಾಣ ವ್ಯವಹಾರಗಳಿಗೆ ಉತ್ತೇಜನ ನೀಡಲಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕಕ್ಕೆ ಸಹಾಯ ಮಾಡಲಿದೆ. ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ನಮ್ಮ ಧ್ಯೇಯ ಬಜೆಟ್ ಮೂಲಕ ಪ್ರತಿಬಿಂಬಿತವಾಗಿದೆ ಎಂದು ಹೇಳಿದ್ದಾರೆ.

ಮಹಿಳಾ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಇದಲ್ಲದೆ, ವಸತಿ , ಶಿಕ್ಷಣ, ವ್ಯವಹಾರ, ಟೆಕ್ಸ್ ಟೈಲ್ ತೆರಿಗೆಗಳ ವಲಯಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು, ಇದರಿಂದ ಪ್ರತಿಯೊಬ್ಬರ ಕನಸು ಬಜೆಟ್ ನಲ್ಲಿ ಪೂರ್ಣಗೊಳಿಸಲಾಗಿದೆ.

ರೈತರ ಆದಾಯವನ್ನು ದುಪ್ಪಟ್ಟು ಮಾಡುವುದು ನಮ್ಮ ಉದ್ದೇಶವಾಗಿತ್ತು. ಪ್ರತೀಯೊಂದು ಕ್ಷೇತ್ರದ ಕಡೆಗೂ ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆರ್ಥಿಕ ಸಚಿವರ ತಂಡದ ಪ್ರತೀಯೊಬ್ಬ ಸದಸ್ಯನಿಗೂ ಮೆಚ್ಚಿಗೆ ವ್ಯಕ್ತಪಡಿಸಬೇಕಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com