ಕರ್ನಾಟಕ ಬಜೆಟ್ 2018: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ

2018ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: 2018ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಯುವ ಸಬಲೀಕರಣ & ಕ್ರೀಡೆ ಇಲಾಖೆಗೆ 237 ಕೋಟಿ ರೂ. ಹಣವನ್ನು  ಮೀಸಲಿಡಲಾಗಿದೆ. ಪ್ರಮುಖವಾಗಿ ದಸರಾದಲ್ಲಿ ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ 7 ಕೋಟಿ ರೂ. ಮೀಸಲಿಡುವುದಾಗಿ ಸಿಎಂ ಹೇಳಿದ್ದಾರೆ.
ಉಳಿದಂತೆ ಮಹಿಳಾ ಕ್ರೀಡಾಪಟುಗಳಿಗೂ ಆದ್ಯತೆ ನೀಡಲಾಗಿದ್ದು,  ಮಹಿಳಾ ಕ್ರೀಡಾಪಟುಗಳಿಗೆ ರಾಜ್ಯದ 5 ಜಿಲ್ಲೆಗಳಲ್ಲಿ ಸುಸಜ್ಜಿತ ಪ್ರತ್ಯೇಕ ಮಹಿಳಾ ವಸತಿ ನಿಲಯ ಸ್ಥಾಪಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಪ್ರಸ್ತುತ ಇರುವ ವಸತಿ  ನಿಲಯಗಳನ್ನು ಮೇಲ್ದರ್ಜೆಗೆ ಏರಿಸಲು ನಿಧಿ ಮೀಸಲಿಟ್ಟಿದ್ದು, ಯುವಜನರಿಗೆ ಶಿಕ್ಷಣ, ಉದ್ಯೋಗ ಮಾಹಿತಿಗೆ ಯುವ ಸಹಾಯವಾಣಿ ಆರಂಭಿಸುವುದಾಗಿ ಹೇಳಿದ್ದಾರೆ. 
ಇನ್ನು ಇದೇ ಮೊದಲ ಬಾರಿಗೆ ಎಂಬಂತೆ ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಲು ನಿರ್ಧರಿಸಲಾಗಿದ್ದು, ಬೆಂಗಳೂರಿನ ದೇವನಹಳ್ಳಿ, ಹೆಚ್ಎಸ್ಆರ್ ಲೇಔಟ್, ತಾವರೆಕೆರೆ, ವರ್ತೂರಿನಲ್ಲಿ ಸುಮಾರು  20 ಕೋಟಿ  ವೆಚ್ಚದಲ್ಲಿ ಆಧುನಿಕ ಕ್ರೀಡಾ ಸೌಲಭ್ಯ ಕೇಂದ್ರಗಳನ್ನು ನಿರ್ಮಾಣ ಮಾಡಲಾಗುತ್ತದೆ. ಅಂತೆಯೇ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನಕ್ಕಾಗಿ ಕರ್ನಾಟಕ ಕುಸ್ತಿ ಹಬ್ಬ ಘೋಷಣೆ ಮಾಡಲಾಗಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೊರಾಂಗಣ  ಜಿಮ್ ಸೌಕರ್ಯ ಕಲ್ಪಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com