ವಿಷಯುಕ್ತ ನೊರೆ ಉಗುಳುತ್ತಿರುವ ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿದರೂ ಯಾವುದೇ ಪ್ರಯೋಜನೆ ಆಗಿಲ್ಲ. ಬೆಳ್ಳಂದೂರು ಕೆರೆಯಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಆ ಪ್ರದೇಶದ ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಈಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಕೆರೆ ನಿರ್ವಹಣೆಗಾಗಿ ಬಿಡಿಎಗೆ 50 ಕೋಟಿ ರುಪಾಯಿ ಅನುದಾನ ನೀಡುತ್ತಿದ್ದು, ಇನ್ನುಮುಂದಾದರೂ ಬೆಂಕಿ ಕಾಣಿಸಿಕೊಳ್ಳದಂತೆ ಮತ್ತು ವಿಷಪೂರಿತ ನೊರೆ ಕಾಣಿಸಿಕೊಳ್ಳದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಬಿಡಿಎ ಮೇಲಿದೆ.